AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಂತು ‘ಅನುಬಂಧ ಅವಾರ್ಡ್ಸ್’; 10 ವರ್ಷಗಳ ಸಂಭ್ರಮಕ್ಕೆ ಹೆಚ್ಚಲಿದೆ ಅದ್ದೂರಿತನ

10 ವರ್ಷ ಅನ್ನೋದು ಪ್ರಮುಖ ಮೈಲಿಗಲ್ಲು. ಈ ಕಾರಣಕ್ಕೆ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಈ ಬಾರಿ ಸಖತ್ ಅದ್ದೂರಿಯಾಗಿ ನೆರವೇರಲಿದೆ ಎಂದು ತಿಳಿದು ಬಂದಿದೆ.

ಮತ್ತೆ ಬಂತು ‘ಅನುಬಂಧ ಅವಾರ್ಡ್ಸ್’; 10 ವರ್ಷಗಳ ಸಂಭ್ರಮಕ್ಕೆ ಹೆಚ್ಚಲಿದೆ ಅದ್ದೂರಿತನ
ಅನುಬಂಧ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 07, 2023 | 10:24 AM

Share

ಕಲರ್ಸ್ ಕನ್ನಡ ವಾಹಿನಿ ಸಾಕಷ್ಟು ಹೆಸರು ಮಾಡಿದೆ. ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿದ ಖ್ಯಾತಿ ಈ ವಾಹಿನಿಗೆ ಸಲ್ಲಿಕೆ ಆಗುತ್ತದೆ. ಸದ್ಯ ಕಲರ್ಸ್ ಕನ್ನಡದಲ್ಲಿ ಹಲವು ಒಳ್ಳೊಳ್ಳೆಯ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಧಾರಾವಾಹಿಗಳಲ್ಲಿ ನಟಿಸಿದ ಎಲ್ಲರಿಗೂ ಒಂದು ಕುಟುಂಬದ ಭಾವನೆ ಮೂಡಿದೆ. ಈ ಭಾವನೆಯನ್ನು ಮತ್ತಷ್ಟು ಗಟ್ಟಿ ಮಾಡುವ ಉದ್ದೇಶದಿಂದ ಆರಂಭವಾಗಿದ್ದೇ ‘ಅನುಬಂಧ ಅವಾರ್ಡ್ಸ್’ (Anubandha Awards) ಕಾರ್ಯಕ್ರಮ. ಈ ಅವಾರ್ಡ್ಸ್​ಗೆ ಈಗ 10 ವರ್ಷಗಳ ಸಂಭ್ರಮ. ದಶಕಗಳ ಕಾಲ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಕಲರ್ಸ್ ಕನ್ನಡ ವಾಹಿನಿ ನಡೆದುಕೊಂಡು ಬಂದಿದೆ.

ಸಿನಿಮಾ ಜಗತ್ತು ಸಾಕಷ್ಟು ವಿಸ್ತಾರವಾಗಿದೆ. ಅಲ್ಲಿ ಪ್ರತಿ ವರ್ಷ ಅವಾರ್ಡ್​ಗಳನ್ನು ನೀಡಲಾಗುತ್ತದೆ. ಅದೇ ರೀತಿ ಕಿರುತೆರೆ ಜಗತ್ತು ಕೂಡ ವಿಸ್ತಾರವಾಗಿ ಬೆಳೆದಿದೆ. ಕಲರ್ಸ್ ಕನ್ನಡ ವಾಹಿನಿ ದಶಕಗಳ ಹಿಂದೆ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಆರಂಭಿಸಿತು. ಈ ವಾಹಿನಿಯಲ್ಲಿ ಪ್ರಸಾರ ಕಾಣುವ ಎಲ್ಲಾ ಧಾರಾವಾಹಿಗಳನ್ನು ಇಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ.

ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ಅತ್ತೆ, ಅತ್ಯುತ್ತಮ ಸೊಸೆ, ಅತ್ಯುತ್ತಮ ವಿಲನ್ ಹೀಗೆ ಹಲವು ವಿಭಾಗಗಳನ್ನು ಮಾಡಲಾಗಿದೆ. ಮೊದಲು ನಾಮಿನೇಷನ್ ಪ್ರಕ್ರಿಯೆ ನಡೆಯುತ್ತದೆ. ಆ ಬಳಿಕ ವೋಟ್ ಮಾಡೋಕೆ ಅವಕಾಶ ಇರುತ್ತದೆ. ನಂತರ ಅವಾರ್ಡ್​ ಫಂಕ್ಷನ್ ದಿನ ವಿನ್ನರ್​ಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಬಳಿಕ ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತದೆ.

10 ವರ್ಷ ಅನ್ನೋದು ಪ್ರಮುಖ ಮೈಲಿಗಲ್ಲು ಎಂದು ಅನೇಕರು ಪರಿಗಣಿಸಿದ್ದಾರೆ. ಈ ಕಾರಣಕ್ಕೆ ‘ಅನುಬಂಧ ಅವಾರ್ಡ್ಸ್’ ಕಾರ್ಯಕ್ರಮ ಈ ಬಾರಿ ಸಖತ್ ಅದ್ದೂರಿಯಾಗಿ ನೆರವೇರಲಿದೆ ಎಂದು ತಿಳಿದು ಬಂದಿದೆ. ಸದ್ಯ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಪ್ರೋಮೋ ಹಂಚಿಕೊಂಡಿದೆ. ‘10 ವರ್ಷಗಳ ಅನುಬಂಧ. ಅನುಬಂಧ ಅವಾರ್ಡ್ಸ್​- 2023’ ಎಂದು ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ. ಈ ಕಾರ್ಯಕ್ರಮ ಯಾವಾಗ ನಡೆಯಲಿದೆ ಎಂಬ ಮಾಹಿತಿಯನ್ನು ವಾಹಿನಿಯವರು ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: Megha Shetty: ಕಲರ್ಸ್​ ಕನ್ನಡದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾದ ನಟಿ ಮೇಘಾ ಶೆಟ್ಟಿ

ಕಲರ್ಸ್ ಕನ್ನಡದಲ್ಲಿ ‘ಭಾಗ್ಯಲಕ್ಷ್ಮೀ’ ಹಾಗೂ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಗಳು ಗಮನ ಸೆಳೆಯುತ್ತಿವೆ. ‘ಕುಸುಮಾಗೆ ಅತ್ಯುತ್ತಮ ಅತ್ತೆ ಹಾಗೂ ಭಾಗ್ಯನಿಗೆ ಅತ್ಯುತ್ತಮ ಸೊಸೆ ಪ್ರಶಸ್ತಿ ಸಿಗೋದು ಪಕ್ಕಾ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ‘ಕನ್ನಡತಿ’ ಧಾರಾವಾಹಿ ಪೂರ್ಣಗೊಂಡಿದೆ. ಹರ್ಷ ಹಾಗೂ ಭುವಿ ಕಾಂಬಿನೇಷನ್​ನ ಜನರು ಇಷ್ಟಪಟ್ಟಿದ್ದರು. ಈ ಬಾರಿ ಅವರು ಅವಾರ್ಡ್​​ ಕಾರ್ಯಕ್ರಮದಲ್ಲಿ ಇರುವುದಿಲ್ಲ. ಇದು ಅನೇಕರಿಗೆ ಬೇಸರ ಮೂಡಿಸಿದೆ. ‘ಮಿಸ್ ಯೂ ಭುವಿ’ ಎಂಬ ಕಮೆಂಟ್​ಗಳು ಬಂದಿವೆ. ‘ಗಿಣಿ ರಾಮ’ ಜೋಡಿಯನ್ನು ಕೆಲವರು ಮಿಸ್ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!