Nitesh Pandey Death News: ಕಿರುತೆರೆ ನಟ ನಿತೇಶ್ ಪಾಂಡೆ ನಿಧನ; ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾವಿದ

ಇತ್ತೀಚೆಗೆ ಹಿಂದಿ ಕಿರುತೆರೆಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟರು. ಬಳಿಕ ವೈಭವಿ ಉಪಾಧ್ಯಾಯ ಕೊನೆಯುಸಿರು ಎಳೆದರು. ಈಗ ನಿತೇಶ್ ಮೃತಪಟ್ಟಿದ್ದಾರೆ.

Nitesh Pandey Death News: ಕಿರುತೆರೆ ನಟ ನಿತೇಶ್ ಪಾಂಡೆ ನಿಧನ; ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾವಿದ
ನಿತೇಶ್
Follow us
ರಾಜೇಶ್ ದುಗ್ಗುಮನೆ
|

Updated on:May 24, 2023 | 10:31 AM

ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ (Nitesh Pandey) ಅವರು ಇಂದು (ಮೇ 24) ನಿಧನ ಹೊಂದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ನಿತೇಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಕೇವಲ ಕಿರುತೆರೆ ಮಾತ್ರವಲ್ಲದೆ ಹಿರಿತೆರೆಯ ಮೂಲಕವೂ ನಿತೇಶ್ ಪಾಂಡೆ ಫೇಮಸ್ ಆಗಿದ್ದರು. ಅಭಿಮಾನಿಗಳಿಗೆ ಈ ಸಾವಿನ ಸುದ್ದಿ ಸಾಕಷ್ಟು ದುಃಖ ತಂದಿದೆ.

1995ರಿಂದ ನಿತೇಶ್ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಧಾರಾವಾಹಿಗಳ ಜೊತೆ ಸಿನಿಮಾ ಕೂಡ ಮಾಡಿದ್ದಾರೆ. ‘ಅನುಪಮಾ’ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು. ‘ಪ್ಯಾರ್​ ಕ ದರ್ದ್​ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾ’ ಧಾರಾವಾಹಿಯಲ್ಲಿ ನಟಿಸಿ ಫೇಮಸ್ ಆದರು. ಈಗ ನಿತೇಶ್ ಏಕಾಏಕಿ ಮೃತಪಟ್ಟಿದ್ದು ಅನೇಕರಿಗೆ ಆಘಾತ ತಂದಿದೆ.

ನಿತೇಶ್ ಅವರ ಭಾವ, ನಿರ್ಮಾಪಕ ಸಿದ್ದಾರ್ಥ್ ನಗರ್ ಈ ಬಗ್ಗೆ ಮಾತನಾಡಿದ್ದಾರೆ. ‘ನಿತೇಶ್​ ಅವರು ಮೃತಪಟ್ಟಿದ್ದಾರೆ. ಅವರ ಪತ್ನಿ ಅರ್ಪಿತಾ ಪಾಂಡೆ ಶಾಕ್​ನಲ್ಲಿದ್ದಾರೆ. ಅವರ ತಂದೆ ಮೃತದೇಹ ತರಲು ತೆರಳಿದ್ದಾರೆ. ನನ್ನ ಸಹೋದರಿ ಅರ್ಪಿತಾ ಜೊತೆ ನನಗೆ ಮಾತನಾಡಲೂ ಸಾಧ್ಯವಾಗುತ್ತಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು

ಇತ್ತೀಚೆಗೆ ಹಿಂದಿ ಕಿರುತೆರೆಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟರು. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದಾದ ಬೆನ್ನಲ್ಲೇ ಮಂಗಳವಾರ ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಅವರು ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದರು. ಅವರ ಸಾವು ಅನೇಕರಿಗೆ ಆಘಾತ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Wed, 24 May 23

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!