AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮ ಜೊತೆ ಇರುವ ಸಂಬಂಧ ಎಂಥದ್ದು? ಮೌನ ಮುರಿದ ಅನುಷಾ ರೈ

ಅನುಷಾ ರೈ ಹಾಗೂ ಧರ್ಮ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಇದು ಅನೇಕರ ಕಣ್ಣು ಕುಕ್ಕಿದೆ. ಇದೇ ಕಾರಣ ಇಟ್ಟುಕೊಂಡು ಇವರನ್ನು ನಾಮಿನೇಟ್ ಮಾಡುವ ಕೆಲಸ ಕೂಡ ಆಗಿದೆ. ಇದು ಅನುಷಾಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ಅನುಷಾ ಅವರು ಈ ಬಗ್ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡುತ್ತಿದ್ದಾರೆ.

ಧರ್ಮ ಜೊತೆ ಇರುವ ಸಂಬಂಧ ಎಂಥದ್ದು? ಮೌನ ಮುರಿದ ಅನುಷಾ ರೈ
ಅನುಷಾ-ಧರ್ಮ
ರಾಜೇಶ್ ದುಗ್ಗುಮನೆ
|

Updated on: Nov 05, 2024 | 7:26 AM

Share

ನಟಿ ಅನುಷಾ ರೈ ಹಾಗೂ ಧರ್ಮ ಕೀರ್ತಿರಾಜ್ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದರು. ಇದರಿಂದ ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಇಬ್ಬರೂ ಈ ಗೆಳೆತನ ಬಿಗ್ ಬಾಸ್ ಮನೆಯಲ್ಲೂ ಮುಂದುವರಿದಿದೆ. ಇದೇ ವಿಚಾರ ಇಟ್ಟುಕೊಂಡು ಕೆಲವರು ನಾಮಿನೇಟ್ ಮಾಡಿದ್ದೂ ಇದೆ. ಈಗ ಅನುಷಾ ಅವರು ತಮ್ಮ ಹಾಗೂ ಧರ್ಮ ಮಧ್ಯೆ ಇರುವ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.

ಅನುಷಾ ರೈ ಹಾಗೂ ಧರ್ಮ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಇದು ಅನೇಕರ ಕಣ್ಣು ಕುಕ್ಕಿದೆ. ಇದೇ ಕಾರಣ ಇಟ್ಟುಕೊಂಡು ಇವರನ್ನು ನಾಮಿನೇಟ್ ಮಾಡುವ ಕೆಲಸ ಕೂಡ ಆಗಿದೆ. ಇದು ಅನುಷಾಗೆ ಬೇಸರ ಮೂಡಿಸಿದೆ. ಈ ಕಾರಣಕ್ಕೆ ಅನುಷಾ ಅವರು ಈ ಬಗ್ಗೆ ಸ್ಪಷ್ಟನೆ ಕೊಡುವ ಕೆಲಸ ಮಾಡುತ್ತಿದ್ದಾರೆ.

ಕಳೆದ ವೀಕೆಂಡ್​ನಲ್ಲಿ ಹನುಮಂತ ಅವರು ಈ ಬಗ್ಗೆ ಮಾತನಾಡಿದ್ದರು. ಸುದೀಪ್ ಎದುರೇ ಅನುಷಾ ಹಾಗೂ ಧರ್ಮ ಜೊತೆಗೆ ಆಪ್ತತೆಯ ಕಾರಣವನ್ನು ನೀಡಿದ್ದರು. ಅವರಿಬ್ಬರೂ ಕ್ಲೋಸ್ ಆಗಿರುತ್ತಾರೆ ಎಂದು ಹೇಳಿದರು. ಇದು ಅನುಷಾ ಕೋಪಕ್ಕೆ ಕಾರಣ ಆಗಿದೆ. ಈ ವಿಚಾರವಾಗಿ ಅವರು ಸ್ಪಷ್ಟನೆ ನೀಡುತ್ತಿದ್ದಾರೆ.

‘ನಾನು ಧರ್ಮ ಫ್ರೆಂಡ್ಸ್ ಅಷ್ಟೇ. ಯಾಕೆ ಎಲ್ಲರೂ ನಮ್ಮನ್ನು ಬೇರೆ ರೀತಿಯಲ್ಲಿ ನೋಡುತ್ತೀರಿ’ ಎಂದು ಅನುಷಾ ಅವರು ಮನೆಯಲ್ಲಿ ಕೆಲವರನ್ನು ಕೇಳಿದ್ದಾರೆ. ಇದೇ ವಿಚಾರ ವೀಕೆಂಡ್​ನಲ್ಲಿ ಹೇಳಿದ್ದಕ್ಕೆ ಅನುಷಾ ಈ ಮೊದಲು ಸುದೀಪ್ ಅವರಿಂದ ಪಾಠ ಹೇಳಿಸಿಕೊಂಡಿದ್ದರು.

ಇದನ್ನೂ ಓದಿ: ಉರಿಯುವ ಬೆಂಕಿಗೆ ತುಪ್ಪ; ಗುಟ್ಟಾಗಿ ನಡೆದ ಮಾತುಕತೆ ರಟ್ಟು ಮಾಡಿ ಜಗಳ ತಂದಿಟ್ಟ ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಹಲವರ ಎಲಿಮಿನೇಷನ್ ಆಗಿದೆ. ಕಳೆದ ವಾರ ಮಾನಸಾ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಇದನ್ನು ಅನೇಕರು ನಿರೀಕ್ಷೆ ಮಾಡಿದ್ದರು. ಮಾನಸಾ ಹಾಗೂ ಅನುಷಾ ಮಧ್ಯೆ ಕೊನೆಯಲ್ಲಿ ಯಾರು ಉಳಿದುಕೊಳ್ಳುತ್ತಾರೆ ಎನ್ನುವ ಪ್ರಶ್ನೆ ಇತ್ತು. ಅನುಷಾ ಸೇವ್ ಆಗಿ ಮಾನಸಾ ಹೊರ ಹೋಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ