AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025ರಲ್ಲಿ ಅನುಶ್ರೀ ಮದುವೆ; ಹೊಸ ಸುದ್ದಿ ಕೊಟ್ಟ ಆ್ಯಂಕರ್

ಜೀ ಕನ್ನಡದ ಕುಟುಂಬ ಅವಾರ್ಡ್ಸ್‌ನಲ್ಲಿ ಅನುಶ್ರೀ ಅವರ ಮದುವೆಯ ಬಗ್ಗೆ ಚರ್ಚೆ ನಡೆಯಿತು. ಅನುಶ್ರೀ ಅವರು ತಮ್ಮ ಮದುವೆ ಯೋಜನೆಗಳ ಬಗ್ಗೆ ಮಾತನಾಡಿ, ಮದುವೆ ಆಗುವ ಬಯಕೆಯನ್ನು ವ್ಯಕ್ತಪಡಿಸಿದರು. ಯೂಟ್ಯೂಬ್‌ನಲ್ಲಿ ಹಬ್ಬುತ್ತಿರುವ ಊಹಾಪೋಹಗಳನ್ನು ಅವರು ನಿರಾಕರಿಸಿದರು.

2025ರಲ್ಲಿ ಅನುಶ್ರೀ ಮದುವೆ; ಹೊಸ ಸುದ್ದಿ ಕೊಟ್ಟ ಆ್ಯಂಕರ್
ಅನುಶ್ರೀ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 30, 2024 | 7:40 AM

Share

ಆ್ಯಂಕರ್ ಅನುಶ್ರೀ ಅವರು ಕಿರುತೆರೆ ಲೋಕದಲ್ಲಿ, ಆ್ಯಂಕರಿಂಗ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಕೆಲವು ಸಿನಿಮಾ ಕೂಡ ಮಾಡಿದ್ದಾರೆ. ಅವರ ಖ್ಯಾತಿ ಸಾಕಷ್ಟು ಹೆಚ್ಚಿದೆ. ಹೀಗಿರುವಾಗಲೇ ಅವರ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಅವರ ಮದುವೆ ಫಿಕ್ಸ್ ಆಗಿದೆ ಎಂದು ಕೆಲವು ಯೂಟ್ಯೂಬರ್ಗಳು ಆಗಾಗ ವಿಡಿಯೋ ಮಾಡಿದ್ದೂ ಇದೆ.  ಜೀ ಕನ್ನಡದ ‘ಕುಟುಂಬ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.

ಜೀ ಕನ್ನಡ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಆ್ಯಂಕರ್ ಅಕುಲ್ ಅವರು ಅನುಶ್ರೀ ಬಾಯ್​ಫ್ರೆಂಡ್​ನ ಸ್ಟೇಜ್ ಮೇಲೆ ಕರೆಸುತ್ತಿದ್ದೇವೆ ಎಂದರು. ಮ್ಯೂಸಿಕ್ ಕೂಡ ಬಂತು. ಆದರೆ, ಯಾರೂ ಬರಲೇ ಇಲ್ಲ. ‘ಈ ರೀತಿ ಮಾಡಬೇಕು ಎಂದುಕೊಂಡಿದ್ದೆವು. ಆ ವ್ಯಕ್ತಿಗೆ ಬರಬೇಡ ಎಂದು ಅನು ಹೇಳಿದರು. ನಿಮ್ಮ ಖಾಸಗಿತನಕ್ಕೆ ಒತ್ತುಕೊಟ್ಟು ಅವರನ್ನು ಕರೆಸಿಲ್ಲ’ ಎಂದರು ಅಕುಲ್.

ಅನುಶ್ರೀ ಮದುವೆ ವಿವಾರವಾಗಿ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಗಳು ಹರಿದಾಡಿದ್ದು ಇದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ನನ್ನ ಮದುವೆ ಚಿಂತೆ ನನ್ನ ಮನೆಯವರಿಗಿಂತ ಯೂಟ್ಯೂಬರ್ಗಳಿಗೆ ಇದೆ. ಪ್ರತಿ ವಾರ ಯಾರು ಸಿಂಗಲ್ ಇದ್ದಾರೆ ಅವರ ಜೊತೆ ನನ್ನ ಮದುವೆ ಮಾಡಿಸಿದ್ದಾರೆ’ ಎಂದರು ಅನುಶ್ರೀ.

‘ಎಲ್ಲ ಹುಡಿಗಿಯರಂತೆ ನನಗೂ ಮದುವೆ ಆಗಬೇಕು ಎಂದಿದೆ. ನನಗೂ ಬಾಳ ಸಂಗಾತಿ ಬೇಕು ಎಂದಿದೆ. ಎಲ್ಲದಕ್ಕೂ ಸಮಯ ಬರಬೇಕು. ಸರಿಯಾದ ಟೈಮ್ ಅಲ್ಲಿ ಸರಿಯಾದ ವ್ಯಕ್ತಿ ಬರಬೇಕು. ನಾನು ಮದುವೆ ಆಗಬೇಕು ಎಂದು ಮನಸ್ಸು ಮಾಡಬೇಕಿತ್ತು. ಈವರೆಗೆ ಮಾಡಿರಲಿಲ್ಲ. ಈಗ ಮಾಡಿದ್ದೇನೆ. ಮುಂದಿನ ವರ್ಷ ಒಳ್ಳೆಯ ಹುಡುಗ ಸಿಕ್ಕರೆ ಮದುವೆ ಆಗುತ್ತೇನೆ. ಆ ವ್ಯಕ್ತಿ ಬರಲಿ ಎಂದು ಕಾಯುತ್ತೇನೆ. ಬಂದರೆ ನಾನು ಅವರನ್ನು ನಿಮ್ಮ ಮುಂದೆ ತಂದು ನಿಲ್ಲಿಸುತ್ತೇನೆ’ ಎಂದರು ಅವರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ನೀವಿಲ್ಲದೆ…. ಅಪ್ಪು ನೆನೆದು ಭಾವುಕ ಸಾಲು ಹಂಚಿಕೊಂಡ ಅನುಶ್ರೀ

ಅನುಶ್ರೀ ಅವರು ಲವ್ ಮ್ಯಾರೇಜ್ ಆಗ್ತಾರಾ ಅಥವಾ ಅವರದ್ದು ಅರೇಂಜ್ ಮ್ಯಾರೇಜ್ ಎಂಬ ಪ್ರಶ್ನೆ ಮೂಡಿದೆ. ಈ ವಿಚಾರ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಅವರು ಆ್ಯಂಕರಿಂಗ್ ಜೊತೆ ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದು ಅಲ್ಲಿ ಅನೇಕ ಸೆಲೆಬ್ರಿಟಿಗಳ ಸಂದರ್ಶನ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:38 am, Wed, 30 October 24

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ