AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Sarja Remuneration: ‘ದಳಪತಿ 67’ನೇ ಚಿತ್ರಕ್ಕೆ ಅರ್ಜುನ್ ಸರ್ಜಾ, ದಳಪತಿ ವಿಜಯ್ ಪಡೆದ ಸಂಭಾವನೆ ಇಷ್ಟೊಂದಾ?

ದಳಪತಿ 67ನೇ ಸಿನಿಮಾದಲ್ಲಿ ದೊಡ್ಡ ತಾರಾ ಬಳಗ ಇದೆ. ಸಂಜಯ್ ದತ್​, ಗೌತಮ್​ ಮೆನನ್, ನಿವಿನ್ ಪೌಳಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಕೂಡ ಇದ್ದಾರೆ.

Arjun Sarja Remuneration: ‘ದಳಪತಿ 67’ನೇ ಚಿತ್ರಕ್ಕೆ ಅರ್ಜುನ್ ಸರ್ಜಾ, ದಳಪತಿ ವಿಜಯ್ ಪಡೆದ ಸಂಭಾವನೆ ಇಷ್ಟೊಂದಾ?
ವಿಜಯ್-ಅರ್ಜುನ್ ಸರ್ಜಾ
TV9 Web
| Edited By: |

Updated on: Dec 26, 2022 | 11:04 AM

Share

‘ವಾರಿಸು’ ಸಿನಿಮಾ (Varisu Movie) ರಿಲೀಸ್​ಗೆ ರೆಡಿ ಇದೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡ ಈ ಸಿನಿಮಾ ಜನವರಿ 12ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ದಳಪತಿ ವಿಜಯ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಇದಾದ ಬಳಿಕ ದಳಪತಿ ವಿಜಯ್ (Thalapathy VIjay) ‘ದಳಪತಿ 67’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ವಿಲನ್ ರೋಲ್ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ದಳಪತಿ 67ನೇ ಸಿನಿಮಾದಲ್ಲಿ ದೊಡ್ಡ ತಾರಾ ಬಳಗ ಇದೆ. ಸಂಜಯ್ ದತ್​, ಗೌತಮ್​ ಮೆನನ್, ನಿವಿನ್ ಪೌಳಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಕೂಡ ಇದ್ದಾರೆ. ಈ ಚಿತ್ರಕ್ಕಾಗಿ ಅವರು  4.5-5 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಜಯ್ ದತ್ ಅವರು ಈ ಚಿತ್ರಕ್ಕಾಗಿ 10 ಕೋಟಿ ರೂ. ಚಾರ್ಜ್ ಮಾಡಿದ್ದಾರೆ. ದಳಪತಿ ವಿಜಯ್ ಅವರು ಈ ಸಿನಿಮಾಗಾಗಿ 120 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಜನವರಿ ವೇಳೆ ಸಿನಿಮಾ ಸೆಟ್ಟೇರಲಿದೆ. ಚೆನ್ನೈನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯಲಿದೆ. ಪ್ರಮುಖ ಭಾಗದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯಲಿದೆ. ‘ದಳಪತಿ 67’ ಬಜೆಟ್ 200 ಕೋಟಿ ರೂಪಾಯಿ ಮೀರಿದೆ ಎನ್ನಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. 2023ರಲ್ಲೇ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ವಾರಿಸು’ ಸಿನಿಮಾದ ಪ್ರಚಾರದಲ್ಲಿ ದಳಪತಿ ವಿಜಯ್ ಬ್ಯುಸಿ ಆಗಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿದೆ. ಅವುಗಳ ಜತೆ ‘ವಾರಿಸು’ ಸಿನಿಮಾ ಸ್ಪರ್ಧೆ ಮಾಡಬೇಕಿದೆ. ಈ ಮೊದಲು ತೆರೆಗೆ ಬಂದ ‘ಬೀಸ್ಟ್’ ಸಿನಿಮಾ ‘ಕೆಜಿಎಫ್ 2’ ಚಿತ್ರದ ಎದುರು ಸೋತಿತ್ತು. ಈ ಕಾರಣಕ್ಕೆ ಅವರು ಗೆಲುವು ಕಾಣಲೇಬೇಕಿದೆ. ‘ವಾರಿಸು’ ಸಿನಿಮಾ ತೆರೆಗೆ ಬಂದ ನಂತರದಲ್ಲಿ 67ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ