‘ವಾರಿಸು’ ಸಿನಿಮಾ (Varisu Movie) ರಿಲೀಸ್ಗೆ ರೆಡಿ ಇದೆ. ನೂರಾರು ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧಗೊಂಡ ಈ ಸಿನಿಮಾ ಜನವರಿ 12ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ದಳಪತಿ ವಿಜಯ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಇದಾದ ಬಳಿಕ ದಳಪತಿ ವಿಜಯ್ (Thalapathy VIjay) ‘ದಳಪತಿ 67’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ವಿಲನ್ ರೋಲ್ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.
ದಳಪತಿ 67ನೇ ಸಿನಿಮಾದಲ್ಲಿ ದೊಡ್ಡ ತಾರಾ ಬಳಗ ಇದೆ. ಸಂಜಯ್ ದತ್, ಗೌತಮ್ ಮೆನನ್, ನಿವಿನ್ ಪೌಳಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಕೂಡ ಇದ್ದಾರೆ. ಈ ಚಿತ್ರಕ್ಕಾಗಿ ಅವರು 4.5-5 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಜಯ್ ದತ್ ಅವರು ಈ ಚಿತ್ರಕ್ಕಾಗಿ 10 ಕೋಟಿ ರೂ. ಚಾರ್ಜ್ ಮಾಡಿದ್ದಾರೆ. ದಳಪತಿ ವಿಜಯ್ ಅವರು ಈ ಸಿನಿಮಾಗಾಗಿ 120 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಜನವರಿ ವೇಳೆ ಸಿನಿಮಾ ಸೆಟ್ಟೇರಲಿದೆ. ಚೆನ್ನೈನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯಲಿದೆ. ಪ್ರಮುಖ ಭಾಗದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯಲಿದೆ. ‘ದಳಪತಿ 67’ ಬಜೆಟ್ 200 ಕೋಟಿ ರೂಪಾಯಿ ಮೀರಿದೆ ಎನ್ನಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. 2023ರಲ್ಲೇ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.
‘ವಾರಿಸು’ ಸಿನಿಮಾದ ಪ್ರಚಾರದಲ್ಲಿ ದಳಪತಿ ವಿಜಯ್ ಬ್ಯುಸಿ ಆಗಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿದೆ. ಅವುಗಳ ಜತೆ ‘ವಾರಿಸು’ ಸಿನಿಮಾ ಸ್ಪರ್ಧೆ ಮಾಡಬೇಕಿದೆ. ಈ ಮೊದಲು ತೆರೆಗೆ ಬಂದ ‘ಬೀಸ್ಟ್’ ಸಿನಿಮಾ ‘ಕೆಜಿಎಫ್ 2’ ಚಿತ್ರದ ಎದುರು ಸೋತಿತ್ತು. ಈ ಕಾರಣಕ್ಕೆ ಅವರು ಗೆಲುವು ಕಾಣಲೇಬೇಕಿದೆ. ‘ವಾರಿಸು’ ಸಿನಿಮಾ ತೆರೆಗೆ ಬಂದ ನಂತರದಲ್ಲಿ 67ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ