AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಮ್ಯಾ ಬಳಿಕ ಆಶಾ ಕಾರ್ಯಕರ್ತೆಯರಿಗೆ ಸುಮಲತಾ, ಕಾರುಣ್ಯಾ ರಾಮ್ ಬೆಂಬಲ

ಇಂದು (ನವೆಂಬರ್ 22) ನಟಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಕಾರ್ಯಕರ್ತೆಯರ ಪರವಾಗಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿಯನ್ನು ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತುರ್ತಾಗಿ ಪರಿಗಣಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ಬಳಿಕ ಆಶಾ ಕಾರ್ಯಕರ್ತೆಯರಿಗೆ ಸುಮಲತಾ, ಕಾರುಣ್ಯಾ ರಾಮ್ ಬೆಂಬಲ
Sumalatha Ambareesh1
ಮಂಜುನಾಥ ಸಿ.
|

Updated on: Nov 22, 2026 | 10:30 PM

Share

ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಕೆಲವಾರು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ. ನಿನ್ನೆ ನಟಿ ರಮ್ಯಾ ಅವರು ಸಹ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದರು. ಇಂದು (ನವೆಂಬರ್ 22) ನಟಿ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಕಾರ್ಯಕರ್ತೆಯರ ಪರವಾಗಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿಯನ್ನು ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತುರ್ತಾಗಿ ಪರಿಗಣಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಅನಿವಾರ್ಯ ಭಾಗ ಎಂದು ಪತ್ರದಲ್ಲಿ ಹೇಳಿರುವ ಸುಮಲತಾ, ತಾಯಿ-ಮಗುವಿನ ಆರೋಗ್ಯ, ಲಸಿಕೆ ಹಾಗೂ ಸಮುದಾಯ ಆರೋಗ್ಯ ಸೇವೆಗಳಲ್ಲಿ ಅವರು ನೀಡುತ್ತಿರುವ ಕೊಡುಗೆಗೆ ಮನ್ನಣೆ ಮತ್ತು ನ್ಯಾಯಯುತ ಪರಿಹಾರ ಎರಡೂ ಸಿಗಬೇಕು ಎಂದಿದ್ದಾರೆ. ಇಷ್ಟು ಮಹತ್ವದ ಜವಾಬ್ದಾರಿ ಹೊತ್ತ ಮಹಿಳೆಯರು ಕೇವಲ ₹5,000 ಮಾಸಿಕ ಗೌರವಧನದಲ್ಲಿ ಬದುಕಬೇಕೆಂದು ನಿರೀಕ್ಷಿಸುವುದು ತೀವ್ರ ಕಳವಳಕಾರಿ. ಅದನ್ನು ₹15,000ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಆರ್ಥಿಕ ಘನತೆಯ ಮೂಲಭೂತ ಮಟ್ಟಕ್ಕಾಗಿ ಮಾಡಿರುವ ಸಮಂಜಸ ಮನವಿ. ಜೀವನ ವೆಚ್ಚ ಹೆಚ್ಚಿರುವ ಬೆಂಗಳೂರಿನಂತಹ ನಗರದಲ್ಲಿ ಇಷ್ಟು ಅಲ್ಪ ಮೊತ್ತದಲ್ಲಿ ಬದುಕುವುದು ದೊಡ್ಡ ಸವಾಲು ಎಂದೂ ಅವರು ಹೇಳಿದ್ದಾರೆ. ‘ಇತರರ ಯೋಗಕ್ಷೇಮಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು, ತಮ್ಮದೇ ಮೂಲಭೂತ ಜೀವನೋಪಾಯಕ್ಕಾಗಿ ಹೋರಾಡುವ ಸ್ಥಿತಿ ಬರಬಾರದು’ ಎಂದು ಮುಖ್ಯಮಂತ್ರಿಗಳು ವೈಯಕ್ತಿಕವಾಗಿ ಮಧ್ಯಪ್ರವೇಶಿಸಬೇಕೆಂದು ಕೋರಿದ್ದಾರೆ.

ಇದನ್ನೂ ಓದಿ:ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಆರೋಗ್ಯ ಸಚಿವರ ಸಭೆ ವಿಫಲ, ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಕೆ

ಆಶಾ ಕಾರ್ಯಕರ್ತೆಯರು ನವೆಂಬರ್ 17ರ ಮಂಗಳವಾರದಿಂದ ಫ್ರೀಡಂ ಪಾರ್ಕ್‌ನಲ್ಲಿ ಹಗಲು-ರಾತ್ರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ತಿಂಗಳಿಗೆ 15,000 ನಿಗದಿತ ಗೌರವಧನಕ್ಕೆ ಆಗ್ರಹಿಸುತ್ತಿದ್ದಾರೆ. ಸಾವಿರಾರು ಮಹಿಳೆಯರು ಚಳಿಯನ್ನೂ ಲೆಕ್ಕಿಸದೆ ರಾತ್ರಿಯಿಡೀ ಪ್ರತಿಭಟನೆ ಮುಂದುವರಿಸಿದ್ದಾರೆ. ಬಾಕಿ ಪ್ರೋತ್ಸಾಹಧನ ಪಾವತಿ, ಉತ್ತಮ ನಿವೃತ್ತಿ ಸೌಲಭ್ಯ ಹಾಗೂ ಆಗಸ್ಟ್ 2026ರಲ್ಲಿ ಜಾರಿಗೆ ಬಂದ ‘ಸಮಸ್ತ’ ಮೊಬೈಲ್ ಆ್ಯಪ್ ಮೂಲಕ ಕಡ್ಡಾಯ ಕೆಲಸವನ್ನು ಕೈಬಿಡುವುದು ಅವರ ಇತರ ಬೇಡಿಕೆಗಳಾಗಿವೆ.

ನವೆಂಬರ್ 19ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು. ಧರಣಿ ಕೈಬಿಟ್ಟು ಸರ್ಕಾರವನ್ನು ನಂಬುವಂತೆ ಕೋರಿದ ಅವರು, ಗೌರವಧನ ಹೆಚ್ಚಳದ ಬೇಡಿಕೆಯನ್ನು ವಿಧಾನಸಭೆ ಅಧಿವೇಶನಕ್ಕೆ ಮುನ್ನ ಹಣಕಾಸು ಇಲಾಖೆ ಮತ್ತು ಸಚಿವ ಸಂಪುಟದ ಮುಂದೆ ಇಟ್ಟು ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು, ಆದರೆ ಕಾರ್ಯಕರ್ತೆಯರು ಲಿಖಿತ ಆದೇಶವನ್ನು ಕೋರುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
ತಾರಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಆಸ್ತಿ ವಿವಾದ
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
‘ಬಸವ ಮಂಟಪ’ವಿವಾದ: ಲೇಖಕ ರವಿ ಹಂಜ್​​ಗೆ ಶಾಕ್ ಕೊಟ್ಟ ಬೆಳಗಾವಿ ಪೊಲೀಸ್ರು
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಚಿನ್ನ ಖರೀದಿಸಬೇಡಿ ಎಂಬ ಕರೆಯನ್ನು ಪಾಲಿಸಿದ ಭಾರತೀಯರಿಗೆ ಮೋದಿ ಮೆಚ್ಚುಗೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಕೊಚ್ಚಿನ್ ಏರ್​ಪೋರ್ಟ್​ನಲ್ಲಿ ಲೇಖಕ ರವಿ ಹಂಜ್ ವಿಚಾರಣೆ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ಬರದಿಂದ ರೈತರು ಸಂಕಷ್ಟದಲ್ಲಿರುವಾಗ ಗದಗ ಡಿಸಿ ನಿವಾಸದಲ್ಲಿ ಮೋಜು-ಮಸ್ತಿ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 23ರಿಂದ 29ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್: ಸೂಪರ್ ಸಂಡೇ ಸಂಚಿಕೆಯಲ್ಲೂ ಮಂಜ, ಗಾನವಿ ಲವ್ ಸ್ಟೋರಿ ಚರ್ಚೆ
ಬಿಗ್ ಬಾಸ್: ಸೂಪರ್ ಸಂಡೇ ಸಂಚಿಕೆಯಲ್ಲೂ ಮಂಜ, ಗಾನವಿ ಲವ್ ಸ್ಟೋರಿ ಚರ್ಚೆ