AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು

ಬಿಗ್ ಬಾಸ್ ಕನ್ನಡ 12ರ ನಂತರವೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ಕಿತ್ತಾಟ ಮುಂದುವರಿದಿದೆ. ದೊಡ್ಮನೆಯಲ್ಲಿ ಆದ ಪರಚು ಗಾಯಗಳ ಬಗ್ಗೆ ಅಶ್ವಿನಿ ಈಗ ಚೈತ್ರಾ ಮೇಲೆ ಉದ್ದೇಶಪೂರ್ವಕ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಆಟವನ್ನು ಆಟವಾಗಿಯೇ ನೋಡುತ್ತೇನೆ ಎಂದಿದ್ದಾರೆ. ಹೆಣ್ಣು ಮಕ್ಕಳು ಜಗಳ ಆರಂಭಿಸಿದರೆ ಮುಗಿಯದು ಎಂಬ ಗಿಲ್ಲಿ ಮಾತು ನಿಜವಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು
ಅಶ್ವಿನಿ-ಗಿಲ್ಲಿ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Feb 13, 2026 | 7:37 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಪೂರ್ಣಗೊಂಡು ತಿಂಗಳೇ ಕಳೆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆಗಳು ನಿಂತಿಲ್ಲ. ಒಂದಲ್ಲಾ ಒಂದು ಕಾರಣಕ್ಕೆ ಈ ಸೀಸನ್ ಸ್ಪರ್ಧಿಗಳ ಹೆಸರು ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಬಾರಿ ಅಶ್ವಿನಿ ಗೌಡ ಹಾಗೂ ಚೈತ್ರಾ ಕುಂದಾಪುರ ಕಿತ್ತಾಟ ಹೈಲೈಟ್ ಆಗಿದೆ. ದೊಡ್ಮನೆ ಆಟ ಮುಗಿದು ತಿಂಗಳಾದರೂ ಈ ಜಗಳ ನಿಂತಿಲ್ಲ. ಈಗ ಗಿಲ್ಲಿ ಹೇಳಿದ ಮಾತನ್ನು ನೆಟ್ಟಿಗರು ನೆನಪಿಸಿಕೊಳ್ಳುತ್ತಿದ್ದಾರೆ.

ಅಶ್ವಿನಿ ಹಾಗೂ ಚೈತ್ರಾ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಆಡುವಾಗ ಪರಸ್ಪರ ಪರಚಿಕೊಂಡಿದ್ದರು. ಆಗ ಆದ ಗಾಯಗಳ ಬಗ್ಗೆ ಅಲ್ಲಿಯೇ ಚರ್ಚೆ ಆಗಿತ್ತು. ‘ಆಟದ ಭರದಲ್ಲಿ ಹಾಗಾಗಿದೆ’ ಎಂದು ಮಾತನಾಡಿಕೊಂಡು ಆ ವಿಷಯವನ್ನು ಅಲ್ಲಿಗೆ ಬಿಟ್ಟಿದ್ದರು. ದೊಡ್ಮನೆಯಿಂದ ಹೊರ ಬಂದ ಬಳಿಕ ಈ ಕಿತ್ತಾಟ ಮುಂದುವರಿದಿದೆ.

ಕೈಗೆ ಆದ ಗಾಯಗಳ ಕಲೆಗಳ ಫೋಟೋಗಳನ್ನು ಹಾಕಿದ್ದ ಅಶ್ವಿನಿ ಗೌಡ, ‘ಯಾವ ಪ್ರಾಣಿ ಪರಚಿದ್ದು’ ಎಂದು ಕೇಳಿದ್ದರು. ಇದಕ್ಕೆ ಉತ್ತರ ಕೊಟ್ಟಿದ್ದ ಚೈತ್ರಾ ಕುಂದಾಪುರ ಅವರು, ‘ನನಗೂ ಗಾಯಗಳಾಗಿವೆ, ಆಟವನ್ನು ಆಟವಾಗಿಯೇ ನೋಡುತ್ತೇನೆ’ ಅಷ್ಟೆ ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ

ಈಗ ಅಶ್ವಿನಿ ಗೌಡ ಅವರು ಮಾಧ್ಯಮದವರ ಜೊತೆ ಮಾತನಾಡಿ, ಚೈತ್ರಾ ಅವರು ಉದ್ದೇಶ ಪೂರ್ವಕವಾಗಿ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನು ಕೇಳಿದ ನೆಟ್ಟಿಗರು ಗಿಲ್ಲಿ ಮಾತನ್ನು ನೆನಪಿಸಿಕೊಂಡಿದ್ದಾರೆ. ‘ಹೆಣ್ಣು ಮಕ್ಕಳು ಜಗಳ ಆರಂಭಿಸಿದರೆ ಅದು ಮುಗಿಯೋದೇ ಇಲ್ಲ ಎಂದಿದ್ದರು. ಆ ಮಾತು ಈಗ ನಿಜವಾಗಿದೆ.

ಅಶ್ವಿನಿ ಗೌಡ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಹಲವು ವಿಷಯಗಳ ಬಗ್ಗೆ ಕೊಂಕು ತೆಗೆದಿದ್ದರು.  ಗಿಲ್ಲಿಗೆ ಕಪ್ ಸಿಕ್ಕ ವಿಷಯದಲ್ಲಿ ಅವರಿಗೆ ಸಾಕಷ್ಟು ಅಸಮಾಧಾನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಬೆಂಗಳೂರಿನಾದ್ಯಂತ ವರುಣಾರ್ಭಟ: ರಾತ್ರಿ ಮಳೆಗೆ ರಸ್ತೆಗಳು ಜಲಾವೃತ
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
ಹೆಚ್ಚಿತು ಗಾನವಿ, ಯಶಸ್ ನಡುವಿನ ಆಪ್ತತೆ; ಸೌಂದರ್ಯಾ ಶೆಟ್ಟಿ ಕಥೆ ಏನು?
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’
‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’