AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ಟು ಬಿಡದೆ ಕಾಡಿದ ತಪ್ಪಿತಸ್ಥ ಭಾವನೆ; ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ದೊಡ್ಡ ಜಗಳವಾಗಿದೆ. ಗಿಲ್ಲಿಯವರ ಮಾತಿನಿಂದ ಅಶ್ವಿನಿ ಗೌಡ ಮನನೊಂದು ಅತ್ತಿದ್ದಾರೆ. ನಂತರ, ಜಾನ್ವಿ ತಿಳುವಳಿಕೆ ಹೇಳಿದಾಗ ಗಿಲ್ಲಿ ತಮ್ಮ ತಪ್ಪನ್ನು ಅರಿತು, ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ. ಈ ಕ್ಷಮಾಪಣೆ ರಘು ಅವರಿಗೆ ಅಚ್ಚರಿ ಮೂಡಿಸಿದೆ.

ಬಿಟ್ಟು ಬಿಡದೆ ಕಾಡಿದ ತಪ್ಪಿತಸ್ಥ ಭಾವನೆ; ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
|

Updated on: Nov 22, 2025 | 7:03 AM

Share

ಬಿಗ್ ಬಾಸ್​ನಲ್ಲಿ (Bigg Boss) ಅಶ್ವಿನಿ ಗೌಡ vs ಗಿಲ್ಲಿ ಎಂಬಂತಾಗಿದೆ. ಯಾವುದೇ ಟಾಸ್ಕ್ ನೀಡಲಿ, ಮನೆಯಲ್ಲಿ ಯಾವುದಾದರೂ ವಿಷಯ ಚರ್ಚೆ ಆಗುತ್ತಿರಲಿ, ಗಿಲ್ಲಿ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿಯೇ ಆಗುತ್ತದೆ. ಇಬ್ಬರು ಎದುರು ಬದುರಾದಾಗ ನಗುತ್ತಾ ಮಾತನಾಡಿದ ದಾಖಲೆಯೇ ಇಲ್ಲ ಎಂದರೂ ತಪ್ಪಾಗಲಾರದು. ಇಬ್ಬರೂ ಹಿಡಿದ ಹಠ ಬಿಡೋದಿಲ್ಲ. ಹೀಗಿರುವಾಗಲೇ ಗಿಲ್ಲಿ ಅವರು ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಕ್ಯಾಪ್ಟನ್ಸಿ ರೇಸ್​ನಲ್ಲಿ ಅಭಿಷೇಕ್ ಹಾಗೂ ಅಶ್ವಿನಿ ಗೌಡ ಇದ್ದರು. ಇಬ್ಬರೂ ಸರದಿಯಲ್ಲಿ ಬಂದು ಕೂರಬೇಕು. ಹೀಗೆ ಕೂತಾಗ ಮನಸ್ಸಿನಲ್ಲೇ ಲೆಕ್ಕ ಹಾಕಿ 12 ನಿಮಿಷ ಆದ ಬಳಿಕ ಗಂಟೆ ಬಾರಿಸಬೇಕು. 12 ನಿಮಿಷಕ್ಕೆ ಯಾರು ಹತ್ತಿರವಿದ್ದಾರೋ ಅವರು ವಿನ್ ಆದಂತೆ. ಈ ಸಂದರ್ಭದಲ್ಲಿ ಅಶ್ವಿನಿ ಅವರ ಲೆಕ್ಕಾಚಾರ ತಪ್ಪಿಸಲು ಅವಕಾಶ ಇತ್ತು. ಗಿಲ್ಲಿ ಅವರು ಹೋಗಿ ಅಶ್ವಿನಿ ಅವರನ್ನು ಟೀಕೆ ಮಾಡಲು ಆರಂಭಿಸಿದರು. ಅಲ್ಲಿ ಆಡಿದ ಮಾತುಗಳಲ್ಲಿ ಕೆಲವು ಮಿತಿಮೀರಿತ್ತು. ಇದು ಅಶ್ವಿನಿ ಗೌಡ ಅವರಿಗೆ ಬೇಸರ ಮೂಡಿಸಿದೆ.

ಇದಾದ ಬಳಿಕ ಅಶ್ವಿನಿ ಗೌಡ ಅವರು ರೂಂನಲ್ಲಿ ಮಲಗಿ ಅತ್ತಿದ್ದಾರೆ. ಈ ವಿಚಾರದಲ್ಲಿ ಜಾನ್ವಿ ಅವರು ಗಿಲ್ಲಿ ಜೊತೆ ಮಾತನಾಡಿದರು. ಅಶ್ವಿನಿ ಗೌಡ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ ಎಂದು ಗಿಲ್ಲಿಗೆ ಹೇಳಿದರು. ‘ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು. ಅದಕ್ಕೆ ಈ ರೀತಿ ಮಾಡೋದು ಸರಿಯಲ್ಲ, ಛೇ’ ಎಂದರು ಗಿಲ್ಲಿ. ಅವರಿಗೆ ತಪ್ಪಿತಸ್ಥ ಭಾವನೆ ಕಾಡಿದೆ. ಆ ಬಳಿಕ ಅಶ್ವಿನಿ ಅವರು ಇದ್ದಲ್ಲೇ ತೆರಳಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ರೇಜಿಗೆ ಹುಟ್ಟಿಸಿದ ಅಶ್ವಿನಿ ಗೌಡ-ಜಾನ್ವಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

‘ಟಾಸ್ಕ್​ನಲ್ಲಿ ನನ್ನಿಂದ ಮನಸ್ಸಿಗೆ ನೋವಾದರೆ ಕ್ಷಮಿಸಿ. ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ. ಗೇಮ್, ಅದನ್ನು ಗೇಮ್ ಆಗಿ ತೆಗೆದುಕೊಳ್ಳಿ. ನನ್ನ ಮನಸ್ಸಿಗೂ ನೋವಾಗುತ್ತದೆ’ ಎಂದರು ಗಿಲ್ಲಿ. ಅವರು ಕ್ಷಮೆ ಕೇಳಿದ ವಿಚಾರ ರಘು ಅವರಿಗೆ ಶಾಕ್ ತಂದಿದೆ. ಇತ್ತೀಚೆಗೆ ರಘು ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆದಾಗ, ‘ರಘು ಅವರೇ ಕ್ಷಮೆ ಕೇಳಬೇಡಿ’ ಎಂದಿದ್ದರು ಗಿಲ್ಲಿ. ಈಗ ಗಿಲ್ಲಿಯೇ ಈ ರೀತಿ ಮಾಡಿದ್ದು ರಘು ಅವರಿಗೆ ಅಚ್ಚರಿ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ