AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwini Gowda: ಕೆಲಸ ಮಾಡಿತು ಸುದೀಪ್ ಕ್ಲಾಸ್; ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಸೈಲೆಂಟ್ ಮೋಡ್​

Bigg Boss Kannada 12: ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಅವರ ವರ್ತನೆ ಗಮನಾರ್ಹ ಬದಲಾವಣೆ ಕಂಡಿದೆ. ಸುದೀಪ್ ಅವರ ಖಡಕ್ ಸಲಹೆಯ ನಂತರ ಅಶ್ವಿನಿ ಈಗ ಸೈಲೆಂಟ್ ಮೋಡ್‌ಗೆ ಹೋಗಿದ್ದಾರೆ. ಮೊದಲು ಸಿಟ್ಟಿನಿಂದ ಪ್ರತಿಕ್ರಿಯಿಸುತ್ತಿದ್ದ ಅಶ್ವಿನಿ, ಈಗ ಆರೋಪಗಳನ್ನು ಮೌನವಾಗಿ ಸ್ವೀಕರಿಸುತ್ತಿದ್ದಾರೆ. ಈ ಬದಲಾವಣೆಯು ವೀಕ್ಷಕರು ಮತ್ತು ಮನೆಯ ಸದಸ್ಯರಲ್ಲಿ ಕುತೂಹಲ ಮೂಡಿಸಿದೆ.

Ashwini Gowda: ಕೆಲಸ ಮಾಡಿತು ಸುದೀಪ್ ಕ್ಲಾಸ್; ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಸೈಲೆಂಟ್ ಮೋಡ್​
ಅಶ್ವಿನಿ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Nov 11, 2025 | 12:55 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿ ಅಶ್ವಿನಿ ಗೌಡ ಸದ್ಯ ಸಾಕಷ್ಟು ಚರ್ಚೆಯಲ್ಲಿರುವ ಹೆಸರುಗಳಲ್ಲಿ ಒಂದು. ಅವರು ದೊಡ್ಮನೆಯಲ್ಲಿ ಕೂಗಾಡಿಕೊಂಡು ಸಾಕಷ್ಟು ಚರ್ಚೆಗೆ ಕಾರಣ ಆಗಿದ್ದರು. ರಕ್ಷಿತಾ ಶೆಟ್ಟಿ ಹೇಳಿದ ಮಾತನ್ನು ತಿರುಚಿದ ವಿಚಾರದಲ್ಲೂ ಅಶ್ವಿನಿ ಅವರು ಸುದೀಪ್ ಕಡೆಯಿಂದ ಪಾಠ ಹೇಳಿಸಿಕೊಳ್ಳಬೇಕಾಯಿತು. ಹೀಗಿರುವಾಗಲೇ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸೈಲೆಂಟ್ ಆಗಿ ಬಿಟ್ಟಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಅವರು ಸಖತ್ ಸೈಲೆಂಟ್ ಆಗಿದ್ದಾರೆ. ಇದಕ್ಕೆ ನವೆಂಬರ್ 10ರ ಎಪಿಸೋಡ್ ಒಳ್ಳೆಯ ಉದಾಹರಣೆ. ಯಾರ ಗುಣದಿಂದ ಉಳಿದವರಿಗೆ ನೋವಾಗುತ್ತಿದೆ ಎಂಬುದನ್ನು ಹಸಿ ಮೆಣಸು ನೀಡಿ ಹೇಳುವ ಟಾಸ್ಕ್ ನೀಡಲಾಗಿತ್ತು. ಈ ವೇಳೆ ಅನೇಕರು ಅಶ್ವಿನಿ ಗೌಡ ಹೆಸರನ್ನು ತೆಗೆದುಕೊಂಡರು.

ಮೊದಲಾಗಿದ್ದರೆ ಹೆಸರು ತೆಗೆದುಕೊಳ್ಳುತ್ತಿದ್ದಂತೆ ಅಶ್ವಿನಿ ಗೌಡ ಅವರು ಸಿಟ್ಟಾಗುತ್ತಿದ್ದರು. ಯಾರು ಏನೇ ಆರೋಪ ಮಾಡಿದರೂ ಅದಕ್ಕೆ ತಿರುಗೇಟು ಕೊಡುತ್ತಿದ್ದರು. ಆದರೆ, ಅಶ್ವಿನಿ ಗೌಡ ಈಗ ಬದಲಾದರೇ ಎಂಬ ಪ್ರಶ್ನೆ ಮೂಡಿದೆ. ನವೆಂಬರ್ 10ರ ಎಪಿಸೋಡ್​ನಲ್ಲಿ ಅವರು ಬಹುತೇಕ ಸಂದರ್ಭದಲ್ಲಿ ಮೌನವಾಗೇ ಇದ್ದರು. ಏನೇ ಹೇಳಿದರೂ ನಗುತ್ತಾ ಸ್ವೀಕರಿಸಿದ್ದರು. ಈ ಬದಲಾವಣೆ ಸಾಕಷ್ಟು ಜನರಿಗೆ ಅಚ್ಚರಿ ತಂದಿದೆ.

ಸೋಮವಾರದ ಚಟುವಟಿಕೆ ನಡೆಯುವಾಗ ಅಶ್ವಿನಿ ಗೌಡ ಹೆಸರನ್ನು ಅನೇಕರು ತೆಗೆದುಕೊಂಡರು. ಈ ವಿಚಾರವಾಗಿ ಮಾತನಾಡಿದ್ದ ಗಿಲ್ಲಿ, ‘ಅಶ್ವಿನಿ ಗೌಡ ಸೈಲೆಂಟ್ ಆಗಿದ್ದಾರೆ. ಯಾವುದಕ್ಕೂ ಏನನ್ನೂ ಹೇಳುತ್ತಿಲ್ಲ. ಹೀಗಾಗಿಯೇ ಅನೇಕರು ಅಶ್ವಿನಿ ಹೆಸರು ತೆಗೆದುಕೊಳ್ಳುತ್ತಿದ್ದಾರೆ’ ಎಂದಿದ್ದರು. ಅಶ್ವಿನಿ ಸೈಲೆಂಟ್ ಆಗಿದ್ದಾರೆ ಎಂಬುದು ವೀಕ್ಷಕರ ಗಮನಕ್ಕೆ ಮಾತ್ರವಲ್ಲ, ಗಿಲ್ಲಿ ಗಮನಕ್ಕೂ ಬಂದಿದೆ ಎಂಬುದಕ್ಕೆ ಇದುವೇ ಸಾಕ್ಷಿ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಫುಲ್ ಸೈಲೆಂಟ್ ಆದ ಅಶ್ವಿನಿ ಗೌಡ 

ಅಶ್ವಿನಿ ಗೌಡ ಅವರು ಕಳೆದ ವಾರ ಸುದೀಪ್ ಅವರಿಂದ ಸರಿಯಾಗಿ ಪಾಠ ಹೇಳಿಸಿಕೊಂಡಿದ್ದರು. ಒಂದಿಡೀ ಎಪಿಸೋಡ್ ಬಹುತೇಕ ಅವರ ಮೇಲೆ ಸಾಗಿತ್ತು ಎಂದರೂ ತಪ್ಪಾಗಲಾರದು. ಈ ತಪ್ಪು ಮತ್ತೆ ಆಗಬಾರದು ಎಂಬ ಕಾರಣಕ್ಕೆ ಅವರು ಸೈಲೆಂಟ್ ಆದರೇ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:50 pm, Tue, 11 November 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು