AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಗೌಡ ಏನು ನಡೆಯಬಾರದು ಎಂದುಕೊಂಡಿದ್ರೋ ಅದೇ ಆಗೋಯ್ತು

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ 'ವಿಲನ್' ಆಗಿ ಕಾಣಿಸುತ್ತಿದ್ದು, ಅವರ ಸಾಮಾಜಿಕ ಜಾಲತಾಣ ಖಾತೆಗೆ ನೆಗೆಟಿವ್ ಕಮೆಂಟ್​ಗಳು ಬರುತ್ತಿವೆ. ಪ್ರತಿ ವಾರ ಸುದೀಪ್ ಅವರಿಂದ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಹಾಗೂ ಇತರರಿಗೆ 'ಹೀರೋ' ಪಟ್ಟ ಸಿಗುತ್ತಿರುವುದು ಅವರನ್ನು ಚಿಂತೆಗೀಡುಮಾಡಿದೆ. ತಾನು ವಿಲನ್ ಆಗಲು ಇಷ್ಟವಿಲ್ಲ ಎಂದು ಅಶ್ವಿನಿ ಜಾನ್ವಿ ಜೊತೆ ಚರ್ಚಿಸಿದ್ದಾರೆ.

ಅಶ್ವಿನಿ ಗೌಡ ಏನು ನಡೆಯಬಾರದು ಎಂದುಕೊಂಡಿದ್ರೋ ಅದೇ ಆಗೋಯ್ತು
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on: Nov 24, 2025 | 7:38 AM

Share

ಬಿಗ್ ಬಾಸ್ ಮನೆಯಲ್ಲಿರೋ ಅಶ್ವಿನಿ ಗೌಡ ಅವರ ಹೆಸರು ಸಾಕಷ್ಟು ಚರ್ಚೆಯಲ್ಲಿ ಇದೆ. ಅವರ ಸೋಶಿಯ್ ಮೀಡಿಯಾ ಖಾತೆಯಲ್ಲಿರೋ ಪೋಸ್ಟ್​ಗೆ ಸಾಕಷ್ಟು ನೆಗೆಟಿವ್ ಕಮೆಂಟ್​ಗಳು ಬರುತ್ತಿವೆ. ಅಶ್ವಿನಿ ಗೌಡ ಅವರು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಅವರಿಗೆ ವಿಲನ್ ಆಗಬೇಕು ಎಂಬ ಯಾವುದೇ ಉದ್ದೇಶ ಇಲ್ಲ. ಆದರೆ, ಹೊರಗೆ ನಡೆಯುತ್ತಿರುವುದು ಇದೇ. ಈ ವಿಷಯವನ್ನು ಅವರು ಜಾನ್ವಿ ಜೊತೆ ಚರ್ಚೆ ಮಾಡಿದ್ದಾರೆ.

ಪ್ರತಿ ವಾರವೂ ಅಶ್ವಿನಿ ಗೌಡ ಅವರಿಗೆ ಸುದೀಪ್ ಅವರಿಂದ ಕ್ಲಾಸ್ ಇದ್ದೇ ಇರುತ್ತದೆ. ಆರಂಭದಲ್ಲಿ ರಕ್ಷಿತಾ ಶೆಟ್ಟಿ ಅವರನ್ನು ಕೆಣಕಿ ಕ್ಲಾಸ್ ತೆಗೆದುಕೊಂಡರು. ನಂತರ ಈ ರೀತಿಯದ್ದು ನಡೆದೇ ಇತ್ತು. ಕಳೆದ ವಾರ ಅಶ್ವಿನಿಗೆ ಸುದೀಪ್ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಈ ವಿಷಯದ ಬಗ್ಗೆ ಅಶ್ವಿನಿ ಅವರು ಜಾನ್ವಿ ಜೊತೆ ಚರ್ಚೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಒಬ್ಬರು ನೆಗೆಟಿವ್ ಆಗಿ ಕಂಡಾಗ ಸಹಜವಾಗಿಯೇ ಮತ್ತೊಬ್ಬರು ಹೀರೋ ಆಗಿ ಕಾಣಿಸುತ್ತಾರೆ. ಈಗ ಅಶ್ವಿನಿ ಗೌಡ ಅವರ ಆಟದಲ್ಲಿ ಆಗಿದ್ದು ಇದೇ. ಅಶ್ವಿನಿ ಅವರ ನೆಗೆಟಿವಿಟಿಯಿಂದ ರಕ್ಷಿತಾ ಹಾಗೂ ಗಿಲ್ಲಿ ಆಟಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿದೆ. ಆದರೆ, ಅಶ್ವಿನಿ ಅವರು ಇಷ್ಟೆಲ್ಲ ಮಾಡಿದರೂ ತಮ್ಮನ್ನು ತಾವು ತಿದ್ದಿಕೊಳ್ಳುತ್ತಿಲ್ಲ. ಯಾರಾದರೂ ಕೆಣಕಿದರೆ ಉರಿದುರಿದು ಬೀಳುತ್ತಾರೆ. ಇದರಿಂದ ಆಟ ಮತ್ತಷ್ಟು ಹಾಳಾಗುತ್ತಿದೆ.

ಅಶ್ವಿನಿ ಗೌಡ ಅವರು ಈ ಬಗ್ಗೆ ಮಾತನಾಡಿದ್ದಾರೆ. ಜಾನ್ವಿ ಜೊತೆ ಕುಳಿತು ಈ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾರೆ. ‘ಪ್ರತಿ ವಾರವೂ ನಮಗೆ ಕ್ಲಾಸ್ ಇದೆ ಎಂದಾಗ ಏಕೋ ನಾನು ಹೊರಗೆ ಸಾಕಷ್ಟು ನೆಗೆಟಿವ್ ಆಗಿ ಕಾಣಿಸುತ್ತಿದ್ದೇನೆ ಅನಿಸುತ್ತಿದೆ. ನಾನು ಇಲ್ಲಿ ಯಾರನ್ನೂ ಹೀರೋ ಮಾಡೋಕೆ ಬಂದಿಲ್ಲ. ಅವರು ಯಾರಾದರೂ ಹೀರೋ ಆಗಲಿ, ನನಗೆ ಮಾತ್ರ ವಿಲನ್ ಆಗೋಕೆ ಇಷ್ಟ ಇಲ್ಲ’ ಎಂದು ಅಶ್ವಿನಿ ಹೇಳಿದ್ದಾರೆ.

ಇದನ್ನೂ ಓದಿ: ‘ಈ ಆಟ ನನಗೆ ಅಲ್ಲ ಅನಿಸುತ್ತೆ’; ಕಣ್ಣೀರು ಹಾಕುತ್ತಲೇ ಹೇಳಿದ ಅಶ್ವಿನಿ

ಅಶ್ವಿನಿ ಗೌಡ ಏನು ನಡೆಯಬಾರದು ಎಂದುಕೊಂಡಿದ್ದರೋ ಅದೇ ನಡೆದು ಹೋಗಿದೆ. ಅವರು ಹೊರಗೆ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ಈ ವಿಷಯ ಹೊರಗೆ ಎಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ ಎಂಬ ಸಣ್ಣ ಐಡಿಯಾ ಕೂಡ ಅವರಿಗೆ ಇಲ್ಲ. ಹೊರಗೆ ಬಂದ ಬಳಿಕ ಈ ಬಗ್ಗೆ ಅವರಿಗೆ ಈ ಬಗ್ಗೆ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು