‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್; ಶೋ ಗೆದ್ದವರಿಗೆ ಇದೆ ವಿಶೇಷ ಬಹುಮಾನ

ಪುನೀತ್ ಅವರನ್ನು ಕಳೆದುಕೊಂಡು ಏಳು ತಿಂಗಳು ಕಳೆಯುತ್ತಾ ಬಂದಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಆ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಆದರೆ, ಅವರಿಲ್ಲದೆ ಜೀವನ ಸಾಗಿಸಲೇಬೇಕಿದೆ.

‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್; ಶೋ ಗೆದ್ದವರಿಗೆ ಇದೆ ವಿಶೇಷ ಬಹುಮಾನ
ಅಶ್ವಿನಿ ಪುನೀತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 27, 2022 | 7:00 AM

‘ಕಲರ್ಸ್ ಕನ್ನಡ’ (Colors Kannada) ವಾಹಿನಿ ನಿತ್ಯ ಹೊಸಹೊಸ ರಿಯಾಲಿಟಿ ಶೋ ಹಾಗೂ ಧಾರಾವಾಹಿ ಮೂಲಕ ವೀಕ್ಷಕರ ಎದುರು ಬರುತ್ತಿದೆ. ಹತ್ತು ಹಲವು ರಿಯಾಲಿಟಿ ಶೋಗಳನ್ನು ಪರಿಚಿಯಿಸಿದ ಖ್ಯಾತಿ ಈ ವಾಹಿನಿಗೆ ಇದೆ. ‘ಡಾನ್ಸಿಂಗ್ ಚಾಂಪಿಯನ್’ ಹೆಸರಿನ ಶೋ ಮೂಲಕ ವೀಕ್ಷಕರನ್ನು ರಂಜಿಸುವ ಕೆಲಸ ಆಗುತ್ತಿದೆ. ಈಗ ‘ಡಾನ್ಸಿಂಗ್ ಚಾಂಪಿಯನ್’ (Dancing Champion) ಫಿನಾಲೆ ಹಂತ ತಲುಪಿದೆ. ಇದೇ ಭಾನುವಾರ (ಮೇ 29) ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಇದಕ್ಕೆ ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಅವರು (Ashwini Puneeth Rajkumar) ಆಗಮಿಸಿದ್ದು ವಿಶೇಷ.

ಪುನೀತ್ ಅವರನ್ನು ಕಳೆದುಕೊಂಡು ಏಳು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಅವರಿಲ್ಲ ಎನ್ನುವ ನೋವು ಎಲ್ಲರಲ್ಲೂ ಹಾಗೆಯೇ ಉಳಿದುಕೊಂಡಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಆ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಆದರೆ, ಅವರಿಲ್ಲದೆ ಜೀವನ ಸಾಗಿಸಲೇಬೇಕಿದೆ. ಹೀಗಾಗಿ, ಅವರು ಮರಳಿ ಚಿತ್ರರಂಗದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಪುನೀತ್ ಕನಸಿನ ಕೂಸು ‘ಪಿಆರ್​​ಕೆ ಪ್ರೊಡಕ್ಷನ್​’ ಮೂಲಕ ಹಲವು ಚಿತ್ರಗಳನ್ನು ನಿರ್ಮಿಸುವ ಕೆಲಸ ಆಗುತ್ತಿದೆ. ಈ ಮಧ್ಯೆ ಅಶ್ವಿನಿ ಅವರು ಕಿರುತೆರೆ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರಿಗೂ ಕಲರ್ಸ್ ಕನ್ನಡಕ್ಕೂ ಒಳ್ಳೆಯ ನಂಟಿತ್ತು. ‘ಕನ್ನಡದ ಕೋಟ್ಯಧಿಪತಿ’ ನಾಲ್ಕನೇ ಸೀಸನ್ ಕಲರ್ಸ್​ನಲ್ಲಿ ಪ್ರಸಾರವಾಯಿತು. ಇದರ ನಿರೂಪಣೆಯನ್ನು ಪುನೀತ್ ನಿರ್ವಹಿಸುತ್ತಿದ್ದರು. ಈ ಕಾರಣಕ್ಕೆ ಅಶ್ವಿನಿ ಅವರಿಗೂ ಕಲರ್ಸ್​ ಜತೆ ನಂಟು ಬೆಳೆದಿದೆ. ‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ತಿರುಪತಿಯಲ್ಲಿ ಕನ್ನಡಿಗರಿಗೆ ಇದೆಂಥಾ ಅವಮಾನ? ವಾಹನಕ್ಕೆ ಕನ್ನಡ ಬಾವುಟ, ನಟ ಪುನೀತ್ ಫೋಟೋ ಅಂಟಿಸಿಕೊಂಡವರಿಗೆ ಕೆಟ್ಟ ಅನುಭವ
Image
Ashwini Puneeth Rajkumar: ಡಾ.ರಾಜ್​ ಜನ್ಮದಿನ ಹಿನ್ನೆಲೆ; ಬಡಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಅಶ್ವಿನಿ ಪುನೀತ್
Image
‘ಜೇಮ್ಸ್​’ ಚಿತ್ರದಲ್ಲಿ ಅಪ್ಪು ವಾಯ್ಸ್ ರೀ-ಕ್ರಿಯೇಟ್​; ಶಾಕ್​ ಆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಇದನ್ನೂ ಓದಿ: ಡಾ.ರಾಜ್​ ಜನ್ಮದಿನ ಹಿನ್ನೆಲೆ; ಬಡಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಅಶ್ವಿನಿ ಪುನೀತ್

ಈ ಬಾರಿಯ ವಿಶೇಷ ಎಂದರೆ ಪುನೀತ್ ಅವರ ರೀತಿಯಲ್ಲೇ ಕಾಣುವ ಟ್ರೋಫಿ ಮಾಡಿಸಲಾಗಿದೆ. ಗೆದ್ದವರಿಗೆ ಈ ಟ್ರೋಫಿ ಸಿಗಲಿದೆ. ಈ ಕಾರಣಕ್ಕೂ ಈ ಗೆಲುವು ತುಂಬಾನೇ ವಿಶೇಷ ಆಗಿರಲಿದೆ. ಸದ್ಯ, ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಇದರ ಪ್ರೋಮೋ ಹಂಚಿಕೊಂಡಿದೆ. ಅಭಿಮಾನಿಗಳು ಪುನೀತ್ ಇಲ್ಲ ಎಂಬ ಬೇಸರವನ್ನು ಕಮೆಂಟ್​ ಸೆಕ್ಷನ್​ನಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಭಾನುವಾರ ಸಂಜೆ 6 ಗಂಟೆಗೆ ಫಿನಾಲೆ ಆರಂಭವಾಗಲಿದೆ. ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರನ್ನು ಕಿರುತೆರೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ