AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ; ಪಬ್‌ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ

ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ; ಪಬ್‌ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ
ಕಿರಿಕ್ ಕೀರ್ತಿ
TV9 Web
| Updated By: ಮದನ್​ ಕುಮಾರ್​|

Updated on:Dec 03, 2021 | 10:13 AM

Share

ಬಿಗ್​ ಬಾಸ್​ (Bigg Boss) ಖ್ಯಾತಿಯ ಕಿರಿಕ್​ ಕೀರ್ತಿ (Kirik Keerthi) ಮೇಲೆ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಸದಾಶಿವನಗರದ ಪಬ್‌ನಲ್ಲಿ ಈ ಘಟನೆ ನಡೆದಿದೆ. ಗುರುವಾರ (ಡಿ.2) ರಾತ್ರಿ ಸ್ನೇಹಿತರ ಜತೆ ಕಿರಿಕ್ ಕೀರ್ತಿ ಅವರು ಪಬ್‌ಗೆ ತೆರಳಿದ್ದರು. ಪಕ್ಕದ ಟೇಬಲ್‌ನಲ್ಲಿದ್ದ ವ್ಯಕ್ತಿಯೊಬ್ಬ ಕೀರ್ತಿ ಅವರ ಫೋಟೋ ಕ್ಲಿಕ್ಕಿಸಿದ್ದ. ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದ್ದಾರೆ. ಆ ಕಾರಣಕ್ಕೆ ಜಗಳ ಆರಂಭ ಆಯಿತು. ಫೋಟೋ ಕ್ಲಿಕ್ಕಿಸಿದ ವ್ಯಕ್ತಿ ಕ್ಷಮೆ ಕೇಳಿದ್ರೂ ಕೂಡ ಬಿಡದೇ ಕೀರ್ತಿ ಬೈಯ್ಯಲು ಶುರು ಮಾಡಿದ್ದರು. ಬಾಯಿಗೆ ಬಂದಂತೆ ಮಾತನಾಡಿದ್ದ ಕಿರಿಕ್ ಕೀರ್ತಿ ವರ್ತನೆಗೆ ಆ ವ್ಯಕ್ತಿ ರೋಸಿ ಹೋಗಿದ್ದ. ಫೋಟೋ ಕ್ಲಿಕ್ಕಿಸಿದವನ ಮೊಬೈಲ್​ ಕಸಿದುಕೊಳ್ಳಲು ಕೂಡ ಕೀರ್ತಿ ಪ್ರಯತ್ನಿದರು. ಇದರಿಂದ ಕೋಪಗೊಂಡ ಆ ವ್ಯಕ್ತಿಯು ಕಿರಿಕ್ ಕೀರ್ತಿಯ ತಲೆಗೆ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಾನೆ.

ಗುರುವಾರ ತಡರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆ ಮಾಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಕಿರುತೆರೆ ನಿರೂಪಕನಾಗಿ ಕಿರಿಕ್​ ಕೀರ್ತಿ ಗುರುತಿಸಿಕೊಂಡಿದ್ದಾರೆ. ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಆ ನಂತರ ಅವರು ಕೆಲವು ಸಿನಿಮಾಗಳಲ್ಲೂ ನಟಿಸಿದರು. ಸೋಶಿಯಲ್​ ಮೀಡಿಯಾದಲ್ಲೂ ಅವರನ್ನು ಅನೇಕರ ಫಾಲೋ ಮಾಡುತ್ತಾರೆ. ಕಿರಿಕ್​ ಕೀರ್ತಿ ಹೋದಲ್ಲಿ ಬಂದಲ್ಲಿ ಕೆಲವು ಅಭಿಮಾನಿಗಳು ಫೋಟೋಗಾಗಿ ಹಂಬಲಿಸುವುದು ಸಹಜ. ಸದಾಶಿವನಗರದ ಪಬ್​ನಲ್ಲಿ ಫೋಟೋ ತೆಗೆಯಲು ಬಂದು ವ್ಯಕ್ತಿ ಕೂಡ ಕಿರಿಕ್​ ಕೀರ್ತಿಯ ಅಭಿಮಾನಿ ಎನ್ನಲಾಗಿದೆ.

ಕಿರಿಕ್​ ಕೀರ್ತಿ ಮೇಲಿನ ಅಭಿಮಾನಕ್ಕಾಗಿ ಆತ ಫೋಟೋ ಕ್ಲಿಕ್ಕಿಸಿದ್ದಾನೆ. ಆದರೆ ಅದನ್ನು ಕೀರ್ತಿ ಸಹಿಸಿಲ್ಲ. ಫೋಟೋ ತೆಗೆದ ಅಭಿಮಾನಿಯ ವಿರುದ್ಧ ಅವರು ಕೋಪಗೊಂಡು ಮನಬಂದಂತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಕಾರಣಕ್ಕಾಗಿ ಆ ವ್ಯಕ್ತಿ ಹಲ್ಲೆ ಮಾಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ:

Marakkar Twitter Review: ‘ಇದು ಇನ್ನೊಂದು ಬಾಹುಬಲಿ’; ಮರಕ್ಕರ್​ ಚಿತ್ರ ನೋಡಿ ಮೆಚ್ಚಿಕೊಂಡ ಮೋಹನ್​ಲಾಲ್​ ಫ್ಯಾನ್ಸ್​​

ಮಾಸ್​ ಮದಗಜ: ವಿಶೇಷ ಸಂದರ್ಶನದಲ್ಲಿ ಶ್ರೀಮುರಳಿ, ಆಶಿಕಾ, ಗರುಡ ರಾಮ್​ ಮಸ್ತ್ ಮಾತುಕತೆ

Published On - 9:57 am, Fri, 3 December 21

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್