ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಆಸ್ಪತ್ರೆಗೆ ದಾಖಲಾಗಿದೆ. ಹಾಸ್ಪಿಟಲ್ ಬೆಡ್​ನಲ್ಲಿ ಮಲಗಿರುವ ಅವರ ಫೋಟೋ ಲಭ್ಯವಾಗಿದೆ. ಹಾಗಾದರೆ ಗೋಲ್ಡ್ ಸುರೇಶ್ ಅವರಿಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು? ಸದ್ಯ ಅವರ ಪರಿಸ್ಥಿತಿ ಹೇಗಿದೆ? ಈ ಬಗ್ಗೆ ಇಲ್ಲಿದೆ ಮಾಹಿತಿ..

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್
Gold Suresh

Updated on: Feb 03, 2025 | 6:52 PM

ಉತ್ತರ ಕರ್ನಾಟದ ಗೋಲ್ಡ್ ಸುರೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಸ್ಪರ್ಧಿಸಿದ ಬಳಿಕ ರಾಜ್ಯಾದ್ಯಂತ ಸಖತ್ ಫೇಮಸ್ ಆದರು. ಈಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಮಲಗಿರುವ ಅವರ ಫೋಟೋ ಹಾಗೂ ವಿಡಿಯೋ ಲಭ್ಯವಾಗಿದೆ. ಹಾಗಂತ, ಅವರನ್ನು ಇಷ್ಟಪಡುವವರು ಆತಂಕಪಡುವ ಅವಶ್ಯಕತೆ ಇಲ್ಲ. ಯಾಕೆಂದರೆ, ತುಂಬ ಗಂಭೀರವಾದ ಆರೋಗ್ಯ ಸಮಸ್ಯೆ ಏನಿಲ್ಲ. ಸದ್ಯ ಸುರೇಶ್ ಅವರು ಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಗೋಲ್ಡ್ ಸುರೇಶ್ ಅವರ ಕಾಲಿಗೆ ಪೆಟ್ಟಾಗಿತ್ತು. ಟಾಸ್ಕ್ ಆಡುವಾಗ ಅವರು ಪೆಟ್ಟು ಮಾಡಿಕೊಂಡಿದ್ದರು. ಅದರಿಂದಾಗಿ ಅವರಿಗೆ ಕೆಲವು ಟಾಸ್ಕ್​ಗಳಲ್ಲಿ ಹಿನ್ನಡೆ ಆಗಿತ್ತು. ಕೆಲವರು ಗೋಲ್ಡ್ ಸುರೇಶ್ ಅವರ ಅನಾರೋಗ್ಯವನ್ನೇ ಮುಂದಿಟ್ಟುಕೊಂಡು ಲೇವಡಿ ಮಾಡಿದ್ದರು. ಆದರೂ ಕೂಡ ಸುರೇಶ್ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದರು.

ಕಾಲು ನೋವು ಹೆಚ್ಚಾಗಿದ್ದರಿಂದ ಸುರೇಶ್ ಅವರಿಗೆ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ಡಾಕ್ಟರ್ ಸಲಹೆ ಮೇರೆಗೆ ಗೋಲ್ಡ್ ಸುರೇಶ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಎರಡು ದಿನಗಳ ಬಳಿಕ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಮರಳುವ ನಿರೀಕ್ಷೆ ಇದೆ. ಬಳಿಕ ಒಂದೂವರೆ ತಿಂಗಳು ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ.

ಇದನ್ನೂ ಓದಿ: ಹನುಮಂತನ ಮದುವೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡ ಗೋಲ್ಡ್ ಸುರೇಶ್

ಬಿಗ್ ಬಾಸ್ ಆಟದಲ್ಲಿ ಗೋಲ್ಡ್ ಸುರೇಶ್ ಅವರು ಸಾಕಷ್ಟು ಪೈಪೋಟಿ ನೀಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಬಿಗ್ ಬಾಸ್ ಆಟವನ್ನು ಅರ್ಧಕ್ಕೆ ತೊರೆಯಬೇಕಾಯಿತು. ಅವರ ಆರ್ಥಿಕ ವ್ಯವಹಾರಗಳಲ್ಲಿ ಏರುಪೇರು ಆಗಿದ್ದರಿಂದ ಅದನ್ನು ನಿಭಾಯಿಸಲು ಅವರ ಕುಟುಂಬದವರಿಗೆ ಕಷ್ಟ ಆಗಿತ್ತು. ಹಾಗಾಗಿ ಸುರೇಶ್ ಅವರು ಅರ್ಧದಲ್ಲೇ ಬಿಗ್ ಬಾಸ್ ಶೋ ತೊರೆದಿದ್ದರು. ಆ ಬಳಿಕ ಮತ್ತೆ ಬಿಗ್ ಬಾಸ್ ಮನೆಗೆ ಹೋಗಲು ಅವರು ಬಯಸಿದ್ದರು. ಆದರೆ ಫಿನಾಲೆ ಹತ್ತಿರ ಇದ್ದಿದ್ದರಿಂದ ಅವರಿಗೆ ಸೆಕೆಂಡ್ ಚಾನ್ಸ್ ನೀಡಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us