AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ

‘ಬಿಗ್ ಬಾಸ್‌ ಕನ್ನಡ ಸೀಸನ್‌ 12’ ಸ್ಪರ್ಧಿಗಳು ವೇದಿಕೆಯಲ್ಲಿ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‌ ಬಾಸ್‌ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಹೇಳಿಕೊಂಡಿದ್ದಾರೆ. ಈ ಎಲ್ಲ ಮನರಂಜನೆಯ ರಸದೌತಣವನ್ನು ಸವಿಯಲು ‘ಕಲರ್ಸ್‌ ದೊಡ್ಮನೆ ಹಬ್ಬ’ ಕಾರ್ಯಕ್ರಮವನ್ನು ನೋಡಬೇಕು.

ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ
Kavya, Rakshitha Shetty, Gilli Nata
ಮದನ್​ ಕುಮಾರ್​
|

Updated on: Feb 10, 2026 | 6:35 PM

Share

ಬಿಗ್ ಬಾಸ್ ಮುಗಿಯಿತು, ಮುಂದೇನು ಎಂದು ಕೇಳುತ್ತಿದ್ದ ವೀಕ್ಷಕರಿಗೆ ಇಲ್ಲಿದೆ ಮಸ್ತ್ ಅವಕಾಶ. ‘ಬಿಗ್ ಬಾಸ್ ಕನ್ನಡ 12’ (BBK 12) ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ‘ಕಲರ್ಸ್ ಕನ್ನಡ’ (Colors Kannada) ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’ (Colors Dodmane Habba) ಎಂಬ ಅದ್ದೂರಿ ಕಾರ್ಯಕ್ರಮ ಪ್ರಸಾರ ಆಗಲಿದೆ. ಸತತ ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿದೆ ಈ ಕಾರ್ಯಕ್ರಮ. ಫೆಬ್ರವರಿ 14ರಂದು ಕರುನಾಡಿನ ಮನೆ ಮಂದಿಯೆಲ್ಲ ಕುಳಿತು ನೋಡಬಹುದಾದ ಅತ್ಯುತ್ತಮ ಕಾರ್ಯಕ್ರಮ ಇದಾಗಲಿದೆ ಎಂದು ವಾಹಿನಿ ಹೇಳಿದೆ.

‘ಕಲರ್ಸ್‌ ದೊಡ್ಮನೆ ಹಬ್ಬ’ ಕಾರ್ಯಕ್ರಮ ಫೆ.14ರಂದು ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ‘ಕಲರ್ಸ್‌ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾಗಲಿದೆ. ‘ಬಿಗ್ ಬಾಸ್ ಕನ್ನಡ ಸೀಸನ್‌ 12’ರ ಎಲ್ಲ ಸ್ಪರ್ಧಿಗಳು ಹೊರಬಂದ ಮೇಲೆ ಇದೇ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಈ ಕಾರ್ಯಕ್ರಮದ ವಿಶೇಷ ಆಗಿರಲಿದೆ.

ಬಿಗ್ ಬಾಸ್ ಮನೆಯೊಳಗಿನ ಗಂಭೀರ ವಾತಾವರಣದ ಬದಲು ಇಲ್ಲಿ ಕೇವಲ ನಗು, ಹರಟೆ ಮತ್ತು ಸಂಭ್ರಮಕ್ಕೆ ಮಾತ್ರ ಆದ್ಯತೆ ನೀಡಲಾಗಿದೆ. ನಕ್ಕು ನಗಿಸುವ ಸಾಕಷ್ಟು ಝಲಕ್‌ಗಳು ‘ಕಲರ್ಸ್‌ ದೊಡ್ಮನೆ ಹಬ್ಬ’ದ ಹೈಲೈಟ್‌ ಆಗಿರಲಿವೆ. ‘ಭಾಗ್ಯಲಕ್ಷ್ಮೀ’ ಸೀರಿಯಲ್‌ ನಟಿ ಹಾಗೂ ನಿರೂಪಕಿ ಸುಷ್ಮಾ ರಾವ್ ಅವರು ಲವಲವಿಕೆಯಿಂದ ಈ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕೇವಲ ಹಾಡು, ಕುಣಿತ ಮಾತ್ರವಲ್ಲದೇ ಬಿಗ್ ಬಾಸ್ ಮನೆಯ ಟಾಸ್ಕ್‌ಗಳನ್ನು ನೆನಪಿಸುವಂತಹ ತಮಾಷೆಯ ಗೇಮ್‌ಗಳನ್ನು ಸುಷ್ಮಾ ಅವರು ಆಡಿಸಿ ರಂಜಿಸಿದ್ದಾರೆ. ಇದು ಸ್ಪರ್ಧಿಗಳ ನಡುವಿನ ಹಳೆಯ ಕಾಲೆಳೆಯುವ ಗುಣವನ್ನು ಮತ್ತೆ ನೆನಪಿಸಲಿದೆ. ಈ ಬಾರಿ ಬಿಗ್ ಬಾಸ್‌ ಮನೆಯಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಗಿಲ್ಲಿ ನಟ ಕೂಡ ಇದರಲ್ಲಿ ಭಾಗಿ ಆಗಿದ್ದಾರೆ.

ಇದನ್ನೂ ಓದಿ: ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟ ಅವರ ಅಭಿಮಾನಿಗಳಿಗಾಗಿಯೇ ಈ ಕಾರ್ಯಕ್ರಮದಲ್ಲಿ ವಿಶೇಷ ವೇದಿಕೆ ಕಲ್ಪಿಸಲಾಗಿದೆ. ಅವರ ಬಿಗ್‌ ಬಾಸ್‌ ಜರ್ನಿಯನ್ನು ಸಂಭ್ರಮಿಸುವ ಜೊತೆಗೆ, ಫ್ಯಾನ್ಸ್‌ ಸಹ ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ