BBK9: ಕನ್ನಡಪರ ಹೋರಾಟಗಾರರಿಗೆ ಪ್ರಶಾಂತ್​ ಸಂಬರ್ಗಿ ಅವಮಾನ? ಕೂಡಲೇ ಬಿಗ್​ಬಾಸ್​ನಿಂದ ಹೊರಗೆ ಕಳಿಸುವಂತೆ ಪ್ರತಿಭಟನೆ

Prashanth Sambargi | Rupesh Rajanna: ಪ್ರಶಾಂತ್​ ಸಂಬರ್ಗಿ ಮಾತನಾಡುವ ರೀತಿ ಅನೇಕರಿಗೆ ಇಷ್ಟ ಆಗುವುದಿಲ್ಲ. ಅದನ್ನು ಹಲವು ಬಾರಿ ಕೆಲವರು ನೇರವಾಗಿ ಹೇಳಿದ್ದುಂಟು. ಈ ವಿಚಾರವಾಗಿ ಈಗ ಮನೆಯಾಚೆಗೂ ವಿವಾದ ಸೃಷ್ಟಿ ಆಗಿದೆ.

BBK9: ಕನ್ನಡಪರ ಹೋರಾಟಗಾರರಿಗೆ ಪ್ರಶಾಂತ್​ ಸಂಬರ್ಗಿ ಅವಮಾನ? ಕೂಡಲೇ ಬಿಗ್​ಬಾಸ್​ನಿಂದ ಹೊರಗೆ ಕಳಿಸುವಂತೆ ಪ್ರತಿಭಟನೆ
ಪ್ರಶಾಂತ್ ಸಂಬರ್ಗಿ
Follow us
TV9 Web
| Updated By: ಮದನ್​ ಕುಮಾರ್​

Updated on: Nov 03, 2022 | 5:16 PM

ಪ್ರಶಾಂತ್​ ಸಂಬರ್ಗಿ (Prashanth Sambargi) ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ. ಈ ಹಿಂದಿನ ಬಿಗ್​ ಬಾಸ್​ ಸೀಸನ್​ನಲ್ಲಿ ಅವರು ಸಿಕ್ಕಾಪಟ್ಟೆ ಜಗಳ ಮಾಡಿಕೊಂಡಿದ್ದರು. ಈ ಬಾರಿ ಕೂಡ ಅದು ಮುಂದುವರಿದಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಸ್ಪರ್ಧಿಸುವ ಅವಕಾಶ ಪಡೆದಿರುವ ಅವರು ಒಂದಿಲ್ಲೊಂದು ಕಾರಣಕ್ಕೆ ರಾದ್ಧಾಂತ ಮಾಡುತ್ತಿದ್ದಾರೆ. ಅದು ಅವರ ಆಟದ ವೈಖರಿ ಎಂದು ಎಲ್ಲರೂ ಸುಮ್ಮನಾಗಿದ್ದರು. ಆದರೆ ಈಗ ಪ್ರಶಾಂತ್​ ಸಂಬರ್ಗಿ ಅವರು ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ರೂಪೇಶ್​ ರಾಜಣ್ಣ (Rupesh Rajanna) ಬಗ್ಗೆ ಮಾತನಾಡುವಾಗ ಪ್ರಶಾಂತ್​ ಅವರು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆರೋಪಿಸಿದ್ದಾರೆ. ಅಲ್ಲದೇ, ಬಿಗ್​ ಬಾಸ್ ಶೋ ವಿರುದ್ಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಜಗಳಗಳು ಕಾಮನ್​. ಆದರೆ ಹೊರಗಿನ ವ್ಯಕ್ತಿ, ಸಂಸ್ಥೆ ಅಥವಾ ಸಂಘಟನೆಗಳ ಬಗ್ಗೆ ಸ್ಪರ್ಧಿಗಳು ಆಕ್ಷೇಪಾರ್ಹವಾಗಿ ಮಾತನಾಡಿದಾಗ ದೊಡ್ಮನೆ ಆಚೆಗೂ ವಿವಾದದ ಕಿಡಿ ಹೊತ್ತಿಕೊಳ್ಳುತ್ತದೆ. ಕನ್ನಡಪರ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರೂಪೇಶ್​ ರಾಜಣ್ಣ ಅವರು ಈ ಬಾರಿಯ ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಪ್ರಶಾಂತ್​ ಸಂಬರ್ಗಿ ಟಾರ್ಗೆಟ್​ ಮಾಡಿದ್ದಾರೆ. ಅಷ್ಟೇ ಆಗಿದ್ದರೆ ಯಾರೂ ಕಿರಿಕ್​ ಮಾಡುತ್ತಿರಲಿಲ್ಲ. ಆದರೆ ಎಲ್ಲ ಕನ್ನಡಪರ ಹೋರಾಟಗಾರರ ಕುರಿತು ಮಾತನಾಡುವಾಗ ಪ್ರಶಾಂತ್​ ಸಂಬರ್ಗಿ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ.

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಹೊರಗೆ ಕಳಿಸದೇ ಇದ್ದರೆ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಪ್ರಸಾರ ಆಗುತ್ತಿದೆ. ಕಿಚ್ಚ ಸುದೀಪ್​ ಅವರು ಇದರ ನಿರೂಪಣೆ ಮಾಡುತ್ತಿದ್ದಾರೆ. ಹೊಸ ಸ್ಪರ್ಧಿಗಳ ಜೊತೆ ಹಳಬರಿಗೂ ಈ ಬಾರಿ ಅವಕಾಶ ನೀಡಲಾಗಿದೆ. ಪ್ರಶಾಂತ್​ ಸಂಬರ್ಗಿ ಕೂಡ ಹಳೇ ಸ್ಪರ್ಧಿ. ಅವರು ಮಾತನಾಡುವ ರೀತಿ ಅನೇಕರಿಗೆ ಇಷ್ಟ ಆಗುವುದಿಲ್ಲ. ಅದನ್ನು ಹಲವು ಬಾರಿ ಕೆಲವರು ನೇರವಾಗಿ ಹೇಳಿದ್ದುಂಟು. ಆದರೆ ಇಷ್ಟು ದಿನ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿದ್ದ ಅವರ ಕಿರಿಕ್​ ಈಗ ಮನೆಯಾಚೆಗೂ ಕಿಡಿ ಹೊತ್ತಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ