ಬೆಂಗಳೂರು ಬಂದ್​ಗೆ ಕಿರುತೆರೆ ಬೆಂಬಲ, ಮಂಗಳವಾರ ಚಿತ್ರೀಕರಣ ಇಲ್ಲ

Cauvery Dispute: ಕಾವೇರಿ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಮಂಗಳವಾರ ಬೆಂಗಳೂರು ಬಂದ್ ಆಚರಿಸುತ್ತಿದ್ದು, ಕಿರುತೆರೆಯವರು ಬೆಂಬಲ ನೀಡಿದ್ದು, ಮಂಗಳವಾರ ಚಿತ್ರೀಕರಣ ಬಂದ್ ಮಾಡಿದೆ.

ಬೆಂಗಳೂರು ಬಂದ್​ಗೆ ಕಿರುತೆರೆ ಬೆಂಬಲ, ಮಂಗಳವಾರ ಚಿತ್ರೀಕರಣ ಇಲ್ಲ
ಬೆಂಗಳೂರು ಬಂದ್
Follow us
ಮಂಜುನಾಥ ಸಿ.
|

Updated on: Sep 24, 2023 | 8:05 PM

ಕಾವೇರಿ ಸಮಸ್ಯೆ (Cauvery Dispute) ಮತ್ತೆ ಭುಗಿಲೆದ್ದಿದ್ದು, ಸುಪ್ರೀಂಕೋರ್ಟ್ ಆದೇಶದನ್ವಯ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಹರಿಯ ಬಿಡಬೇಕಿದೆ. ಈ ಬಗ್ಗೆ ಸ್ಪಷ್ಟ ನಿಲುವಿಗೆ ಸರ್ಕಾರ ಇನ್ನಷ್ಟೆ ಬರಬೇಕಿದೆ. ಇದರ ನಡುವೆ ರೈತರು, ಕನ್ನಡ ಪರ ಸಂಘಟನೆಗಳು ಇನ್ನಿತರೆ ಕೆಲವು ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು ಮಂಗಳವಾರ (ಸೆಪ್ಟೆಂಬರ್ 24) ಬಂದ್​ಗೆ ಕರೆ ನೀಡಿವೆ. ಬಂದ್​ಗೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ.

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು, ಬಂದ್​ಗೆ ಆಟೋ-ಟ್ಯಾಕ್ಸಿ, ಚಾಲಕರು, ಐಟಿ-ಬಿಟಿ ಒಕ್ಕೂಟ ಇನ್ನೂ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ. ಇದರ ನಡುವೆ ಕನ್ನಡ ಕಿರುತೆರೆ ವಲಯವೂ ಸಹ ಮಂಗಳವಾರದ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ.

ಈ ಬಗ್ಗೆ ಇಂದು (ಸೆಪ್ಟೆಂಬರ್ 24) ಸಭೆ ನಡೆಸಿ ತೀರ್ಮಾನ ಪ್ರಕಟಿಸಿದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು. ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಬೆಂಬಲ ನೀಡುತ್ತಿರುವುದಾಗಿ ಘೋಷಿಸಿರುವುದು ಮಾತ್ರವೇ ಅಲ್ಲದೆ ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದಿದ್ದಾರೆ ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಸೆ.26ರಂದು ಬೆಂಗಳೂರು ಬಂದ್ ಫಿಕ್ಸ್, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಬಂದ್ ಮಾಡುವ ಜೊತೆಗೆ ಬಂದ್ ದಿನದಂದು ನಿಗದಿ ಪಡಿಸಿದ ಸ್ಥಳಕ್ಕೆ ಹಾಜರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಹ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ತನ್ನ ಸದಸ್ಯರು ಹಾಗೂ ಪದಾಧಿಕಾರಿಗಳ ಬಳಿ ಮನವಿ ಮಾಡಿದೆ.

ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಹಲವಾರು ಸಂಘಟನೆಗಳು ಸ್ವಯಂಘೋಷಿತವಾಗಿ ಬೆಂಬಲ ನೀಡುತ್ತಿವೆ. ಕಾವೇರಿ ವಿವಾದ ಕುರಿತಾಗಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ಈ ಬೆಂಗಳೂರು ಬಂದ್ ನಡೆಯುತ್ತಿದೆ. ಆಟೋ-ಟ್ಯಾಕ್ಸಿ, ಖಾಸಗಿ ಬಸ್, ಲಾರಿ, ಕಾರ್ಮಿಕ ಸಂಘಟನೆ, ಐಟಿ-ಬಿಟಿ, ಹೋಟೆಲ್-ಕಾಂಡಿಮೆಂಟ್ಸ್, ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡಿವೆ.

ಚಿತ್ರೋದ್ಯಮವು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದೆಯಾದರೂ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆಯೇ ಎಂಬ ಬಗ್ಗೆ ಅಧಿಕೃತ ಹೇಳಕೆ ಹೊರಬಿದ್ದಿಲ್ಲ. ಕನ್ನಡ ಚಿತ್ರರಂಗದ ಹಲವು ಸ್ಟಾರ್ ನಟ-ನಟಿಯರು ಕಾವೇರಿ ಹೋರಾಟದ ಪರವಾಗಿ ತಾವು ಇರುವುದಾಗಿ ಈಗಾಗಲೇ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ