ದರ್ಶನ್ ಸಿನಿಮಾ ಹಾಡು ಹೇಳಿ ನಾನು ಫೇಮಸ್​ ಆದೆ: ನೇಪಾಳದ ಹುಡುಗ ಪ್ರೇಮ್ ತಾಪ

Edited By:

Updated on: Feb 19, 2025 | 8:15 PM

ನೇಪಾಳ ಮೂಲದ ಪ್ರೇಮ್ ತಾಪ ಅವರು ಕರ್ನಾಟಕಕ್ಕೆ ಬಂದು 16 ವರ್ಷ ಆಗಿದೆ. ಮೊದಲಿಗೆ ಅವರಿಗೆ ಕನ್ನಡ ಬರುತ್ತಿರಲಿಲ್ಲ. ಇಲ್ಲಿಯೇ ಅವರು ಶಾಲೆಗೆ ಸೇರಿದರು. ಬಳಿಕ ಕನ್ನಡ ಕಲಿತುಕೊಂಡರು. ಟಿವಿ ರಿಯಾಲಿಟಿ ಶೋಗಳಲ್ಲಿ ಕೂಡ ಕಾಣಿಸಿಕೊಂಡು ಜನರಿಗೆ ಪರಿಚಯ ಆದರು. ಈಗ ‘ಭರ್ಜರಿ ಬ್ಯಾಚುಲರ್​’ ಶೋನಿಂದ ಅವರಿಗೆ ಆಫರ್​ ಬಂದಿದೆ. ‘ಟಿವಿ9’ ಜೊತೆ ಅವರು ಕೆಲವು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಪ್ರೇಮ್ ತಾಪ ಅವರು ಮೂಲತಃ ನೇಪಾಳದವರು. ಆದರೂ ಕನ್ನಡವನ್ನು ಅವರು ತುಂಬ ಚೆನ್ನಾಗಿ ಮಾತನಾಡುತ್ತಾರೆ. ಟಿವಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಸಿನಿಮಾದ ಸಾಂಗ್ಸ್ ಹಾಡಿಯೇ ತಾವು ಫೇಮಸ್ ಆಗಿದ್ದು ಎಂದು ಅವರು ಹೇಳಿದ್ದಾರೆ. ಅದಕ್ಕಾಗಿ ಡಿ ಬಾಸ್ ಫ್ಯಾನ್ಸ್​ಗೆ ಅವರು ಧನ್ಯವಾದ ಅರ್ಪಿಸಿದ್ದಾರೆ. ಈಗ ‘ಭರ್ಜರಿ ಬ್ಯಾಚುಲರ್ಸ್​’ ಶೋನಲ್ಲಿ ಪ್ರೇಮ್ ತಾಪ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More