AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ಸ್ಪರ್ಧಿಗಳ ತಾಳ್ಮೆಯ ಕಟ್ಟೆ

ಬಿಗ್ ಬಾಸ್ ಕನ್ನಡ 12ರಲ್ಲಿ ಸತೀಶ್ ಅವರ ವಿಚಿತ್ರ ನಡವಳಿಕೆ ಮನೆ ಮಂದಿಗೆ ಕೋಪ ತಂದಿದೆ. ಆರು ಗಂಟೆ ಸ್ನಾನ ಮಾಡಿ ಸ್ಪರ್ಧಿಗಳ ತಾಳ್ಮೆಯ ಕಟ್ಟೆ ಒಡೆಸಿದ್ದಾರೆ. ಚಂದ್ರಪ್ರಭ ಅವರಿಗೆ ಕಿರಿಕಿರಿಯಾಗಿ ಗಾಜಿನ ಲೋಟ ಒಡೆದಿದ್ದಾರೆ. ತಮ್ಮ ಐಷಾರಾಮಿ ಜೀವನವನ್ನು ಬಿಗ್ ಬಾಸ್ ಮನೆಯಲ್ಲೂ ಮುಂದುವರೆಸುತ್ತಿರುವ ಸತೀಶ್ ಅವರ ಹಠಮಾರಿ ವರ್ತನೆಗೆ ಧನುಷ್ ಗೌಡ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ಸ್ಪರ್ಧಿಗಳ ತಾಳ್ಮೆಯ ಕಟ್ಟೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 11, 2025 | 7:31 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಚಿತ್ರ ವಿಚಿತ್ರ ಸ್ಪರ್ಧಿಗಳು ಆಗಮಿಸಿದ್ದಾರೆ. ಅನೇಕ ಸ್ಪರ್ಧಿಗಳು ತಮ್ಮ ಪ್ರತಿಷ್ಠೆ ಮುಖ್ಯ ಎಂಬ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಈಗ ದೊಡ್ಮನೆಯಲ್ಲಿ ಸತೀಶ್ ಅವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಒಂದಲ್ಲ, ಎರಡಲ್ಲ ಬರೋಬ್ಬರಿ ಆರು ಗಂಟೆ ಸ್ನಾನ ಮಾಡಿದ್ದಾರೆ! ಇದನ್ನು ನೋಡಿ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಅನೇಕರ ತಾಳ್ಮೆಯ ಕಟ್ಟೆ ಒಡೆದು ಹೋಗಿದೆ.

ಮನೆಯಲ್ಲಿ ನಡೆದಂತೆ ಬಿಗ್ ಬಾಸ್ ಮನೆಯಲ್ಲೂ ನಡೆದುಕೊಳ್ಳುತ್ತೇನೆ ಎಂದರೆ ಅದು ಸಾಧ್ಯವೇ ಇಲ್ಲ. ಇಲ್ಲಿ ಸಾಕಷ್ಟು ಶ್ರಮ ಹಾಕಬೇಕಾಗುತ್ತದೆ. ನಿಯಮಗಳಿಗೆ ತಕ್ಕಂತೆ ನಡೆದುಕೊಳ್ಳಬೇಕಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹಲವು ಅಭ್ಯಾಸಗಳನ್ನು ಬಿಡಬೇಕಾಗುತ್ತದೆ. ಆದರೆ, ಸತೀಶ್ ಮಾತ್ರ ಇದ್ಯಾವುದಕ್ಕೂ ಸಿದ್ಧರಿಲ್ಲ.

ಸತೀಶ್ ಶ್ರೀಮಂತ ಜೀವನ ನಡೆಸಿಕೊಂಡು ಬಂದವರು. ಅವರು ಮನೆಯಲ್ಲಿದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಈಗ ದೊಡ್ಮನೆಗೆ ಅವರಿಗೆ ಕಷ್ಟ ಆಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಆ ರೀತಿ ಆಗುತ್ತಿಲ್ಲ. ಅಲ್ಲಿಯೂ ಅವರು ತಮಗೆ ಬೇಕಾದಂತೆ ವಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು
Image
‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ?
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ

ಸತೀಶ್ ಅವರು ಬಿಗ್ ಬಾಸ್ ಮನೆಯಲ್ಲಿ 4-6 ತಾಸುಗಳಷ್ಟು ಸ್ನಾನ ಮಾಡಿದ್ದಾರೆ. ಅವರ ಜೋಡಿ ಚಂದ್ರಪ್ರಭ ಅವರು ಬಾತ್​ರೂಂನಲ್ಲಿ ಕುಳಿತು ಕುಳಿತು ಸುಸ್ತಾಗಿದ್ದಾರೆ. ಇದನ್ನು ಅವರಿಂದ ತಡೆದುಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಈ ವಿಚಾರದಲ್ಲಿ ಅವರ ತಾಳ್ಮೆಯ ಕಟ್ಟೆ ಒಡೆದಿದೆ. ಬಾಯಾರಿಕೆ ಆದರೂ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ಮಾಡಿಕೊಂಡು  ಗಾಜಿನ ಲೋಟವನ್ನು ಬೀಸಿ ನೆಲಕ್ಕೆ ಎಸೆದಿದ್ದಾರೆ. ಇದರಿಂದ ಗಾಜಿನ ಲೋಟ ಒಡೆದು ಚೂರಾಗಿದೆ.

ಇದನ್ನೂ ಓದಿ: ಕಾಮಿಡಿ ಬಿಟ್ಟು ಕೆಂಡವಾದ ಚಂದ್ರಪ್ರಭ: ಬಿಗ್ ಬಾಸ್ ಮನೆಯ ವಸ್ತುಗಳಿಗೂ ಹಾನಿ

ಸತೀಶ್ ನಡೆದುಕೊಳ್ಳುತ್ತಿರುವ ರೀತಿ ಸರಿ ಇಲ್ಲ ಎಂದು ಮನೆಯ ಅನೇಕರು ಹೇಳಿದ್ದಾರೆ. ಆದರೆ, ಸತೀಶ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲೇ ಇಲ್ಲ. ‘ನಾನು ಇರೋದೇ ಹೀಗೆ. ನಾನು ಹೀಗೆಯೇ ನಡೆದುಕೊಳ್ಳೋದು’ ಎಂದು ಆವಾಜ್ ಹಾಕಿದ್ದಾರೆ. ಇದು ಅನೇಕರಿಗೆ ಬೇಸರ ಮೂಡಿಸಿದೆ. ಧನುಷ್ ಗೌಡ ಜಗಳಕ್ಕೆ ಮುಂದಾಗಿದ್ದಾರೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಈ ಮಾತಿನ ಚಕಮಕಿ ಸಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ