AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ; ಜಿಲ್ಲಾಧಿಕಾರಿ ಹೇಳಿಕೆ

ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋಗೆ ಸೆಟ್ ಹಾಕಲಾಗಿದೆ. ಆದರೆ ಶೋ ನಡೆಸಲು ಬೇಕಿರುವ ಅಗತ್ಯ ಅನುಮತಿಗಳನ್ನು ಆಯೋಜಕರು ಇನ್ನೂ ಪಡೆದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ; ಜಿಲ್ಲಾಧಿಕಾರಿ ಹೇಳಿಕೆ
Kichcha Sudeep
ಪ್ರಶಾಂತ್​ ಬಿ.
| Edited By: |

Updated on: Sep 01, 2026 | 4:45 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಹಲವು ವಿಘ್ನಗಳು ಎದುರಾಗುತ್ತಿವೆ. ಸಂಬಂಧಿಸಿದ ಇಲಾಖೆಗಳಿಂದ ಸೂಕ್ತ ಅನುಮತಿ ಪಡೆಯದ ಕಾರಣ ಕಳೆದ ವರ್ಷ ಶೋ ಅರ್ಧಕ್ಕೆ ಸ್ಥಗಿತ ಆಗಿತ್ತು. ಈ ವರ್ಷ ಕೂಡ ಅದೇ ರೀತಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಬಿಗ್ ಬಾಸ್ (Bigg Boss Kannada) ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ ಎಂದು ಬೆಂಗಳೂರು ದಕ್ಷಿಣ ಡಿಸಿ ಯಶವಂತ್ ಗುರುಕರ್ ಅವರು ಹೇಳಿಕೆ ನೀಡಿದ್ದಾರೆ. ಆದ್ದರಿಂದ ನಿಗದಿತ ಸಮಯದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 13’ (BBK 13) ಶೋ ಆರಂಭ ಆಗುತ್ತಾ ಎಂಬ ಅನುಮಾನ ಶುರುವಾಗಿದೆ.

ಜಾಲಿವುಡ್​ನವರು ಮಾಲಿನ್ಯ ‌ನಿಯಂತ್ರಣ ಮಂಡಳಿಯಲ್ಲಿ ಕನ್ಸೆಂಟ್ ಫಾರ್ ಎಸ್ಟಾಬ್ಲಿಷ್‌ಮೆಂಟ್​ಗೆ ಅನುಮತಿ ಪಡೆದಿದ್ದಾರೆ. ಅಪ್ರೂವಲ್ ಆಗುವುದಕ್ಕೆ ಬೋರ್ಡ್​​ನಲ್ಲಿ ಪೆಂಡಿಂಗ್ ಇದೆ. ಪರಿಸರ ಇಲಾಖೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಸೂಚನೆಯಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಶೋ ನಡೆಸಲು ಅನುಮತಿಗೆ ಯಾವುದೇ ಅರ್ಜಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

‘ಜಿಲ್ಲಾಡಳಿತಕ್ಕೆ ಯಾವುದೇ ರೀತಿಯ ಅಪ್ಲಿಕೇಷನ್ ಬಂದಿಲ್ಲ. ಅರ್ಜಿ ಬಂದ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ’ ಎಂದು ಯಶವಂತ್ ಗುರುಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಬಿಗ್​ಬಾಸ್ ರಿಯಾಲಿಟಿ ಶೋ ನಡೆಸಲು ಅನುಮತಿ ಕಡ್ಡಾಯ. ಅರ್ಜಿಯಲ್ಲಿ ನೀಡಿರುವ ಮಾಹಿತಿಯ ಆಧಾರದಲ್ಲಿ ಪರಿಶೀಲನೆ ಮಾಡುತ್ತೇವೆ. ಅರ್ಜಿಯಲ್ಲಿರುವ ಅಂಶದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಬಳಿಕ ಅನುಮತಿ ನೀಡುವ ಕುರಿತು ತೀರ್ಮಾನ ಮಾಡುತ್ತೇವೆ. ಬಿಗ್‌ಬಾಸ್ ಶೋಗೆ ಅವಕಾಶ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಎಂಟ್ರಿ ಕೊಡೋರು ಇವರೇನಾ? ಹರಿದಾಡ್ತಿದೆ ಸೀರಿಯಲ್ ಕಲಾವಿದರ ಪಟ್ಟಿ

‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸೆಪ್ಟೆಂಬರ್ 6ರಂದು ಶೋ ಆರಂಭಿಸುವುದಾಗಿ ‘ಕಲರ್ಸ್ ವಾಹಿನಿ’ ಈಗಾಗಲೇ ಘೋಷಣೆ ಮಾಡಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ವರ್ಷನ್ ಬಿಗ್ ಬಾಸ್ ಕೂಡ ಅದೇ ದಿನ ಆರಂಭ ಆಗಬೇಕಿದೆ. ಆದರೆ ಕನ್ನಡದ ಬಿಗ್ ಬಾಸ್ ಆಯೋಜಕರು ಅನುಮತಿ ಪಡೆಯದೇ ಇರುವುದು ಈಗ ತಿಳಿದುಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ