AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidharth Shukla Death: ಬಿಗ್​ ಬಾಸ್​ ವಿನ್ನರ್ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ನಿಧನ​

Sidharth Shukla dies: ಬಿಗ್ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಸಿದ್ಧಾರ್ಥ್​ ಶುಕ್ಲಾ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಗುರುವಾರ (ಸೆ.2) ಅವರ ಅಭಿಮಾನಿಗಳಿಗೆ ಈ ಸುದ್ದಿ ಸಿಡಿಲಿನಂತೆ ಬಂದೆರಗಿದೆ.

Sidharth Shukla Death: ಬಿಗ್​ ಬಾಸ್​ ವಿನ್ನರ್ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ನಿಧನ​
ಸಿದ್ಧಾರ್ಥ್​ ಶುಕ್ಲಾ
TV9 Web
| Edited By: |

Updated on:Sep 02, 2021 | 12:47 PM

Share

ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ (ಸೆ.2) ಹೃದಯಾಘಾತದಿಂದ ಮೃತರಾಗಿದ್ದಾರೆ. ಬಿಗ್​ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಆಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ ಗಳಿಸಿದ್ದರು. ಬುಧವಾರ ರಾತ್ರಿ ಮಲಗುವಾಗು ಅವರು ಯಾವುದೋ ಔಷಧಿ ಸೇವಿಸಿದ್ದರು. ಆದರೆ ಗುರುವಾರ ಬೆಳಗ್ಗೆಯೊಳಗೆ ಅವರು ನಿಧನರಾಗಿದ್ದಾರೆ ಎಂದು ಮುಂಬೈನ ಕೂಪರ್​ ಆಸ್ಪತ್ರೆ ಮೂಲಗಳು ತಿಳಿಸಿವೆ. ಸಿದ್ಧಾರ್ಥ್​ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರು ಕಂಬನಿ ಮಿಡಿಯುತ್ತಿದ್ದಾರೆ.

ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಸಿದ್ಧಾರ್ಥ್​ ಶುಕ್ಲಾ ಅಗಲಿದ್ದಾರೆ. ಮಾಡೆಲ್​ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಅವರು ವಿನ್ನರ್​ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್​ ಬಾಸ್​ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್​ 7’ರಲ್ಲೂ ಅವರು ವಿನ್ನರ್​ ಆಗಿದ್ದರು. ಬಿಗ್​ ಬಾಸ್​ 14ರಲ್ಲಿ ಅವರು ಗೆಸ್ಟ್​ ಆಗಿ ದೊಡ್ಮನೆ ಪ್ರವೇಶಿಸಿದ್ದರು.

ಸೀರಿಯಲ್​ನಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದು ಮಾತ್ರವಲ್ಲದೆ, ಹಲವು ಧಾರಾವಾಹಿ​ಗಳಲ್ಲಿ ಸಿದ್ಧಾರ್ಥ್​ ಶುಕ್ಲಾ ಅತಿಥಿ ಪಾತ್ರ ಮಾಡಿದ್ದರು. ಬಾಲಿವುಡ್​ನ ಕೆಲವು ಸಿನಿಮಾಗಳಲ್ಲೂ ಕೂಡ ಅವರು ನಟಿಸಿದ್ದರು. ವರುಣ್​ ಧವನ್​ ನಾಯಕತ್ವದ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಚಿತ್ರದಲ್ಲಿ ಅವರೊಂದು ಪಾತ್ರ ಮಾಡಿದ್ದರು. ಏಕ್ತಾ ಕಪೂರ್​ ನಿರ್ಮಾಣದ ‘ಬ್ರೋಕನ್​ ಬಟ್​ ಬ್ಯೂಟಿಫುಲ್​ 3’ ವೆಬ್​ ಸಿರೀಸ್​ನಲ್ಲಿ ಸಿದ್ಧಾರ್ಥ್​ ನಟಿಸಿದ್ದರು. ಈ ವರ್ಷ ಓಟಿಟಿ ಮೂಲಕ ಅದು ರಿಲೀಸ್​ ಆಗಿತ್ತು. ಬಣ್ಣದ ಲೋಕದಲ್ಲಿ ಇನ್ನೂ ಹಲವು ವರ್ಷ ಮಿಂಚಬೇಕಾಗಿದ್ದ ಅವರು ಈಗ ಸಾವಿನ ಮನೆ ಸೇರಿರುವುದು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ.

ಸೋಶಿಯಲ್​ ಮೀಡಿಯಾದಲ್ಲಿ ಸಿದ್ಧಾರ್ಥ್ ಶುಕ್ಲಾ ಲಕ್ಷಾಂತರ ಹಿಂಬಾಲಕರನ್ನು ಹೊಂದಿದ್ದರು. ಟ್ವಿಟರ್​ನಲ್ಲಿ 10 ಲಕ್ಷ ಹಾಗೂ ಇನ್​ಸ್ಟಾಗ್ರಾಮ್​ನಲ್ಲಿ 36 ಲಕ್ಷ ಜನರು ಅವರನ್ನು ಫಾಲೋ ಮಾಡುತ್ತಿದ್ದರು. ಫಿಟ್​ನೆಸ್​ ಬಗ್ಗೆ ಅವರು ಅಪಾರ ಕಾಳಜಿ ಹೊಂದಿದ್ದರು. ಪಾಸಿಟಿವ್​ ಆಲೋಚನೆಗಳಿರುವ ಪೋಸ್ಟ್​ಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದರು. ಇಂಥ ನಟ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿರುವುದು ಎಲ್ಲರಿಗೂ ಶಾಕ್​ ನೀಡಿದೆ.

ಬಿಗ್​ ಬಾಸ್​ ಸೀಸನ್​ 13ರಲ್ಲಿ ಸಿದ್ಧಾರ್ಥ್​ ಜೊತೆ ಸ್ಪರ್ಧಿಸಿದ್ದ ಅನೇಕರು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಸಿದ್ಧಾರ್ಥ್​ ಸಾವಿನ ಬಗ್ಗೆ ಕೆಲವು ಅನುಮಾನಗಳು ಕೂಡ ವ್ಯಕ್ತವಾಗುತ್ತಿವೆ. ಹಾಗಾಗಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಏನು ಬರಬಹುದು ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ:

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ

Heart Health: ಹೃದಯಾಘಾತ ಮಾತ್ರ ಅಲ್ಲ, ಹೃದಯಕ್ಕೆ ಸಂಬಂಧಿಸಿದ ಇನ್ನಿತರ ಕಾಯಿಲೆಗಳಿಂದ ಪಾರಾಗಲು ಸದಾ ಪ್ರಯತ್ನಿಸಿ

Published On - 11:52 am, Thu, 2 September 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ