AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ: ಅಸಲಿ ವಿಷಯ ತಿಳಿಸಿದ ಬಿಗ್ ಬಾಸ್ ವಿನ್ನರ್

ಬಿಗ್ ಬಾಸ್ ವಿನ್ನರ್ ಗೌರವ್ ಖನ್ನಾ ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಅದರ ಜೊತೆಗೆ ಕಾರು ಹಾಗೂ ಇತರೆ ಕೂಪನ್​ಗಳು ಕೂಡ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಇನ್ನೂ ಕೂಡ ಅವರಿಗೆ ಬಹುಮಾನದ ಹಣ ಸಿಕ್ಕಿಲ್ಲ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

50 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ: ಅಸಲಿ ವಿಷಯ ತಿಳಿಸಿದ ಬಿಗ್ ಬಾಸ್ ವಿನ್ನರ್
Gaurav Khanna
ಮದನ್​ ಕುಮಾರ್​
|

Updated on: Mar 11, 2026 | 8:39 PM

Share

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಹಿಂದಿ ಸೀಸನ್ 19’ರ (Bigg Boss 19) ಟ್ರೋಫಿ ಮುಡಿಗೇರಿಸಿಕೊಂಡ ನಟ ಗೌರವ್ ಖನ್ನಾ ಈಗ ಸುದ್ದಿಯಲ್ಲಿದ್ದಾರೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆದ ಅದ್ದೂರಿ ಫಿನಾಲೆಯಲ್ಲಿ ಗೌರವ್ ವಿನ್ನರ್ ಎಂದು ಸಲ್ಮಾನ್ ಖಾನ್ ಘೋಷಿಸಿದ್ದರು. ಆದರೆ ಮೂರು ತಿಂಗಳು ಕಳೆದರೂ ಕೂಡ ತಮಗೆ ಇನ್ನೂ ಶೋನ ಬಹುಮಾನದ ಮೊತ್ತ ತಲುಪಿಲ್ಲ ಎಂಬ ವಿಷಯವನ್ನು ಗೌರವ್ ಖನ್ನಾ (Gaurav Khanna) ಬಹಿರಂಗಪಡಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಸಹ ಅವರು ತಿಳಿಸಿದ್ದಾರೆ.

ಇತ್ತೀಚಿನ ತಮ್ಮ ಯೂಟ್ಯೂಬ್ ವ್ಲಾಗ್‌ನಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಗೌರವ್ ಖನ್ನಾ ಉತ್ತರಿಸಿದರು. ‘ನಿಮಗೆ ಬಿಗ್ ಬಾಸ್‌ನಲ್ಲಿ ಭರವಸೆ ನೀಡಿದ ನಗದು ಹಣ, ಕಾರು ಮತ್ತು ಕೂಪನ್‌ಗಳು ಸಿಕ್ಕಿವೆಯೇ’ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸಿದ್ದಾರೆ. ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇದಕ್ಕೆ ಸಮಯ ಬೇಕಾಗುತ್ತದೆ. ನನಗೆ ಇನ್ನೂ ಹಣ ಬಂದಿಲ್ಲ. ಆದರೆ ಅದು ಖಂಡಿತಾ ಬರುತ್ತದೆ ಎಂಬ ನಂಬಿಕೆ ನನಗಿದೆ, ಏಕೆಂದರೆ ಅದಕ್ಕೊಂದು ಪ್ರಕ್ರಿಯೆ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

ಕಂಪನಿಯ ಆಂತರಿಕ ಲೆಕ್ಕಾಚಾರ ಮತ್ತು ಇತರ ಪ್ರಕ್ರಿಯೆಗಳಿಂದಾಗಿ ಬಹುಮಾನದ ಹಣ ಕೈ ಸೇರಲು ಸುಮಾರು 1ರಿಂದ 2 ತಿಂಗಳು ಬೇಕಾಗಬಹುದು ಎಂದು ಅವರು ತಿಳಿಸಿದ್ದಾರೆ. ‘ನಾನು ಟಿವಿ ಕ್ಷೇತ್ರದವನು. ಇಲ್ಲಿ ಇಂತಹ ವಿಳಂಬಗಳು ಸಹಜ. ಹಣ ಬಂದೇ ಬರುತ್ತದೆ’ ಎಂದು ಗೌರವ್ ಖನ್ನಾ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಬಿಗ್ ಬಾಸ್ ಗೆದ್ದ ನಂತರ ಜೀವನದಲ್ಲಿ ಏನು ಬದಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಗೌರವ್, ‘ಈಗ ಪ್ರತಿ ದಿನ ಕಾನ್ಪುರದಲ್ಲಿರುವ ನನ್ನ ಮನೆಗೆ ಸುಮಾರು 50ರಿಂದ 60 ಜನರು ಭೇಟಿ ನೀಡುತ್ತಿದ್ದಾರೆ. ಜನರು ನನ್ನನ್ನು ಗುರುತಿಸುತ್ತಿರುವುದು ಖುಷಿ ನೀಡಿದೆ’ ಎಂದು ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಗೌರವ್ ತೋರಿದ ಸಂಯಮದ ಆಟಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ತಾವು ಈ ಹಿಂದೆ ಮಾಡಿದ ಎಲ್ಲಾ ಶೋಗಳಿಗಿಂತಲೂ ಬಿಗ್ ಬಾಸ್ ಮೂಲಕ ಸಿಕ್ಕಿರುವ ಖ್ಯಾತಿ ಮತ್ತು ಪ್ರೀತಿ ದೊಡ್ಡದು ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಹೋಸ್ಟ್ ಆದ ಸೌರವ್ ಗಂಗೂಲಿ; ಹೊಸ ಕ್ಷೇತ್ರಕ್ಕೆ ಕಾಲಿಟ್ಟ ದಾದ

ಕನ್ನಡದಲ್ಲಿ ಈವರೆಗೂ ಬಿಗ್ ಬಾಸ್ ಕಾರ್ಯಕ್ರಮದ 12 ಸೀಸನ್​​ಗಳು ನಡೆದಿವೆ. 12ನೇ ಸೀಸನ್​​ನಲ್ಲಿ ಗಿಲ್ಲಿ ನಟ ಅವರು ವಿನ್ನರ್ ಆದರು. ಅವರು ಕೂಡ ಹಲವು ಕಾರ್ಯಕ್ರಮಗಳಿಗೆ ಅತಿಥಿಯಾಗಿ ಹೋಗುತ್ತಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಮುಂದಿನ ಸೀಸನ್​ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!