AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ; ವರ್ಕೌಟ್ ಶುರು ಮಾಡಿದ ಗಿಲ್ಲಿ ನಟ

ಬಿಗ್ ಬಾಸ್ ಕನ್ನಡ 12 ವಿಜೇತ ಗಿಲ್ಲಿ ನಟ ಈಗ ತಮ್ಮ ದೇಹದಂಡನೆ (ವರ್ಕೌಟ್) ಆರಂಭಿಸಿದ್ದಾರೆ. ಸದಾ ಫಿಟ್‌ನೆಸ್ ಬಗ್ಗೆ ಅಷ್ಟಾಗಿ ಗಮನ ಹರಿಸದ ಗಿಲ್ಲಿ, ಈಗ ಜಿಮ್‌ನಲ್ಲಿ ಕಠಿಣ ಅಭ್ಯಾಸ ಮಾಡುತ್ತಿದ್ದಾರೆ. ಇದು ಅವರು ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಕಾಲಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ಗಿಲ್ಲಿಗೆ ನಿರ್ದೇಶನದತ್ತ ಹೆಚ್ಚಿನ ಆಸಕ್ತಿ ಇರುವುದು ವಿಶೇಷ.

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ; ವರ್ಕೌಟ್ ಶುರು ಮಾಡಿದ ಗಿಲ್ಲಿ ನಟ
ಗಿಲ್ಲಿ ನಟ
ರಾಜೇಶ್ ಹೆಗಡೆ ದುಗ್ಗುಮನೆ
|

Updated on: Apr 04, 2026 | 7:48 AM

Share

ಗಿಲ್ಲಿ ನಟ ಅವರು (Gilli Nata) ‘ಬಿಗ್ ಬಾಸ್ ಕನ್ನಡ ಸೀಸನ್ 12’ ಗೆದ್ದ ಬಳಿಕ ಅಪಾರ ಜನಪ್ರಿಯತೆ ಪಡೆದುಕೊಂಡರು. ಅವರಿಗೆ ಇನ್​​ಸ್ಟಾಗ್ರಾಮ್ ಅಲ್ಲಿ 2.2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಬಿಗ್ ಬಾಸ್​​ಗೆ ಬಂದು ಸ್ಪರ್ಧಿಯೊಬ್ಬರು ಇಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದು ಇದೇ ಮೊದಲು. ಈಗ ಗಿಲ್ಲಿ ನಟ ಅವರು ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ. ಏಕೆಂದರೆ ಅವರು ಜಿಮ್​​ನಲ್ಲಿ ವರ್ಕೌಟ್ ಶುರು ಮಾಡಿದ್ದಾರೆ.

ಗಿಲ್ಲಿ ನಟ ಅವರು ತಮ್ಮ ಫಿಟ್ನೆಸ್​​ಗೆ ಎಂದಿಗೂ ಪ್ರಾಮುಖ್ಯತೆ ಕೊಟ್ಟವರಲ್ಲ. ಅದೇ ರೀತಿ ಸ್ಟೈಲ್ ಬಗ್ಗೆಯೂ ಅವರು ಗಮನ ಹರಿಸಿದವರಲ್ಲ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರು ಕೇವಲ ಒಂದು ಶಾರ್ಟ್ಸ್, ಬನಿಯನ್ ಹಾಕಿ ಓಡಾಡುತ್ತಿದ್ದರು. ತಲೆಕೂದಲು ಬಾಚಿಕೊಳ್ಳುತ್ತಾ ಇರಲಿಲ್ಲ. ಹೊರಗೆ ಯಾವ ರೀತಿ ಇದ್ದೀನೋ ಅದೇ ರೀತಿ ಬಿಗ್ ಬಾಸ್ ಮನೆಯಲ್ಲೂ ಇದ್ಧೇನೆ ಎಂದು ಗಿಲ್ಲಿ ಹೇಳುತ್ತಿದ್ದರು.

ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ಅವರು ಜಿಮ್ ಅಲ್ಲಿ ವರ್ಕೌಟ್ ಮಾಡುವ ಪ್ರಯತ್ನ ಮಾಡಿದ್ದರು. ‘ವರ್ಕೌಟ್ ಮಾಡೋ. ಫಿಟ್ ಆಗಿರ್ತೀಯಾ’ ಎಂದು ರಘು ಅವರು ಅನೇಕ ಬಾರಿ ಗಿಲ್ಲಿಗೆ ಹೇಳಿದ್ದು ಇದೆ. ಇದನ್ನು ಗಿಲ್ಲಿ ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಬಿಗ್ ಬಾಸ್ ಮನೆಯಿಂದ ಬಂದ ಬಳಿಕ ಈ ವಿಷಯದಲ್ಲಿ ಸೀರಿಯಸ್ ಆದಂತೆ ಇದೆ.

ಈಗ ಫಿಟ್ನೆಸ್ ಟ್ರೇನರ್ ಕೌಶಿಕ್ ಗೌಡ ಅವರು ಗಿಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಭರ್ಜರಿಯಾಗಿ ವರ್ಕೌಟ್ ಮಾಡುತ್ತಿದ್ದಾರೆ. ಗಿಲ್ಲಿಗೆ ಫಿಟ್ನೆಸ್ ಬಗ್ಗೆ ಕಾಳಜಿ ಬಂದಿದ್ದು ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ‘ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಒಂದು ಲೆಕ್ಕ’ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು? 

ಗಿಲ್ಲಿ ವರ್ಕೌಟ್ ಆರಂಭಿಸಿದ್ದು ನೋಡಿ ಅವರು ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರಾ ಎನ್ನುವ ಕುತೂಹಲವೂ ಮೂಡಿದೆ. ಅವರಿಗೆ ಹೀರೋ ಆಗುವುದಕ್ಕಿಂತ, ನಿರ್ದೇಶನದಲ್ಲಿ ಸಾಕಷ್ಟು ಆಸಕ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು