AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನಿಗೆ ವಿಶೇಷವಾಗಿ ಬರ್ತ್​ಡೇ ವಿಶ್ ಮಾಡಿದ ದಿವ್ಯಾ ಉರುಡುಗ; ಇಲ್ಲಿದೆ ವಿಡಿಯೋ

ಮೊದಲಿನಿಂದಲೂ ತಾಯಿ ಹಾಗೂ ತಂದೆ ಕಡೆಯಿಂದ ಬೆಂಬಲ ಸಿಗುತ್ತಿದೆ ಎಂಬ ಮಾತನ್ನು ದಿವ್ಯಾ ಹೇಳಿಕೊಂಡಿದ್ದರು. ಈ ಕಾರಣಕ್ಕೂ ದಿವ್ಯಾಗೆ ಅಮ್ಮನ ಮೇಲೆ ಸಾಕಷ್ಟು ಪ್ರೀತಿ ಇದೆ.

ಅಮ್ಮನಿಗೆ ವಿಶೇಷವಾಗಿ ಬರ್ತ್​ಡೇ ವಿಶ್ ಮಾಡಿದ ದಿವ್ಯಾ ಉರುಡುಗ; ಇಲ್ಲಿದೆ ವಿಡಿಯೋ
ತಾಯಿ ಜತೆ ದಿವ್ಯಾ ಉರುಡುಗ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 01, 2022 | 3:53 PM

Share

ದಿವ್ಯಾ ಉರುಡುಗ (Divya Uruduga) ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಬ್ಯುಸಿ ಆಗಿದ್ದಾರೆ. ಆದರೆ, ದೊಡ್ಡ ಮಟ್ಟದ ಯಶಸ್ಸು ಸಿಕ್ಕಿರಲಿಲ್ಲ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ ನಂತರ ದಿವ್ಯಾ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡರು. ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಿತು. ಬರೋಬ್ಬರಿ 8 ಲಕ್ಷ ಮಂದಿ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಈಗ ದಿವ್ಯಾ ಉರುಡುಗ ಅವರು ತಾಯಿಗೆ ಬರ್ತ್​ಡೇ ವಿಶ್ ಮಾಡಿದ್ದರೆ. ತಾಯಿ ಕುಸುಮಾ ಮಂಜುನಾಥ್ ಜತೆ ಕಳೆದ ಸುಂದರ ಕ್ಷಣಗಳನ್ನು ಜೋಡಿಸಿ ಅವರು ರೀಲ್ಸ್ ಮಾಡಿ ಹಾಕಿದ್ದಾರೆ. ಈ ವಿಡಿಯೋಗೆ ಸಾಕಷ್ಟು ಲೈಕ್ಸ್ ಹಾಗೂ ವೀವ್ಸ್ ಸಿಕ್ಕಿದೆ.

ದಿವ್ಯಾ ಉರುಡುಗ ಅವರು ಬಿಗ್ ಬಾಸ್​ಗೆ ಬಂದಾಗ ತಮ್ಮ ತಂದೆ-ತಾಯಿಯ ಬೆಂಬಲದ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಮೊದಲಿನಿಂದಲೂ ತಾಯಿ ಹಾಗೂ ತಂದೆ ಕಡೆಯಿಂದ ಬೆಂಬಲ ಸಿಗುತ್ತಿದೆ ಎಂಬ ಮಾತನ್ನು ಅವರು ಹೇಳಿಕೊಂಡಿದ್ದರು. ಈ ಕಾರಣಕ್ಕೂ ದಿವ್ಯಾಗೆ ಅಮ್ಮನ ಮೇಲೆ ಸಾಕಷ್ಟು ಪ್ರೀತಿ ಇದೆ. ಇದನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ.

ಕುಸುಮಾ ಅವರ ಹಳೆಯ ಫೋಟೋಗಳು, ಅವರ ಜತೆ ಕಳೆದ ವಿಡಿಯೋಗಳನ್ನು ಜೋಡಿಸಿ ಅದನ್ನು ಇನ್​ಸ್ಟಾಗ್ರಾಮ್​ನಲ್ಲಿ ದಿವ್ಯಾ ಪೋಸ್ಟ್ ಮಾಡಿದ್ದಾರೆ. ಸಾಕಷ್ಟು ಪ್ರೀತಿಯ ಕ್ಷಣಗಳು ಈ ವಿಡಿಯೋದಲ್ಲಿ ಇದೆ. ಅಭಿಮಾನಿಗಳು ಕೂಡ ಕುಸಮಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಈ ರೀಲ್ಸ್ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

View this post on Instagram

A post shared by DU✨ (@divya_uruduga)

‘ಅರ್ಧಂಬರ್ಧ ಪ್ರೇಮ ಕಥೆ’ ಚಿತ್ರದಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಅವರ ಬಾಯ್​ಫ್ರೆಂಡ್ ಅರವಿಂದ್ ಕೂಡ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಘೋಷಣೆ ಆಗಬೇಕಿದೆ. ಈ ವಿಚಾರದ ಬಗ್ಗೆ ಅಧಿಕೃತ ಮಾಹಿತಿ ತಿಳಿದುಕೊಳ್ಳಲು ಫ್ಯಾನ್ಸ್ ಕಾದು ಕೂತಿದ್ದಾರೆ.

ಇದನ್ನೂ ಓದಿ: ದಿವ್ಯಾ ಉರುಡುಗ-ಅರವಿಂದ್ ಪಾಲಿಗೆ ವಿಶೇಷ ದಿನ; ಕಾರಣ ವಿವರಿಸಿದ ನಟಿ

ದಿವ್ಯಾ ಹಾಗೂ ಅರವಿಂದ್ ಬಿಗ್ ಬಾಸ್ ಮನೆಯಲ್ಲಿ ಪರಸ್ಪರ ಭೇಟಿ ಆದರು. ಇಬ್ಬರ ನಡುವೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಯಿತು. ಆ ಗೆಳೆತನ ಪ್ರೀತಿಗೆ ತಿರುಗಿದೆ. ಇವರು ಬೇಗ ಮದುವೆ ಆಗಲಿ ಎಂಬುದು ಫ್ಯಾನ್ಸ್ ಬಯಕೆ. ಇಬ್ಬರೂ ತಮ್ಮ ವೃತ್ತಿ ಜೀವನದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ