AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿ ಕೊಟ್ಟ ಬೆಂಬಲ ಪಳಾರ್ ಚಿತ್ರಕ್ಕೂ ಇರಲಿ’: ಅಭಿಮಾನಿಗಳಲ್ಲಿ ಗಿಲ್ಲಿ ಮನವಿ

Gilli Nata: ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ತಮ್ಮ ಅಭಿನಯದ 'ಪಳಾರ್' ಸಿನಿಮಾಗೆ ಬೆಂಬಲ ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ರಾಮನಗರ ಸುತ್ತಮುತ್ತ ಶೂಟಿಂಗ್ ಮುಗಿಸಿಕೊಂಡಿರುವ ಈ ಚಿತ್ರಕ್ಕೂ ಬಿಗ್ ಬಾಸ್‌ನಷ್ಟೇ ಪ್ರೋತ್ಸಾಹ ಸಿಗಲಿದೆ ಎಂಬ ಭರವಸೆಯನ್ನು ಕಾರ್ಯಕ್ರಮದ ವೇದಿಕೆಯಲ್ಲಿ ವ್ಯಕ್ತಪಡಿಸಲಾಗಿದೆ.

‘ಬಿಗ್ ಬಾಸ್​ನಲ್ಲಿ ಕೊಟ್ಟ ಬೆಂಬಲ ಪಳಾರ್ ಚಿತ್ರಕ್ಕೂ ಇರಲಿ’: ಅಭಿಮಾನಿಗಳಲ್ಲಿ ಗಿಲ್ಲಿ ಮನವಿ
ಗಿಲ್ಲಿ ನಟ
ರಾಜೇಶ್ ಹೆಗಡೆ ದುಗ್ಗುಮನೆ
|

Updated on:Aug 05, 2026 | 9:46 AM

Share

ಮುಖ್ಯಾಂಶಗಳು

  • ರಾಮನಗರ ಸುತ್ತಮುತ್ತ 'ಪಳಾರ್' ಶೂಟಿಂಗ್
  • ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ಗಿಲ್ಲಿ
  • 'ಬಿಗ್ ಬಾಸ್ ಥರವೇ ಸಿನಿಮಾ ಗೆಲ್ಲಿಸಿ' ಎಂದು ಮನವಿ 

ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಮೂಲಕ ಗಿಲ್ಲಿ ನಟ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈಗ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸೋಕೆ ರೆಡಿ ಆಗಿದ್ದಾರೆ. ಮುಂಬರುವ ಅವರ ಚಿತ್ರಕ್ಕೆ ‘ಪಳಾರ್’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಬಗ್ಗೆ ಅವರು ವೇದಿಕೆ ಒಂದರಲ್ಲಿ ಮಾತನಾಡಿದ್ದಾರೆ. ರಾಮನಗರ ಹಾಗೂ ಕನಕಪುರ ಸುತ್ತಮುತ್ತ ಸುಮಾರು 15 ರಿಂದ 20 ದಿನಗಳ ಕಾಲ ಈ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಗ್ ಬಾಸ್ ರೀತಿಯೇ ಪ್ರೋತ್ಸಾಹಿಸಿ

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಗಿಲ್ಲಿ, ‘ನನಗೆ ಬಿಗ್ ಬಾಸ್‌ನಲ್ಲಿದ್ದಾಗ ಎಷ್ಟು ಪ್ರೋತ್ಸಾಹ ಮತ್ತು ಪ್ರೀತಿ ನೀಡಿದಿರೋ, ಅದೇ ರೀತಿ ನಮ್ಮ ‘ಪಳಾರ್’ ಸಿನಿಮಾ ರಿಲೀಸ್ ಆದಾಗಲೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಬೆಂಬಲಿಸಬೇಕು’ ಎಂದು ಮನವಿ ಮಾಡಿಕೊಂಡರು. ಇದಕ್ಕೆ ನೆರೆದಿದ್ದ ಜನಸ್ತೋಮ ಕರತಾಡನದ ಮೂಲಕ ಧ್ವನಿಗೂಡಿಸಿತು.

100 ದಿನ ಓಡಿಸುವ ಭರವಸೆ

ಕಾರ್ಯಕ್ರಮದ ನಿರೂಪಕರು ಮಾತನಾಡಿ, ‘ಅಭಿಮಾನಿಗಳು ಬಿಗ್ ಬಾಸ್‌ನಲ್ಲಿ ಗಿಲ್ಲಿ ಅವರನ್ನು ಗೆಲ್ಲಿಸಿದ ರೀತಿಯೇ, ಈ ಪಳಾರ್ ಚಿತ್ರವನ್ನೂ 100 ಅಥವಾ 200 ದಿನಗಳ ಕಾಲ ಓಡಿಸಿ ಖಂಡಿತ ಗೆಲ್ಲಿಸುತ್ತಾರೆ’ ಎಂದು ಸಭಿಕರ ಪ್ರೀತಿಯನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಅವರದ್ದೇ ಟೈಟಲ್

‘ಪಳಾರ್’ ಸಿನಿಮಾ ಟೈಟಲ್ ಇಡೋದಕ್ಕೂ ಒಂದು ಕಾರಣ ಇದೆ. ‘ಬಿಗ್ ಬಾಸ್’ ಮನೆಯಲ್ಲಿ ಇದ್ದಾಗ ಎಲ್ಲರೂ ಗಿಲ್ಲಿಗೆ ಪಳಾರ್ ಎಂದು ಕರೆದರು. ಸ್ಥಳೀಯ ಪ್ರಾದೇಶಿಕ ಆಡುಭಾಷೆಯಲ್ಲಿ ‘ಪಳಾರ್’ ಎಂದರೆ ಚುರುಕಾದ, ಖಡಕ್ ಆದ ಅಥವಾ ರಫ್, ಮಾಸ್ ವ್ಯಕ್ತಿತ್ವದವ ಎಂಬ ಅರ್ಥದಲ್ಲೂ ಬಳಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:39 am, Wed, 5 August 26

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು