AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧ್ವಂಸ’ ರಾಪ್ ಸಾಂಗ್ ಮೂಲಕ ಅಭಿಮಾನಿಗಳ ಎದುರು ಬರಲು ರೆಡಿ ಆದ ಮಂಜು

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಹೊರಬಂದು ಕೆಲಕಾಲ ಮೌನವಾಗಿದ್ದ ಮಾಡರ್ನ್ ಮಹಾಕವಿ ಮಂಜು ಈಗ ಹೊಸದಾದ 'ಧ್ವಂಸ' ಎಂಬ ರಾಪ್ ಸಾಂಗ್ ಮೂಲಕ ವಾಪಸಾಗಿದ್ದಾರೆ. ಕನ್ನಡದ ವೀಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಹೊಸ ಮ್ಯೂಸಿಕ್ ಟ್ರ್ಯಾಕ್ ಸಿದ್ಧಪಡಿಸುತ್ತಿರುವುದಾಗಿ ವಿಡಿಯೋದಲ್ಲಿ ಘೋಷಿಸಿದ್ದಾರೆ. ಅವರೇ ಈ ಹಾಡನ್ನು ಬರೆದಿದ್ದಾರೆ.

‘ಧ್ವಂಸ’ ರಾಪ್ ಸಾಂಗ್ ಮೂಲಕ ಅಭಿಮಾನಿಗಳ ಎದುರು ಬರಲು ರೆಡಿ ಆದ ಮಂಜು
ಮಂಜು
ರಾಜೇಶ್ ದುಗ್ಗುಮನೆ
|

Updated on: Oct 26, 2026 | 12:00 PM

Share

ಅಗ್ನಿ ಪರೀಕ್ಷೆ ಮೂಲಕ ಬಂದು ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಮಂಜು, ಕೆಲವೊಂದು ವಿವಾದಾತ್ಮಕ ಕಾರಣಗಳಿಂದ ಶೋ ಮಧ್ಯದಲ್ಲೇ ಹೊರಬಂದಿದ್ದರು. ಶೋನಿಂದ ಎಲಿಮಿನೇಟ್ ಆದ ಬಳಿಕ ಸ್ವಲ್ಪ ಕಾಲ ಸೈಲೆಂಟ್ ಆಗಿದ್ದ ಅವರು, ಈಗ ಅಚ್ಚರಿಯ ರೀತಿಯಲ್ಲಿ ಮತ್ತೆ ವಾಪಸಾಗಿದ್ದಾರೆ. ಅವರು ಫ್ಯಾನ್ಸ್​​ಗೆ ಸರ್​ಪ್ರೈಸ್ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಅವಾಚ್ಯ ಪದ ಬಳಕೆ ಮಾಡಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು. ಅವರು ಹೊರಬಂದ ನಂತರ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಸದ್ಯ ಹೊಸ ಪ್ರಾಜೆಕ್ಟ್ ಒಂದರ ಮೂಲಕ ಅಭಿಮಾನಿಗಳ ಮುಂದೆ ಸರ್‌ಪ್ರೈಸ್ ಆಗಿ ಪ್ರತ್ಯಕ್ಷರಾಗಿದ್ದಾರೆ. ಅವರ ಈ ಹೊಸ ಹೆಜ್ಜೆ ಈಗ ಕುತೂಹಲ ಮೂಡಿಸಿದೆ.

ತಮ್ಮ ಹೊಸ ವಿಡಿಯೋದಲ್ಲಿ ‘ಮಾಡರ್ನ್ ಮಹಾಕವಿ ಮಂಜು’ ಎಂದು ಪರಿಚಯ ಮಾಡಿಕೊಂಡಿರುವ ಅವರು, ಕನ್ನಡದ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿರುವುದಾಗಿ ಘೋಷಿಸಿದ್ದಾರೆ. ತಮ್ಮ ವಿಭಿನ್ನ ಶೈಲಿಯ ಮಾತುಗಳ ಮೂಲಕ ಅವರು ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

View this post on Instagram

A post shared by I’mVj (@i_am_crazyboy_vj)

ಈ ವಿಡಿಯೋದಲ್ಲಿ ‘ಧ್ವಂಸ’ ಎಂಬ ಹೊಸ ರಾಪ್ ಸಾಂಗ್ ಒಂದನ್ನು ತರುವುದಾಗಿ ಮಂಜು ಅಧಿಕೃತವಾಗಿ ತಿಳಿಸಿದ್ದಾರೆ. ಹಿನ್ನೆಲೆಯಲ್ಲಿ ಹೊಸ ಮ್ಯೂಸಿಕ್ ಟ್ರ್ಯಾಕ್ ಹಾಗೂ ಸ್ಟುಡಿಯೋ ಸೆಟಪ್ ಸಿದ್ಧವಾಗುತ್ತಿರುವುದನ್ನು ತೋರಿಸುವ ಮೂಲಕ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಿಟ್ಟು ಬಂದ ಬಳಿಕ ಮಂಜುಗೆ ಕಾಡುತ್ತಿದೆ ಪಶ್ಚಾತ್ತಾಪ

ಅತಿ ಶೀಘ್ರದಲ್ಲೇ ಈ ಹೊಸ ರಾಪ್ ಸಾಂಗ್ ಬಿಡುಗಡೆಯಾಗಲಿದ್ದು, ಅವರ ಹಾಡು ಪ್ರಾಸದಿಂದ ಕೂಡಿರಲಿದೆ ಎನ್ನಲಾಗಿದೆ. ಬಿಗ್ ಬಾಸ್ ಬಳಿಕ ಮಂಜು ಅವರೇ ಬರೆದಿರೋ ಈ ಹಾಡು ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಸೀಗೆ ಹುಣ್ಣಿಮೆ: ಕೊಪ್ಪಳ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರ ಮಹಾಪೂರ, ಜನಸಾಗರ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ