AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್ ಕನ್ನಡ ‘ಯಜಮಾನ’ ಧಾರಾವಾಹಿಗೆ ಯಮುನಾ ಶ್ರೀನಿಧಿ ಎಂಟ್ರಿ

‘ಯಜಮಾನ’ ಧಾರಾವಾಹಿಗೆ ಹೊಸ ಪಾತ್ರದ ಆಗಮನ ಆಗಿದೆ. ಅದುವೇ ಯಮುನಾ ಶ್ರೀನಿಧಿ. ಧಾರಾವಾಹಿಯಲ್ಲಿ, ಯಮುನಾ ಅಭಿನಯಿಸುವ ಪಾತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಯಮುನಾ ಅಭಿನಯಿಸುತ್ತಿರುವ ಸುಮಿತ್ರಾ ಪಾತ್ರ— ಕುಟುಂಬದ ಶಾಂತಿ ಮತ್ತು ಏಕತೆಯನ್ನು ಬಲಪಡಿಸುವ ಅವಳ ಸೂಕ್ಷ್ಮ ಸಂವೇದನೆ ಕಥೆಗೆ ಹೊಸ ತಿರುವುಗಳನ್ನು ನೀಡುತ್ತವೆ.

ಕಲರ್ಸ್ ಕನ್ನಡ ‘ಯಜಮಾನ’ ಧಾರಾವಾಹಿಗೆ ಯಮುನಾ ಶ್ರೀನಿಧಿ ಎಂಟ್ರಿ
ಯಜಮಾನ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 10, 2025 | 1:27 PM

Share

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿ ಆಗಿ ಗಮನ ಸೆಳೆದವರು ಯಮುನಾ ಶ್ರೀನಿಧಿ (Yamuna Srinidhi). ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ ಅವರು ಕಲಾವಿದೆಯಾಗಿ ಇಷ್ಟ ಆಗಿದ್ದಾರೆ. ಬಿಗ್ ಬಾಸ್ ಬಳಿಕ ಅವರಿಗೆ ಸಾಕಷ್ಟು ಆಫರ್​​ಗಳು ಸಿಕ್ಕಿವೆ. ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಯಜಮಾನ’ ಧಾರಾವಾಹಿಗೆ ಈಗ ಅವರು ಎಂಟ್ರಿ ಆಗಿದ್ದಾರೆ. ಈ ಧಾರಾವಾಹಿ ಮೂಲಕ ಅವರು ಗಮನ ಸೆಳೆಯಲು ರೆಡಿ ಆಗಿದ್ದಾರೆ.

‘ಯಜಮಾನ’ ಧಾರಾವಾಹಿಗೆ ಹೊಸ ಪಾತ್ರದ ಆಗಮನ ಆಗಿದೆ. ಅದುವೇ ಯಮುನಾ ಶ್ರೀನಿಧಿ. ಅವರು  ಸುಮಿತ್ರಾ ಹೆಸರಿನ ಪಾತ್ರದಲ್ಲಿ ಬರುತ್ತಿದ್ದಾರೆ.  ಹೊಸ ಪಾತ್ರದ ಮೂಲಕ ಧಾರಾವಾಹಿಗೆ ಹೊಸ ತಿರುವು ನೀಡಲು ಮತ್ತು ಧಾರಾವಾಹಿಯನ್ನು ಮತ್ತಷ್ಟು ರೋಚಕಗೊಳಿಸಲು ಅವರು ಸಿದ್ಧರಾಗಿದ್ದಾರೆ. ಯಮುನಾ ಅವರ ಧ್ವನಿ ದೊಡ್ಡದಾಗಿದೆ. ಅದು ಪಾತ್ರದ ಮೆರುಗು ಹೆಚ್ಚಿಸಬಹುದು.

ಧಾರಾವಾಹಿಯಲ್ಲಿ, ಯಮುನಾ ಅಭಿನಯಿಸುವ ಪಾತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಯಮುನಾ ಅಭಿನಯಿಸುತ್ತಿರುವ ಸುಮಿತ್ರಾ ಪಾತ್ರ— ಕುಟುಂಬದ ಶಾಂತಿ ಮತ್ತು ಏಕತೆಯನ್ನು ಬಲಪಡಿಸುವ ಅವಳ ಸೂಕ್ಷ್ಮ ಸಂವೇದನೆ ಕಥೆಗೆ ಹೊಸ ತಿರುವುಗಳನ್ನು ನೀಡುತ್ತವೆ.

ಧಾರಾವಾಹಿಯ ಖಳನಾಯಕಿ ತುಳಸಿ ಕುತಂತ್ರಿ, ಮಹತ್ವಾಕಾಂಕ್ಷಿ ಮತ್ತು ಗುರಿ ಸಾಧನೆಗಾಗಿ ಏನನ್ನೂ ಬಿಟ್ಟುಕೊಡದ ಸ್ವಭಾವದವಳು ಅವಳಾಗಿದ್ದಾಳೆ. ಕುಟುಂಬದ ಶಾಂತಿ ಮತ್ತು ಒಗ್ಗಟನ್ನು ಹಾಳು ಮಾಡಲು ಅವಳ ಸೂಕ್ಷ್ಮ ಸಂಚುಗಳು ಕಥೆಗೆ ಹೊಸ ತಿರುವುಗಳನ್ನು ನೀಡಲಿವೆ ಎನ್ನಲಾಗುತ್ತಿದೆ. ಯಮುನಾ ಶ್ರೀನಿಧಿಯ ಪ್ರವೇಶದೊಂದಿಗೆ, ‘ಯಜಮಾನ’ ಧಾರಾವಾಹಿ ಮತ್ತಷ್ಟು ಕುತೂಹಲ ಸೃಷ್ಟಿಸಿದೆ. ಅವರಿಂದ ಕತೆಯಲ್ಲಿ ಮತ್ತಷ್ಟು ಹೊಸತನ ನಿರೀಕ್ಷಿಸಬಹುದಾಗಿದೆ.

ವಿಶೇಷವಾಗಿ, ತನ್ನ ಮಗ ಪ್ರಣವ್, ಜಾನ್ಸಿಯನ್ನು ಮದುವೆಯಾಗಬೇಕೆಂದು ಒತ್ತಾಯಿಸುವ ತುಳಸಿಯ ಯೋಜನೆಗಳು ಪ್ರೇಕ್ಷಕರನ್ನು ಕುತೂಹಲದ ಅಂಚಿನಲ್ಲಿ ಇಡುತ್ತವೆ. ಜೊತೆಗೆ ಜಾನ್ಸಿಯು ತಾಯಿ ಸುಮಿತ್ರಾನ ಹೇಗೆ ಸೇರುತ್ತಾರೆ ಎಂಬುದು ಕುತೂಹಲ. ತುಳಸಿಯು ಯಮನುನಾನ  ಗುಪ್ತವಾಗಿ ಬಂಧಿಸಿರುವುದು ಕಥೆಯ ರೋಚಕತೆ ಮತ್ತು ಭಾವನಾತ್ಮಕ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಇದನ್ನೂ ಓದಿ:ನಿನ್ನೆಯಿಂದ ಮನಸ್ಸು ಕೇವಲ ದರ್ಶನ್ ಬಗ್ಗೆ ಮಾತ್ರ ಯೋಚಿಸುತ್ತಿದೆ: ಯಮುನಾ ಶ್ರೀನಿಧಿ, ನಟಿ  

ಜಾನ್ಸಿಗೆ ಅಪಘಾತ

ಜಾನ್ಸಿಗೆ ಅಪಘಾತ ಆದ ಮೇಲೆ ಅವಳ ನೆನಪಿನ ಶಕ್ತಿ ಸಂಪೂರ್ಣವಾಗಿ ಹೋಗಿದೆ. ಅವಳು ರಾಘುವನ್ನ ಮರೆತಿದ್ದಾಳೆ ಎಂಬುದು ಬೇಸರದ ವಿಷಯ. ತುಳಸಿ ಸಂಚು ಮಾಡಿರುವುದನ್ನು ತಪ್ಪಿಸಬೇಕಾದ ರಾಘು ಹೊಸ ಲುಕ್ ನೊಂದಿಗೆ ಬಂದಿರೋದು ಜನರಿಗೆ ಬಹಳ ಇಷ್ಟವಾಗಿದೆ. ರಾಘುವಿನ ಈ ಹೊಸ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕಲರ್ಸ್ ಕನ್ನಡದಲ್ಲಿ ಪ್ರತಿ ದಿನ ಸಂಜೆ 6 ಗಂಟೆಗೆ ‘ಯಜಮಾನ’ ಧಾರಾವಾಹಿ ಪ್ರಸಾರವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:45 am, Wed, 10 December 25

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ