AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಪಡೆಯುವ ಸಂಭಾವನೆ ಬಗ್ಗೆ ಧನರಾಜ್ ಆಚಾರ್ ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ. ಶೋನಲ್ಲಿ ಸಿಕ್ಕಾಪಟ್ಟೆ ದುಡ್ಡಿದ್ದು ಕೆಲವರಿಗೆ ವಿನ್ನರ್ ಪಡೆಯುವ ಮೊತ್ತದ ಅರ್ಧದಷ್ಟು ಸಂಭಾವನೆ ಸಿಗುತ್ತದೆ. ಅತಿ ಕಡಿಮೆ ಸಂಭಾವನೆ ಪಡೆದಿದ್ದು ನಾವೇ ಎಂದು ಧನರಾಜ್ ತಮಾಷೆಯಾಗಿ ಸಂದರ್ಶನದಲ್ಲಿ ಹೇಳಿದ್ದಾರೆ.

ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್
ಧನರಾಜ್
ರಾಜೇಶ್ ದುಗ್ಗುಮನೆ
|

Updated on: Jul 28, 2026 | 9:42 AM

Share

ಮುಖ್ಯಾಂಶಗಳು

  • ಬಿಗ್ ಬಾಸ್‌ನಲ್ಲಿ ಹಣ ಮಾಡೋದು ಗ್ಯಾರಂಟಿ
  • ವಿನ್ನರ್ ಮೊತ್ತದ ಅರ್ಧದಷ್ಟು ಸಂಭಾವನೆ
  • ಕಡಿಮೆ ದುಡ್ಡು ತಗೊಂಡಿದ್ದು ನಾವೇ ಅಂದ್ರು ಧನರಾಜ್

ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಎಷ್ಟು ಸಂಭಾವನೆ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಈ ಪ್ರಶ್ನೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಧನರಾಜ್ ಆಚಾರ್ ಕೊನೆಗೂ ಉತ್ತರಿಸಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು ಸಂಭಾವನೆಯ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಧನರಾಜ್ ನೀಡಿರುವ ಈ ಮಾಹಿತಿ ಅನೇಕರಿಗೆ ತೀವ್ರ ಅಚ್ಚರಿ ಮೂಡಿಸಿದೆ.

ಬಿಗ್ ಬಾಸ್ ಮನೆಯಿಂದ ದೊಡ್ಡ ಮಟ್ಟದಲ್ಲಿ ಹಣ ಸಂಪಾದನೆ ಮಾಡಬಹುದು ಎಂದು ಧನರಾಜ್ ಹೇಳಿದ್ದಾರೆ. ಮಾಡುವವರಿಗೆ ಬಿಗ್ ಬಾಸ್‌ನಲ್ಲಿ ಸಿಕ್ಕಾಪಟ್ಟೆ ದುಡ್ಡಿದೆ ಎಂದು ಅವರು ರಿವೀಲ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಪರ್ಧಿಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಬಿಗ್ ಬಾಸ್ ಗೆಲ್ಲುವ ವಿನ್ನರ್ ಪಡೆಯುವ ಪ್ರಶಸ್ತಿ ಮೊತ್ತದ ಅರ್ಧದಷ್ಟು ಹಣವನ್ನು ಕೆಲ ಪ್ರಮುಖ ಸ್ಪರ್ಧಿಗಳು ಸಂಭಾವನೆಯಾಗಿಯೇ ಪಡೆಯುತ್ತಾರೆ’ ಎಂಬ ವಿಷಯ ರಿವೀಲ್ ಆಗಿದೆ.

ಸಂದರ್ಶಕರು 25 ಲಕ್ಷ ರೂಪಾಯಿ ಇರಬಹುದೇ ಎಂದು ಕೇಳಿದಾಗ ಧನರಾಜ್ ನಗುತ್ತಾ ‘ತಾವು ಆ ಮೊತ್ತವನ್ನು ಬಾಯಿ ಬಿಟ್ಟು ಹೇಳುವುದಿಲ್ಲ’ ಎಂದು ಮೌನ ವಹಿಸಿದ್ದಾರೆ. ಇನ್ನು ಅತಿ ಕಡಿಮೆ ಸಂಭಾವನೆ ಯಾರಿಗೆ ಸಿಗುತ್ತದೆ ಎಂಬ ಪ್ರಶ್ನೆಗೂ ಧನರಾಜ್ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ಅತಿ ಕಡಿಮೆ ಸಂಭಾವನೆ ಪಡೆದವರು ನಾನೇ ಇರಬೇಕು ಎಂದು ಅವರು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಈ ಮೂಲಕ ಬಿಗ್ ಬಾಸ್ ಸಂಭಾವನೆಯ ರಹಸ್ಯವನ್ನು ಧನರಾಜ್ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ‘ಅರ್ಚನಾ ಕೊಟ್ಟಿಗೆ ಬಿಗ್ ಬಾಸ್​​ಗೆ ಬರಲಿ’; ವೀಕ್ಷಕರ ಒತ್ತಾಯ

ವಿನ್ನರ್​​ಗಳಿಗೆ 50 ಲಕ್ಷ ರೂಪಾಯಿ ಸಿಗುತ್ತದೆ. ಅದರ ಅರ್ಧದಷ್ಟು ಎಂದರೆ 25 ಲಕ್ಷ ರೂಪಾಯಿ. ಇಷ್ಟು ದೊಡ್ಡ ಮೊತ್ತವನ್ನು ಸಂಭಾವನೆಯನೇಯಾಗಿಯೇ ಪಡೆದುಕೊಂಡಿದ್ದಾರೆ ಎಂದರೆ ಅದು ಯಾವ ಸ್ಪರ್ಧಿ ಇರಬಹುದು ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ