‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ

ಬಿಗ್ ಬಾಸ್ ಕನ್ನಡ 12ರ ವಿನ್ನರ್ ಗಿಲ್ಲಿ ನಟರಾಜ್ ಅವರು ವಿಜಯದ ನಂತರದ ಭಾವನಾತ್ಮಕ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಾಸ್ತವಕ್ಕೆ ಮರಳಲು ಕಷ್ಟಪಡುತ್ತಿರುವ ಗಿಲ್ಲಿ, ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ, ಅವರು ತಮ್ಮ ಮುಂದಿನ ದೊಡ್ಡ ಹೆಜ್ಜೆಯ ಬಗ್ಗೆ ಕುತೂಹಲ ಕೆರಳಿಸುವ ಘೋಷಣೆ ಮಾಡಿದ್ದು, ಬಹುಶಃ 'ಗಿಚ್ಚಿ ಗಿಲಿಗಿಲಿ' ಶೋದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ
ಗಿಲ್ಲಿ

Updated on: Jan 22, 2026 | 10:38 AM

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ.

ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಹುಟ್ಟೂರಿನಲ್ಲಿ ರ್ಯಾಲಿ ನಡೆಸಿದರು. ಆ ಬಳಿಕ ಮಾಧ್ಯಮಗಳಿಗೆ ಸಂದರ್ಶನ ನೀಡಿದರು. ಈಗ ಅವರು ವಿಡಿಯೋ ಮಾಡಿ ಇನ್​​ಸ್ಟಾಗ್ರಾಮ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಆಗುತ್ತಿಲ್ಲ ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.

‘ನನ್ನ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ಬಿಗ್ ಬಾಸ್ ಮನೆಯಲ್ಲಿರುವಾಗ ಜನರಿಂದ ಇಷ್ಟೊಂದು ಬೆಂಬಲ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ. ಈಗಲೂ ಇದನ್ನು ನಂಬೋಕೆ ಆಗುತ್ತಿಲ್ಲ. ಟ್ಯಾಟೂ ಹಾಕಿಸಿಕೊಂಡ, ಹರಕೆ ಹೊತ್ತವರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾದಲ್ಲಿ ಬೆಂಬಲಿಸಿದವರಿಗೆ ಧನ್ಯವಾದ‘ ಎಂದಿದ್ದಾರೆ ಗಿಲ್ಲಿ.

ಆ ಬಳಿಕ ಅವರು ಹೊಸ ಘೋಷಣೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋಗೆ ಕ್ಯಾಪ್ಶನ್ ನೀಡಿರೋ ಅವರು, ‘ಇಷ್ಟು ದೂರ ಕರ್ಕೊಂಡು ಬಂದಿದ್ದೀರಿ. ಮನಸ್ಸಲ್ಲಿ ಜಾಗ ಕೊಟ್ಟಿದ್ದೀರಿ. ಕೈ ಮೇಲೆ ಹಚ್ಚೆ ಹಾಕಿಸ್ಕೊಂಡಿದ್ದೀರಿ. ನಿರಂತರವಾಗಿ ಬೆಂಬಲಿಸಿದ್ದೀರಿ. ಇದುವರೆಗೂ ಬರಿ ರನ್ನರ್ ಅಪ್ ಆಗೇ ಉಳ್ಕೊತಿದ್ದ ಗಿಲ್ಲಿಗೆ ಗೆಲುವಿನ ಕಿರೀಟ ತೊಡಿಸಿದ್ದೀರಿ, ಮೆರೆಸಿದ್ದೀರಿ. ಈ ಪ್ರೀತಿಗೆ ಏನು ಹೇಳಿದ್ರು, ಎಷ್ಟು ಹೇಳಿದ್ರು ಕಡಿಮೇನೆ’ ಎಂದಿದ್ದಾರೆ ಅವರು. ‘ಈ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ , ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’ ಎಂದು ಬರೆಯಲಾಗಿದೆ. ಈ ಸಾಲು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಗಿಲ್ಲಿ ‘ಬಡವ’ ಕಾರ್ಡ್ ಬಳಸಿ ಗೆದ್ದ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಸಹ ಸ್ಪರ್ಧಿ ಅಭಿಷೇಕ್

‘ಗಿಚ್ಚಿ ಗಿಲಿಗಿಲಿ’ ಶೋ ಬರುತ್ತಿದೆ. ಅದರಲ್ಲಿ ಗಿಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಈ ಶೋಗೆ ಅವರು ನಿರೂಪಣೆ ಮಾಡಬೇಕು ಎಂಬ ಬೇಡಿಕೆಯೂ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:38 am, Thu, 22 January 26