AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿಗೆ 50 ಲಕ್ಷ ರೂ. ಬಹುಮಾನ ಲಭಿಸಿದೆ. ಆದರೆ ಈ ಸಂಪೂರ್ಣ ಮೊತ್ತ ಅವರ ಕೈ ಸೇರುವುದಿಲ್ಲ. ಮನರಂಜನಾ ಬಹುಮಾನಗಳ ಮೇಲೆ ದೊಡ್ಡ ಮೊತ್ತದ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ, ಗಿಲ್ಲಿಗೆ ಸಿಗೋ ಮೊತ್ತ ತುಂಬಾನೇ ಕಡಿಮೆ. ಅವರಿಗೆ ಸಿಗೋ ಹಣದ ವಿವರ ಇಲ್ಲಿದೆ.

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು
ಗಿಲ್ಲಿ-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 19, 2026 | 10:14 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಅವರು ದೊಡ್ಮನೆಯಲ್ಲಿ ಮೊದಲ ದಿನದಿಂದಲೂ ಮನರಂಜನೆ ನೀಡುತ್ತಾ ಬಂದರು. ಈಗ ಬಿಗ್ ಬಾಸ್ ಅಲ್ಲಿ ಅವರು ಕಪ್ ಎತ್ತಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ (Gilli Nata) ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆ ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಸಿಕ್ಕಿದೆ. ಸುದೀಪ್ 10 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇದರಲ್ಲಿ ಸಂಪೂರ್ಣ ಮೊತ್ತ ಅವರಿಗೆ ಸಿಗೋದಿಲ್ಲ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್’ ಅಲ್ಲಿ ಸ್ಪರ್ಧಿಸಿದರೆ ಸಾಕಷ್ಟು ಜನಪ್ರಿಯತೆ ಸಿಗುತ್ತದೆ. ಅದರಲ್ಲೂ ಗೆದ್ದವರಿಗೆ 50 ಲಕ್ಷ ರೂಪಾಯಿ ಸಿಗುತ್ತದೆ. ಗೆದ್ದ ವ್ಯಕ್ತಿಗೆ ಸಂಪೂರ್ಣ ಹಣ ಸಿಗುವುದಿಲ್ಲ ಎಂಬುದು ಅನೇಕರಿಗೆ ಗೊತ್ತಿಲ್ಲ. ಹೌದು, ಬಿಗ್ ಬಾಸ್ ಪ್ರೈಜ್ ಮೊತ್ತಕ್ಕೆ ಸರ್ಕಾರ ದೊಡ್ಡ ಮೊತ್ತದ ಟ್ಯಾಕ್ಸ್ ಹೇರುತ್ತದೆ. ಆ ಮೊತ್ತ ಕೇಳಿದರೆ ಯಾರಿಗಾದರೂ ಅಚ್ಚರಿ ಆಗುತ್ತದೆ.

ತೆರಿಗೆ ಎಷ್ಟು?

ಮನರಂಜನೆ ಕ್ಷೇತ್ರದಲ್ಲಿ ಸಿಗೋ ಬಹುಮಾನ ಮೊತ್ತಕ್ಕೆ ಸರ್ಕಾರ ಬರೋಬ್ಬರಿ ಶೇ. 30ರಷ್ಟು ಟ್ಯಾಕ್ಸ್ ವಿಧಿಸುತ್ತದೆ. ಬರುವ ಒಟ್ಟೂ ಹಣದಲ್ಲಿ ಶೇ. 30ರಷ್ಟು ಹಣ ಸರ್ಕಾರಕ್ಕೆ ಟ್ಯಾಕ್ಸ್ ರೂಪದಲ್ಲಿ ಹೋಗುತ್ತದೆ. ಈ ಟ್ಯಾಕ್ಸ್ ಮೊತ್ತವನ್ನು ಸಂಸ್ಥೆಯವರು ಕಡಿತ ಮಾಡಿಯೇ ವಿಜೇತರಿಗೆ ನೀಡುತ್ತಾರೆ. ಹೀಗಾಗಿ ಗಿಲ್ಲಿಗೆ ಈ ಹಣದಲ್ಲಿ ಸಿಗೋದು ಕೇವಲ 35 ಲಕ್ಷ ರೂಪಾಯಿ. ಗಿಲ್ಲಿಗೆ ಸುದೀಪ್ ಘೋಷಿಸಿರೋ 10 ಲಕ್ಷಕ್ಕೂ ಈ ಟ್ಯಾಕ್ಸ್ ಅನ್ವಯ ಆಗುತ್ತದೆಯೇ ಎಂಬ ಸ್ಪಷ್ಟನೆ ಇಲ್ಲ.

ಇದನ್ನೂ ಓದಿ: ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ ಟಿವಿ ರಿಯಾಲಿಟಿ ಶೋ, ಲಾಟರಿ, ಸ್ಪರ್ಧೆ, ಕಾರ್ಡ್​ ಗೇಮ್​ನಲ್ಲಿ ಆಡಿ ಗೆದ್ದಲ್ಲಿ ಶೇ. 30 ತೆರಿಗೆ ಪಾವತಿಸಬೇಕು. ಕನಿಷ್ಠ 10 ಸಾವಿರ ರೂಪಾಯಿ ಇಂದ ಈ ತೆರಿಗೆ ಅನ್ವಯ ಆಗುತ್ತದೆ. ಅಂದರೆ ನೀವು ಮನರಂಜನಾ ಕ್ಷೇತ್ರದಲ್ಲಿ 10 ಸಾವಿರ ಬಹುಮಾನ ಗೆದ್ದರೆ ಮೂರು ಸಾವಿರ ಕಟ್ ಆಗಿ, 7 ಸಾವಿರ ಮಾತ್ರ ಕೈ ಸೇರುತ್ತದೆ.

ಉಳಿದ ಸ್ಪರ್ಧಿಗಳಿಗೂ ಇದು ಅನ್ವಯ

ಕೇವಲ ಗಿಲ್ಲಿ ಮಾತ್ರವಲ್ಲದೆ ರನ್ನರ್ ಅಪ್​ ಆದ ರಕ್ಷಿತಾ ಅವರೂ ತೆರಿಗೆ ಹಣ ಪಾವತಿಸಬೇಕು. ಅವರಿಗೆ ಒಟ್ಟೂ 25 ಲಕ್ಷ ರೂಪಾಯಿ ಸಿಕ್ಕಿದ್ದು, ಇದರಲ್ಲಿ ಅವರಿಗೆ 17,50,000 ಮಾತ್ರ ಸಿಗಲಿದೆ. ಉಳಿದ ಮೊತ್ತ ತೆರಿಗೆ ರೂಪದಲ್ಲಿ ಸರ್ಕಾರದ ಕೈ ಸೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Mon, 19 January 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ