AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ; ಸುದೀಪ್ ಎದುರೇ ರಿವೀಲ್

ಬಿಗ್ ಬಾಸ್ ಕನ್ನಡ ಸೀಸನ್ 13ರ ವೀಕೆಂಡ್ ಎಪಿಸೋಡ್‌ನಲ್ಲಿ ಹೊಸ ಪ್ರೇಮಕಥೆಯೊಂದು ಬಯಲಾಗಿದೆ. ಮನೆಯಲ್ಲಿ ಯಶಸ್, ಸೌಂದರ್ಯಾ ಹಾಗೂ ಆಸಿಯಾ ನಡುವೆ ಟ್ರಯಾಂಗಲ್ ಲವ್ ಸ್ಟೋರಿ ನಡೆಯುತ್ತಿದೆ ಎಂದು ಲಿಖಿತ್, ಸುದೀಪ್ ಎದುರೇ ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಆಸಿಯಾ ಶಾಕ್ ಆಗಿದ್ದು, ತಮ್ಮಿಬ್ಬರ ನಡುವೆ ಇರುವುದು ಕೇವಲ ಪ್ಯೂರ್ ಗೆಳೆತನ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ; ಸುದೀಪ್ ಎದುರೇ ರಿವೀಲ್
ಆಸಿಯಾ, ಯಶಸ್, ಸೌಂದರ್ಯಾ
ರಾಜೇಶ್ ದುಗ್ಗುಮನೆ
|

Updated on: Sep 28, 2026 | 6:58 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯಲ್ಲಿ ಶುರುವಾಯ್ತಾ ಟ್ರಯಾಂಗಲ್ ಲವ್ ಸ್ಟೋರಿ?
  • ಸುದೀಪ್ ಎದುರೇ ಸೀಕ್ರೆಟ್ ಓಪನ್
  • ಲಿಖಿತ್ ಬಾಂಬ್‌ಗೆ ಆಸಿಯಾ ಶಾಕ್

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಸೈಲೆಂಟ್ ಆಗಿ ಒಂದು ಪ್ರೇಮಕಥೆ ಶುರುವಾಗಿದೆ. ಅದು ಕೂಡ ಟ್ರಯಾಂಗಲ್. ವೀಕೆಂಡ್ ಎಪಿಸೋಡ್​​ನಲ್ಲಿ ಈ ವಿಷಯ ರಿವೀಲ್ ಆಗಿದೆ. ಇದನ್ನು ಕೇಳಿ ಸುದೀಪ್ ಹಾಗೂ ಇತರರು ಅಚ್ಚರಿಪಟ್ಟರು. ಮುಂದಿನ ದಿನಗಳಲ್ಲಿ ಈ ಪ್ರೇಮಕಥೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ. ಕೆಲವರು ಇದನ್ನು ಒಪ್ಪಿಕೊಂಡರೆ, ಇನ್ನೂ ಕೆಲ ವೀಕ್ಷಕರು ಇದಕ್ಕೆ ಅಸಮ್ಮತಿ ಸೂಚಿಸಿದ್ದಾರೆ.

ಭಾನುವಾರದ ಎಪಿಸೋಡ್ ಸಖತ್ ಫನ್ ಆಗಿರುತ್ತದೆ. ಅದೇ ರೀತಿ ಈ ಭಾನುವಾರದ ಎಪಿಸೋಡ್ ಸಾಕಷ್ಟು ಮನರಂಜನೆಯಿಂದ ಕೂಡಿತ್ತು. ಸುದೀಪ್ ಅವರು ಲಿಖಿತ್ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಲಿಖಿತ್ ಅವರು ನೇರ ಉತ್ತರ ಕೊಟ್ಟರು. ‘ಬಿಗ್ ಬಾಸ್ ಮನೆಯಲ್ಲಿ ಯಾವ ಯಾವ ಟ್ರ್ಯಾಕ್ ಓಡುತ್ತಿದೆ’ ಎಂದು ಕೇಳಲಾಯಿತು. ಇದಕ್ಕೆ ಲಿಖಿತ್ ಕೊಟ್ಟ ಉತ್ತರ ಭಿನ್ನವಾಗಿತ್ತು.

‘ಈ ಮನೆಯಲ್ಲಿ ಟ್ರಯಾಂಗಲ್ ಲವ್ ಸ್ಟೋರಿ ಇದೆ’ ಎಂದು ಲಿಖಿತ್ ಹೇಳಿದರು. ಯಾರದ್ದು ಎಂದು ಕೇಳಿದಾಗ,‘ಯಶಸ್, ಸೌಂದರ್ಯಾ ಹಾಗೂ ಆಸಿಯಾ’ ನಡುವೆ ರೊಮ್ಯಾನ್ಸ್ ನಡೆಯುತ್ತಿದೆ. ಇವರ ಮಧ್ಯೆ ಟ್ರಯಾಂಗಲ್ ಲವ್​ ಸ್ಟೋರಿ ಇದೆ’ ಎಂದು ಹೇಳಿದರು. ಇದನ್ನು ಕೇಳಿ ಆಸಿಯಾ ಶಾಕ್ ಆದರು.

ಆ ಬಳಿಕ ಬ್ರೇಕ್​ನಲ್ಲಿ ಮಾತನಾಡಿದ ಆಸಿಯಾ, ‘ನಾನು ಸರಿ ಇಲ್ಲ. ಈ ರೀತಿ ಚರ್ಚೆ ಆಗೋದು ನನಗೆ ಇಷ್ಟವಿಲ್ಲ. ಹುಡುಗನ ಮನಸ್ಸಿನಲ್ಲಿ ಯಾವುದೇ ಕಲ್ಮಶ ಇಲ್ಲ ಎಂಬ ಕಾರಣಕ್ಕೆ ನಾನು ಮಾತನಾಡಿಸುತ್ತಿದ್ದೇನೆ ಅಷ್ಟೇ’ ಎಂದು ಆಸಿಯಾ ನೇರವಾಗಿ ಹೇಳಿದರು. ಇದು ಫನ್ ವೇದಲ್ಲೇ ನಡೆಯಿತು.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಘಾಟಿ ಗಾನವಿ  ವೈಲ್ಡ್ ಕಾರ್ಡ್ ಎಂಟ್ರಿ; ಇವರ ಸ್ಪೆಷಾಲಿಟಿ ಏನು?

ಮುಂದಿನ ದಿನಗಳಲ್ಲಿ ಇದು ಗಂಭೀರ ಸ್ವರೂಪ ಪಡೆದುಕೊಂಡರೆ ಆಸಿಯಾ ಅವರು ಯಶಸ್ ಜೊತೆ ಮಾತನಾಡುವುದನ್ನು ನಿಲ್ಲಿಸಬಹುದು ಎಂದು ಊಹಿಸಲಾಗಿದೆ. ಇವರ ಮಧ್ಯೆ ಯಾವುದೇ ಗಂಭೀರ ಪ್ರೇಮಕಥೆ ಇಲ್ಲ. ಇವರ ಮಧ್ಯೆ ಇರುವುದು ಪ್ಯೂರ್ ಗೆಳೆತನ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್