ದಿವ್ಯಾ ಉರುಡುಗ-ಅರವಿಂದ್ ಪಾಲಿಗೆ ವಿಶೇಷ ದಿನ; ಕಾರಣ ವಿವರಿಸಿದ ನಟಿ

ಅರವಿಂದ್ ಕೆ.ಪಿ. ಜತೆ ನಿಂತಿರುವ ಫೋಟೋವನ್ನು ದಿವ್ಯಾ ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ ಅವರು ಅರವಿಂದ ತಮ್ಮ ಜೀವನದಲ್ಲಿ ಎಷ್ಟು ಮುಖ್ಯ ಎಂಬ ಬಗ್ಗೆ ಹೇಳಿಕೊಂಡಿದ್ದಾರೆ.

ದಿವ್ಯಾ ಉರುಡುಗ-ಅರವಿಂದ್ ಪಾಲಿಗೆ ವಿಶೇಷ ದಿನ; ಕಾರಣ ವಿವರಿಸಿದ ನಟಿ
ದಿವ್ಯಾ-ಅರವಿಂದ್ ಕೆಪಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 13, 2022 | 6:32 PM

ನಟಿ ದಿವ್ಯಾ ಉರುಡುಗ (Divya Uruduga) ಹಾಗೂ ಅರವಿಂದ್ ಕೆ.ಪಿ. (Aravind Kp) ನಡುವೆ ಒಳ್ಳೆಯ ಬಾಂಡಿಂಗ್ ಇದೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಆರಂಭವಾದ ಇವರ ಪಯಣ ಈಗ ವಿಶೇಷ ಹಂತದಲ್ಲಿದೆ. ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದಾರೆ. ಈ ವಿಚಾರವನ್ನು ದಿವ್ಯಾ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇಂದು (ಜುಲೈ 13) ದಿವ್ಯಾ ಹಾಗೂ ಅರವಿಂದ್ ಪಾಲಿಗೆ ವಿಶೇಷ ದಿನ. ಈ ಬಗ್ಗೆ ದಿವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

2021ರ ಆರಂಭದಲ್ಲಿ ‘ಕನ್ನಡ ಬಿಗ್​ ಬಾಸ್ ಸೀಸನ್ 8’ ಆರಂಭವಾಯಿತು. ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದರಿಂದ ಅವರ ಪರಿಚಯ ಅನೇಕರಿಗೆ ಇತ್ತು. ಕ್ರೀಡೆಯಲ್ಲಿ ಗುರುತಿಸಿಕೊಂಡಿರುವ ಅರವಿಂದ್ ಪರಿಚಯ ಅನೇಕರಿಗೆ ಇರಲಿಲ್ಲ. ಟಾಸ್ಕ್​ ಒಂದರಲ್ಲಿ ಇಬ್ಬರೂ ಒಂದಾದರು. ಅಲ್ಲಿಂದ ಇವರ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಈ ಫ್ರೆಂಡ್​ಶಿಪ್ ಪ್ರೀತಿಗೆ ತಿರುಗಿತು. ಇವರಿಬ್ಬರ ಭೇಟಿಗೆ ಈಗ 500 ದಿನ ತುಂಬಿದೆ. ಈ ವಿಶೇಷ ದಿನಕ್ಕೆ ದಿವ್ಯಾ ಅವರು ಫೋಟೋ ಒಂದನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ
Image
ಒಂದೇ ಸಿನಿಮಾದಲ್ಲಿ ದಿವ್ಯಾ ಉರುಡುಗ-ಅರವಿಂದ್ ಕೆಪಿ; ನಗುವಿನ ಮೂಲಕವೇ ರಿವೀಲ್ ಮಾಡಿದ್ರು ನಟಿ
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
Image
ಯೋಗರಾಜ್​ ಭಟ್​ ಸಿನಿಮಾದಲ್ಲಿ ನಟಿಸೋ ಆಫರ್​ ಗಿಟ್ಟಿಸಿಕೊಂಡ ‘ಬಿಗ್​ ಬಾಸ್’​ ದಿವ್ಯಾ ಉರುಡುಗ
Image
‘ಮದುವೆ ಯಾವಾಗ’ ಎನ್ನುವ ಪ್ರಶ್ನೆಗೆ ದಿವ್ಯಾ ಉರುಡುಗ ಪಕ್ಕದಲ್ಲೇ ನಿಂತು ಉತ್ತರಿಸಿದ ಅರವಿಂದ್​ ಕೆಪಿ

ಅರವಿಂದ್ ಕೆ.ಪಿ. ಜತೆ ನಿಂತಿರುವ ಫೋಟೋವನ್ನು ದಿವ್ಯಾ ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ ಅವರು ಅರವಿಂದ ತಮ್ಮ ಜೀವನದಲ್ಲಿ ಎಷ್ಟು ಮುಖ್ಯ ಎಂಬ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ಅರವಿಂದ್ ಅವರನ್ನು ಭೇಟಿ ಮಾಡಿ 500 ದಿನ ಕಳೆಯಿತು ಎಂದು ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಈ ಫೋಟೋ ನೋಡಿ ದಿವ್ಯಾ ಹಾಗೂ ಅರವಿಂದ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

View this post on Instagram

A post shared by DU✨ (@divya_uruduga)

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ದಿವ್ಯಾ ಉರುಡುಗ-ಅರವಿಂದ್ ಕೆಪಿ; ನಗುವಿನ ಮೂಲಕವೇ ರಿವೀಲ್ ಮಾಡಿದ್ರು ನಟಿ

ಸದ್ಯ, ‘ಕನ್ನಡ ಬಿಗ್ ಬಾಸ್ 9’ ಬಗ್ಗೆ ಚರ್ಚೆ ಶುರುವಾಗಿದೆ. ‘ವಿಕ್ರಾಂತ್ ರೋಣ’ ಚಿತ್ರದ ಪ್ರಚಾರದ ಮಧ್ಯೆ ಸುದೀಪ್ ಅವರು ‘ಕನ್ನಡ ಬಿಗ್ ಬಾಸ್​ 9’ರ ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಕಲರ್ಸ್ ಕನ್ನಡ ಬಿಸ್ನೆಸ್​ ಹೆಡ್ ಪರಮೇಶ್ವರ್​ ಗುಂಡ್ಕಲ್ ಅವರು ಈ ಬಗ್ಗೆ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಹೊಸ ಸೀಸನ್ ಯಾವಾಗ ಆರಂಭ ಆಗಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

Published On - 5:42 pm, Wed, 13 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ