Bigg Boss Kannada Day 1: ಹ್ಯಾಂಡ್ ಶೇಕ್ ಮಾಡಲು ಬಂದ ದಿವ್ಯಾರನ್ನು ಅನಾಮತ್ತು ಎತ್ತಿಕೊಂಡ ಪ್ರಶಾಂತ್ ಸಂಬರಗಿ

ಬಿಗ್​ ಬಾಸ್​ ಮನೆ ಒಳಗೆ ಸೇರಿದ ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆಯುವುದು ಹೊಸದೇನಲ್ಲ. ಈ ಮೊದಲು ಮನೆ ಒಳಗೆ ಹೋದ ಅನೇಕ ನಡುವೆ ಪ್ರೀತಿ ಬೆಳೆದಿದ್ದಿದೆ.

Bigg Boss Kannada Day 1: ಹ್ಯಾಂಡ್ ಶೇಕ್ ಮಾಡಲು ಬಂದ ದಿವ್ಯಾರನ್ನು ಅನಾಮತ್ತು ಎತ್ತಿಕೊಂಡ ಪ್ರಶಾಂತ್ ಸಂಬರಗಿ
ಪ್ರಶಾಂತ್​ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 02, 2021 | 2:09 PM

ಈ ಬಾರಿ ಬಿಗ್​ ಬಾಸ್​ ಮನೆ ಸೇರಿ 17 ಸದಸ್ಯರ ಪೈಕಿ ಒಬ್ಬರಿಗಿಂತ ಒಬ್ಬರು ಭಿನ್ನವಾಗಿದ್ದಾರೆ. ಕೆಲವರು ತುಂಬಾನೇ ಸೈಲೆಂಟ್​, ಇನ್ನೂ ಕೆಲವರು ತುಂಬಾನೇ ವೈಲೆಂಟ್​, ಕೆಲವರು ತುಂಬಾನೇ ಭಾವುಕರಾದರೆ, ಕೆಲವರು ತುಂಬಾನೇ ಸೀರಿಯಸ್​. ಹೀಗಾಗಿ, ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಡ್ರಾಮಾಗಳು ನಡೆದಿವೆ. ಇದರಲ್ಲಿ ಪ್ರಶಾಂತ್​ ಸಂಬರಗಿ ನಡೆದುಕೊಂಡ ರೀತಿ ಕೂಡ ಒಂದು. ಇದು ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಬಿಗ್​ ಬಾಸ್​ ಮನೆ ಒಳಗೆ ಸೇರಿದ ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆಯುವುದು ಹೊಸದೇನಲ್ಲ. ಈ ಮೊದಲು ಮನೆ ಒಳಗೆ ಹೋದ ಅನೇಕ ನಡುವೆ ಪ್ರೀತಿ ಬೆಳೆದಿದ್ದಿದೆ. ಅದೇ ರೀತಿ ಈಗ ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಜತೆ ಆತ್ಮೀಯತೆ ಬೆಳೆಯುತ್ತಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ನಿನ್ನೆ ಪ್ರಶಾಂತ್​ ಅವರಿಗೆ ದಿವ್ಯಾ ಉರುಡುಗ ಶೇಕ್​ ಹ್ಯಾಂಡ್​ ಮಾಡಲು ಬಂದಿದ್ದರು. ಈ ವೇಳೆ ದಿವ್ಯಾರನ್ನು ಪ್ರಶಾಂತ್​ ಎತ್ತಿಕೊಂಡು ಹೋಗಿದ್ದಾರೆ. ಈ ಬಗ್ಗೆ ದಿವ್ಯಾ ಸ್ವಲ್ಪ ಗಲಿಬಿಲಿಗೊಂಡಂತೆ ಕಂಡರು. ನಂತರ ಇಬ್ಬರೂ ಮನೆ ಒಳಗೆ ಕೂತು ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಹೀಗಾಗಿ, ಇಬ್ಬರೂ ತುಂಬಾನೇ ಆತ್ಮೀಯರಾಗುತ್ತಿದ್ದಾರೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರೇಕ್ಷಕರ ಗಮನವನ್ನು ತಮ್ಮತ್ತ ಸೆಳೆದುಕೊಳ್ಳಲು ಸಂಬರಗಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಯಾರು ಈ ಪ್ರಶಾಂತ್​ ಸಂಬರಗಿ? ಈ ಬಾರಿಯ ಕನ್ನಡ ಬಿಗ್​ಬಾಸ್​ಗೆ ಹೋದ ಸೆಲೆಬ್ರೆಟಿಸ್​ಗಳ ಪಟ್ಟಿಯಲ್ಲಿ ಎದ್ದು ಕಾಣುತ್ತಿರುವ ಹೆಸರೆಂದರೆ ಅದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ. ಏಕೆಂದರೆ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ವಿಚಾರದ ಬಗ್ಗೆ ವಿವಾದ ಹುಟ್ಟುಹಾಕಿ ಸದಾ ಸುದ್ದಿಯಾಗುವ ಸಂಬರಗಿ, ಈಗ ಬಿಗ್​ಬಾಸ್ ಮನೆಗೆ ಹೋಗಿ ಮತ್ತ್ಯಾವ ವಿವಾದ ಸೃಷ್ಟಿಸುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದು ಕುಳಿತ್ತಿದ್ದಾರೆ. ಮೂಲತಃ ಬೆಳಗಾವಿಯವರಾಗಿರುವ ಸಂಬರಗಿ, ಬೆಳೆದಿದ್ದು ಬೆಂಗಳೂರಿನಲ್ಲಿ. ಪ್ರಶಾಂತ್ ಉದ್ಯಮಿ ಆಗಿದ್ದು, ಅರ್ಜುನ್ ಸರ್ಜಾ ಅವರಿಗೆ ಆಪ್ತರಾಗಿದ್ದಾರೆ. ಅಲ್ಲದೆ ಡಬ್ಬಿಂಗ್ ಪರ ಹೋರಾಡಿದವರಲ್ಲಿ ಪ್ರಶಾಂತ್ ಕೂಡ ಪ್ರಮುಖರು. ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಸೀಸನ್ 8ರ 14ನೇ ಅಭ್ಯರ್ಥಿಯಾಗಿ ಮನೆ ಪ್ರವೇಶಿಸಿದ್ದರು.

 ಇದನ್ನೂ ಓದಿ: Prashanth Sambargi Profile: ಸದಾ ವಿವಾದಗಳ ಬೆನ್ನತ್ತುವ ಪ್ರಶಾಂತ್ ಸಂಬರಗಿ ಈ ಬಾರಿಯ ಬಿಗ್​ಬಾಸ್​ ಸ್ಪರ್ಧಿ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ