AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ಸೋಮಣ್ಣ ಮದುವೆ: ಪ್ರಿಯಕರ ವರುಣ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ

ಬಿಗ್ ಬಾಸ್ ಖ್ಯಾತಿಯ ನಟಿ ಸ್ಪಂದನಾ ಸೋಮಣ್ಣ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ಪ್ರಿಯಕರ ವರುಣ್ ಮುನಿರಾಜು ಜೊತೆಗೆ ಸ್ಪಂದನಾ ಅವರ ವಿವಾಹ ಸಮಾರಂಭ ನೆರವೇರಿದೆ. ಮೈಸೂರಿನಲ್ಲಿ ಇಂದು (ನವೆಂಬರ್ 29) ಅದ್ದೂರಿಯಾಗಿ ಮದುವೆ ನಡೆದಿದ್ದು, ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿವೆ.

ಸ್ಪಂದನಾ ಸೋಮಣ್ಣ ಮದುವೆ: ಪ್ರಿಯಕರ ವರುಣ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ
Spandana Somanna, Varun Muniraju
ಮದನ್​ ಕುಮಾರ್​
|

Updated on: Nov 29, 2026 | 11:17 AM

Share

ಕಿರುತೆರೆಯ ಖ್ಯಾತ ನಟಿ, ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಸ್ಪಂದನಾ ಸೋಮಣ್ಣ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ವರುಣ್ ಮುನಿರಾಜು ಜೊತೆ ಸ್ಪಂದನಾ ಅವರು ಸಪ್ತಪದಿ ತುಳಿದಿದ್ದಾರೆ. ಮೈಸೂರಿನಲ್ಲಿ ಅದ್ದೂರಿಯಾಗಿ ಅವರ ಮದುವೆ ನಡೆದಿದೆ. ಚಿತ್ರರಂಗ ಹಾಗೂ ಕಿರುತೆರೆಯ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಈ ಮದುವೆಗೆ ಸಾಕ್ಷಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ವಿಡಿಯೋಗಳು ವೈರಲ್ ಆಗಿದ್ದು, ಕಮೆಂಟ್​ಗಳ ಮೂಲಕ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಹಲವು ವರ್ಷಗಳಿಂದ ಸ್ಪಂದನಾ ಮತ್ತು ವರುಣ್ ಅವರು ಪ್ರೀತಿಸುತ್ತಿದ್ದರು. ಆದರೆ ಅವರು ಆ ವಿಚಾರವನ್ನು ಗೌಪ್ಯವಾಗಿಟ್ಟಿದ್ದರು. ಕಳೆದ ಕೆಲವು ತಿಂಗಳ ಹಿಂದೆ ಸ್ಪಂದನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಾಗ ಅಭಿಮಾನಿಗಳಿಗೆ ಅನುಮಾನ ಮೂಡಿತ್ತು. ನಂತರ ಅವರು ವರುಣ್ ಜೊತೆಗಿನ ಫೋಟೋ ಹಂಚಿಕೊಂಡು ಪ್ರೀತಿಯ ವಿಷಯವನ್ನು ಬಹಿರಂಗಪಡಿಸಿದ್ದರು.

‘ಕರಿಮಣಿ’ ಸೀರಿಯಲ್ ಮೂಲಕ ಸ್ಪಂದನಾ ಅವರು ಫೇಮಸ್ ಆದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಮದುವೆಗೂ ಮುನ್ನ ಮೈಸೂರಿನಲ್ಲಿ ಸ್ಪಂದನಾ-ವರುಣ್ ಅವರ ಆರತಕ್ಷತೆ ಸಮಾರಂಭ ನಡೆಯಿತು. ಬಿಗ್ ಬಾಸ್ ಸ್ಪರ್ಧಿಗಳಾದ ಗಿಲ್ಲಿ ನಟ, ಕಾವ್ಯಾ ಶೈವ, ಮ್ಯೂಟಂಟ್ ರಘು, ರಾಶಿಕಾ ಶೆಟ್ಟಿ, ಜಾಹ್ನವಿ, ‘ಕರಿಮಣಿ’ ನಟ ಅಶ್ವಿನ್, ಡಾಗ್ ಸತೀಶ್, ರಮೇಶ್ ಪಂಡಿತ್ ಸೇರಿದಂತೆ ಅನೇಕರು ಬಂದು ಶುಭ ಹಾರೈಸಿದರು.

ಇದನ್ನೂ ಓದಿ: ಸ್ಪಂದನಾ ಸೋಮಣ್ಣ ಅವರ ಪ್ರೀ ವೆಡ್ಡಿಂಗ್ ಫೋಟೋ ವೈರಲ್

ಹಳದಿ ಮತ್ತು ಸಂಗೀತ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆಯಿತು. ಅದರ ವಿಡಿಯೋ ಮತ್ತು ಫೋಟೋಗಳನ್ನು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಆರು ವರ್ಷಗಳಿಂದ ಪ್ರೀತಿಸುತ್ತಿದ್ದ ವರುಣ್ ಹಾಗೂ ಸ್ಪಂದನಾ ಕಳೆದ ಅಕ್ಟೋಬರ್‌ನಲ್ಲಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದರು. ಪ್ಯಾರಿಸ್‌ನ ಐಫೆಲ್ ಟವರ್ ಎದುರು ಪ್ರಪೋಸ್ ಮಾಡಿದ್ದ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More