AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಿನೇಷನ್ ಬಗ್ಗೆ ಗಗನ್-ತಾಂಡವ್ ಓಪನ್ ಟಾಕ್; ಮೊದಲ ವಾರವೇ ಕಿಚ್ಚನ ಕ್ಲಾಸ್ ಫಿಕ್ಸ್

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ನಿಯಮ ಮೀರಿ ಗಗನ್ ಹಾಗೂ ತಾಂಡವ್ ಮುಕ್ತವಾಗಿ ಚರ್ಚೆ ನಡೆಸಿದ್ದಾರೆ. ಮಾಡರ್ನ್ ಮಹಾಕವಿ ಮಂಜು ಅವರನ್ನು ನಾಮಿನೇಟ್ ಮಾಡಲು ಇಬ್ಬರೂ ಮಾಸ್ಟರ್ ಪ್ಲಾನ್ ಹೆಣೆದಿದ್ದಾರೆ. ನಿಯಮ ಬ್ರೇಕ್ ಮಾಡಿರುವ ಇಬ್ಬರಿಗೂ ಮೊದಲ ವಾರವೇ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಳ್ಳುವುದು ಖಚಿತ ಎನ್ನಲಾಗಿದೆ.

ನಾಮಿನೇಷನ್ ಬಗ್ಗೆ ಗಗನ್-ತಾಂಡವ್ ಓಪನ್ ಟಾಕ್; ಮೊದಲ ವಾರವೇ ಕಿಚ್ಚನ ಕ್ಲಾಸ್ ಫಿಕ್ಸ್
ತಾಂಡವ್- ಗಗನ್
ರಾಜೇಶ್ ದುಗ್ಗುಮನೆ
|

Updated on: Sep 09, 2026 | 12:10 PM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮೂಲ ನಿಯಮ ಬ್ರೇಕ್
  • ಗಗನ್-ತಾಂಡವ್ ಮಾಸ್ಟರ್ ಪ್ಲ್ಯಾನ್ ಲೀಕ್
  • ನಾಮಿನೇಷನ್‌ಗೆ ಸೀಕ್ರೆಟ್ ಗೇಮ್

ಬಿಗ್ ಬಾಸ್ ಮನೆಯಲ್ಲಿ ಹಲವು ನಿಯಮಗಳಿವೆ. ಅದರಲ್ಲೂ ಮೂಲ ನಿಯಮ ಎಂಬುದು ಬಂದಾಗ ಅದನ್ನು ಕಟ್ಟುನಿಟ್ಟಾಗಿ ಫಾಲೋ ಮಾಡಲೇಬೇಕು. ಆದರೆ, ಅನೇಕ ಬಾರಿ ಅದು ಫಾಲೋ ಆಗೋದಿಲ್ಲ. ಇದರಿಂದ ಸ್ಪರ್ಧಿಗಳು ಕಿಚ್ಚನಿಂದ ಕ್ಲಾಸ್ ತೆಗೆದುಕೊಳ್ಳಬೇಕಾಗುತ್ತದೆ. ಈಗ ಗಗನ್ ಚಿನ್ನಪ್ಪ ಹಾಗೂ ತಾಂಡವ್ ರಾಮ್​ಗೆ ಇದೇ ತೊಂದರೆ ಉಂಟಾಗುವ ಸೂಚನೆ ಸಿಕ್ಕಿದೆ. ಅವರು ಮೂಲ ನಿಯಮವನ್ನು ಬ್ರೇಕ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಯಾರನ್ನು ನಾಮಿನೇಟ್ ಮಾಡಬೇಕು ಎಂಬುದು ಅವರವರ ನಿರ್ಧಾರಕ್ಕೆ ಬಿಟ್ಟಿದ್ದು. ಅದು ಸಂಪೂರ್ಣವಾಗಿ ವೈಯಕ್ತಿಕ ನಿರ್ಧಾರ ಆಗಿರಬೇಕು. ಆದರೆ, ಗಗನ್ ಅವರು ಆ ರೀತಿ ಮಾಡಿಲ್ಲ. ಈ ವಾರ ಯಾರನ್ನು ನಾಮಿನೇಟ್ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದಕ್ಕೆ ಹಲವರನ್ನು ಒಲಿಸಬೇಕು ಎಂಬ ಪ್ಲ್ಯಾನ್ ಮಾಡಿಕೊಂಡಿದ್ದಾರೆ.

‘ನೀನು ಯಾರನ್ನು ನಾಮಿನೇಟ್ ಮಾಡ್ತೀಯಾ’ ಎಂದು ತಾಂಡವ್ ಬಳಿ ಗಗನ್ ಕೇಳಿದ್ದಾರೆ. ಇದಕ್ಕೆ ಮಾಡರ್ನ್ ಮಹಾಕವಿ ಮಂಜು ಹೆಸರನ್ನು ತೆಗೆದುಕೊಂಡಿದ್ದಾರೆ ತಾಂಡವ್. ಅವರ ಹೆಸರನ್ನು ಎಲ್ಲರೂ ಸೂಚಿಸುವಂತೆ ಸಂಗೀತಾ ಮೊದಲಾದವರನ್ನು ಒಲಿಸಬೇಕು ಎಂದು ಇಬ್ಬರೂ ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ

ಈ ವೀಕೆಂಡ್​​ನಲ್ಲಿ ಕಿಚ್ಚ ಸುದೀಪ್ ಅವರು ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬಹುದು ಎಂದು ಎಲ್ಲರೂ ಊಹಿಸಿದ್ದಾರೆ. ಮೊದಲ ವಾರವೇ ಅವರು ಕಠಿಣ ಪಾಠ ಕಲಿತುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಗಗನ್ ಹಾಗೂ ತಾಂಡವ್ ತಾವೇ ಒಂದು ತಂಡ ಮಾಡಿಕೊಂಡಿದ್ದಾರೆ. ಇಬ್ಬರೂ ಇಡೀ ಮನೆಯಲ್ಲಿ ಗೇಮ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈಗ ಗಗನ್ ಹಾಗೂ ತಾಂಡವ್ ಮಾಡಿರೋ ಪ್ಲ್ಯಾನ್ ಅವರಿಗೆ ಬ್ಯಾಕ್​ಫೈಯರ್ ಆಗುವ ಸೂಚನೆ ಸಿಕ್ಕಿದೆ. ಇದಕ್ಕೆ ವೀಕೆಂಡ್​ವರೆಗೆ ಕಾಯಲೇಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ