AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ನಡುವೆ ಡಿಸೆಂಬರ್ 19ರ ಸಂಚಿಕೆಯಲ್ಲಿ ದೊಡ್ಡ ಕಿರಿಕ್ ನಡೆದಿತ್ತು. ಕಾವ್ಯಾ ಅವರು ಗಿಲ್ಲಿಗೆ ಗಂಭೀರವಾಗಿ ವಾರ್ನ್ ಮಾಡಿದ್ದು, "ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ" ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ
ಕಾವ್ಯಾ-ಗಿಲ್ಲಿ
ರಾಜೇಶ್ ಹೆಗಡೆ ದುಗ್ಗುಮನೆ
|

Updated on:Dec 20, 2025 | 12:59 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಯಾವಾಗಲೂ ಗಂಭೀರವಾಗಿಯೇ ಕಿರಿಕ್​​ಗಳು ಆಗುತ್ತಾ ಇರುತ್ತವೆ. ಕಾವ್ಯಾ ಆಗಾಗ ಗಿಲ್ಲಿ ಮೇಲೆ ರೇಗಾಡುತ್ತಾರೆ. ಆದರೆ, ಗಿಲ್ಲಿ ಮಾತ್ರ ಯಾವಾಗಲೂ ಕಾವ್ಯಾ ಮೇಲೆ ಕೋಪ ತೋರಿಸಿಲ್ಲ. ಈಗ ಡಿಸೆಂಬರ್ 19ರ ಎಪಿಸೋಡ್​ನಲ್ಲಿ ಗಿಲ್ಲಿಗೆ ಕಾವ್ಯಾ ಅವರು ಗಂಭೀರವಾಗಿಯೇ ವಾರ್ನ್ ಮಾಡಿದ್ದಾರೆ. ಆದರೆ, ಗಿಲ್ಲಿ ಇದನ್ನು ಹಗುರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಗಿಲ್ಲಿ ನಟ ಅವರು ಬಿಗ್ ಬಾಸ್​ಗೆ ಬಂದಾಗ ಕಾವ್ಯಾ ಜೊತೆ ಜಂಟಿ ಆದರು. ಕೆಲ ವಾರ ಇಬ್ಬರೂ ಒಟ್ಟಿಗೆ ಇರಬೇಕಾಯಿತು. ಬಿಗ್ ಬಾಸ್​ ಹೊರಗೂ ಇವರ ಪರಿಚಯ ಇದ್ದಿದ್ದರಿಂದ ಕೆಮಿಸ್ಟ್ರಿ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿತು. ಒಬ್ಬರಿಗೊಬ್ಬರು ಬೆಂಬಲ ನೀಡುತ್ತಾ ಸಾಗುತ್ತಿದ್ದಾರೆ. ಆದರೆ, ನಂತರದ ದಿನಗಳಲ್ಲಿ ಚಿತ್ರಣ ಬದಲಾಗಿದೆ.

ಕಾವ್ಯಾ ಅವರು ಅನೇಕ ಬಾರಿ ಗಿಲ್ಲಿ ಮೇಲೆ ರೇಗಾಡಿದ್ದಾರೆ. ಗಿಲ್ಲಿ ಅವರು ನಡೆದುಕೊಳ್ಳುವ ರೀತಿ ಕಾವ್ಯಾಗೆ ಇಷ್ಟ ಆಗೋದಿಲ್ಲ. ಇದನ್ನು ನೇರವಾಗಿ ಹೇಳಿದಾಗ ಅವರು ತಿದ್ದಿಕೊಳ್ಳೋದಿಲ್ಲ. ಡಿಸೆಂಬರ್ 19ರ ಎಪಿಸೋಡ್​ನಲ್ಲಿ ಏರು ಧ್ವನಿಯಲ್ಲಿ ಮಾತನಾಡಿದ್ದು ಸರಿ ಅಲ್ಲ ಎಂಬುದನ್ನು ಚಾಕೋಲೇಟ್ ನೀಡಿ ಇತರ ಸ್ಪರ್ಧಿಗಳಿಗೆ ಹೇಳಬೇಕಿತ್ತು. ಗಿಲ್ಲಿ ಅವರು ಕಾವ್ಯಾಗೆ ಈ ಮಾತನ್ನು ಹೇಳಿದರು. ಹೋಗುವಾಗ ಗಿಲ್ಲಿ ಅವರು ಕಾವ್ಯಾಗೆ ಕೈ ಕೊಡೋ ಪ್ರಯತ್ನ ಮಾಡಿದರು. ಆದರೆ, ಅವರು ಕೇರೇ ಮಾಡದೇ ಹೋದರು. ಇದು ಕೂಡ ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ಒಂದಲ್ಲಾ ಒಂದು ದಿನ ನಾನು ದೊಡ್ಡ ಸೆಲೆಬ್ರಿಟಿ ಆಗ್ತೀನಿ ಎಂದಿದ್ದ ಗಿಲ್ಲಿ ನಟ

ನಂತರ ಕಾವ್ಯಾ ಮೊಟ್ಟೆಯನ್ನು ತೆಗೆದುಕೊಳ್ಳಲು ಗಿಲ್ಲಿ ಹೋದರು. ಇದು ಕಾವ್ಯಾಗೆ ಕೋಪ ತರಿಸಿದೆ. ‘ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ’ ಎಂದು ನೇರವಾಗಿಯೇ ಹೇಳಿದ್ದಾರೆ. ಇದಕ್ಕೆ ಗಿಲ್ಲಿ ವಿರೋಧ ಹೊರಹಾಕಿಲ್ಲ. ‘ನಾನು ಇದಕ್ಕೆ ವಿರೋಧ ಹೊರಹಾಕಲ್ಲ. ನನಗೆ ಮಾನ-ಮರ್ಯಾದೆ ಇದೆ ಎಂದು ಒಪ್ಪಿಕೊಂಡಿದ್ದೀನಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Sat, 20 December 25

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ