AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಈ ಮನೆಯಲ್ಲಿ ಇರಲು ಅರ್ಹರಲ್ಲ’ ಎಂದು ಲಿಖಿತ್‌ಗೆ ಬಿಗ್ ಬಾಸ್ ವೇದಿಕೆಯಲ್ಲಿ ಸುದೀಪ್ ಕ್ಲಾಸ್

ಬಿಗ್ ಬಾಸ್ ಮನೆಯಲ್ಲಿ ನಿಷ್ಕ್ರಿಯರಾಗಿರುವ ಸ್ಪರ್ಧಿ ಲಿಖಿತ್ ಅವರಿಗೆ ನಿರೂಪಕ ಕಿಚ್ಚ ಸುದೀಪ್ ವಾರಾಂತ್ಯದ ಪಂಚಾಯಿತಿಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ ಉಡಾಫೆಯಿಂದ ವರ್ತಿಸುತ್ತಿರುವ ಲಿಖಿತ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಸುದೀಪ್, ಬೇರೆಯವರ ಅವಕಾಶ ಕಸಿದುಕೊಂಡಿದ್ದೀರಾ ಹಾಗೂ ನೀವು ಈ ಮನೆಯಲ್ಲಿರಲು ಅರ್ಹರಲ್ಲ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.

'ನೀವು ಈ ಮನೆಯಲ್ಲಿ ಇರಲು ಅರ್ಹರಲ್ಲ' ಎಂದು ಲಿಖಿತ್‌ಗೆ ಬಿಗ್ ಬಾಸ್ ವೇದಿಕೆಯಲ್ಲಿ ಸುದೀಪ್ ಕ್ಲಾಸ್
LikhitImage Credit source: Colors Kannada
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 03, 2026 | 10:49 PM

Share

‘ಬಿಗ್ ಬಾಸ್ ಕನ್ನಡ’ ವಾರಾಂತ್ಯದ ಪಂಚಾಯಿತಿಯಲ್ಲಿ ನಿರೂಪಕ ಕಿಚ್ಚ ಸುದೀಪ್ ಅವರು ಸ್ಪರ್ಧಿ ಲಿಖಿತ್ ಅವರ ನಡೆ ಹಾಗೂ ಆಟದ ವೈಖರಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮನೆಯಲ್ಲಿ ಸರಿಯಾಗಿ ತೊಡಗಿಸಿಕೊಳ್ಳದೆ, ಜವಾಬ್ದಾರಿಯಿಲ್ಲದೆ ವರ್ತಿಸುತ್ತಿರುವ ಲಿಖಿತ್‌ಗೆ ಸುದೀಪ್ ನೇರವಾಗಿಯೇ ಕ್ಲಾಸ್ ತೆಗೆದುಕೊಂಡಿದ್ದು, ‘ನೀವು ಈ ಮನೆಯಲ್ಲಿ ಇರಲು ಅರ್ಹರಲ್ಲ’ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.

‘ಈ ಅವಕಾಶ ಬೇರೆಯವರಿಗೆ ಕೊಡಬಹುದಿತ್ತಲ್ಲ’

ಕಿಚ್ಚ ಸುದೀಪ್ ಅವರು ಲಿಖಿತ್ ಅವರ ಉಡಾಫೆಯಾಟ ಹಾಗೂ ನಿಷ್ಕ್ರಿಯತೆಯನ್ನು ಪ್ರಶ್ನಿಸುತ್ತಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಎಲ್ಲೂ ಸರಿಯಾದ ಸೂಕ್ತ ಕಾರಣಗಳನ್ನು ನೀಡಲ್ಲ. ತಮಾಷೆಯಾಗಿ ಇರಿ ಅಂದರೆ ಸರ್ಕ್ಯಾಸ್ಟಿಕ್ ಆಗಿ ಮಾತನಾಡುತ್ತೀರಾ. ನಿಮ್ಮನ್ನು ಎಷ್ಟು ಗಂಭೀರವಾಗಿ ಸ್ವೀಕರಿಸಬೇಕು? ಅಷ್ಟು ಒದ್ದಾಡಿ, ಕಷ್ಟಪಟ್ಟು ಈ ಮನೆಗೆ ಬಂದಿದ್ದೀರಲ್ಲ… ಸುಮ್ಮನೆ ನಿಲ್ಲುತ್ತೀರಾ, ನಿಮ್ಮ ಇಷ್ಟ ಬಂದಾಗ ಇರುತ್ತೀರಾ ಅಂದರೆ ಅಲ್ಲಿಗೆ ಯಾಕೆ ಹೋದ್ರಿ? ಬೇರೆಯವರ ಅವಕಾಶವನ್ನು ಕಸಿದುಕೊಂಡಿದ್ದೀರಾ ಅಷ್ಟೇ’ ಎಂದು ಸುದೀಪ್ ಲಿಖಿತ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಸುದೀಪ್ ಅವರ ಖಡಕ್ ಪ್ರಶ್ನೆಗಳಿಗೆ ಕಂಗಾಲಾದ ಲಿಖಿತ್, ತಮ್ಮ ವರ್ತನೆಗೆ ಸಮಜಾಯಿಷಿ ನೀಡಲು ಯತ್ನಿಸಿದರು. ತಮಗೆ ವಾದ ಮಾಡಲು ಅಥವಾ ಸನ್ನಿವೇಶಗಳನ್ನು ಎದುರಿಸಲು ಸಾಧ್ಯವಾಗದೆ ತಲೆ ಬ್ಲ್ಯಾಂಕ್ ಆಗುತ್ತದೆ ಎಂದು ಲಿಖಿತ್ ನೀಡಿದ ಸಬೂಬು ಸುದೀಪ್ ಅವರ ಕೋಪವನ್ನು ಮತ್ತಷ್ಟು ಹೆಚ್ಚಿಸಿತು.

‘ನೀವು ಈ ಮನೆಯಲ್ಲಿ ಇರಲು ಅರ್ಹರಲ್ಲ’

ಲಿಖಿತ್ ಅವರ ಈ ಉತ್ತರದಿಂದ ತೃಪ್ತರಾಗದ ಸುದೀಪ್, ಬಿಗ್ ಬಾಸ್ ವೇದಿಕೆಯಲ್ಲೇ ಅವರಿಗೆ ಕಠಿಣ ಮಾತುಗಳಿಂದ ಎಚ್ಚರಿಕೆ ನೀಡಿದರು. ‘ನೀವು ಈ ಮನೆಯಲ್ಲಿ ಇರಲು ಅರ್ಹರಲ್ಲ. ಹೆಂಗಿದ್ದೀರೋ ಹಾಗೇ ಇರಿ’ ಎಂದು ನೇರವಾಗಿಯೇ ಹೇಳುವ ಮೂಲಕ ಲಿಖಿತ್ ಅವರ ಗೇಮ್ ಪ್ಲಾನ್ ಮತ್ತು ಮನಸ್ಥಿತಿಯನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪುರುಷ ಸ್ಪರ್ಧಿಗಳಿಗೆ ಹೊಡೆದು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ಆಸಿಯಾ ನಿರ್ಧಾರ

ಸಾವಿರಾರು ಜನರು ಬಿಗ್ ಬಾಸ್ ಮನೆಗೆ ಹೋಗಲು ಕಾಯುತ್ತಿರುವಾಗ, ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದ ಲಿಖಿತ್ ಅವರ ಈ ನಡೆಗೆ ವೀಕ್ಷಕರಿಂದಲೂ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಕಿಚ್ಚನ ಈ ಖಡಕ್ ಎಚ್ಚರಿಕೆಯ ನಂತರವಾದರೂ ಲಿಖಿತ್ ತಮ್ಮ ಆಟದ ಶೈಲಿಯನ್ನು ಬದಲಾಯಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:38 pm, Sat, 3 October 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ