AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜತ್ ಹಾಗೂ ಚೈತ್ರಾನ ಎಲಿಮಿನೇಟ್ ಮಾಡಲು ಕಾರಣ ಕೊಟ್ಟ ಸುದೀಪ್

ಬಿಗ್ ಬಾಸ್ ಕನ್ನಡ ಮನೆಯಿಂದ ರಜತ್ ಮತ್ತು ಚೈತ್ರಾ ಕುಂದಾಪುರ ಅನಿರೀಕ್ಷಿತವಾಗಿ ಎಲಿಮಿನೇಟ್ ಆಗಿದ್ದಾರೆ. ವೋಟಿಂಗ್ ಇಲ್ಲದೆ ನಡೆದ ಈ ನಿರ್ಗಮನಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ಅವರಿಬ್ಬರೂ ಮನೆಯ ಅತಿಥಿಗಳಾಗಿದ್ದು, ಸ್ಪರ್ಧಿಗಳಿಗೆ ಸ್ಫೂರ್ತಿ ನೀಡಲು ಬಂದಿದ್ದರು. ಅತಿಥಿಗಳಾಗಿದ್ದರೂ ಇಬ್ಬರೂ ಉತ್ತಮವಾಗಿ ಆಟವಾಡಿದ್ದಾರೆ ಎಂದಿದ್ದಾರೆ ಸುದೀಪ್.

ರಜತ್ ಹಾಗೂ ಚೈತ್ರಾನ ಎಲಿಮಿನೇಟ್ ಮಾಡಲು ಕಾರಣ ಕೊಟ್ಟ ಸುದೀಪ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Dec 22, 2025 | 10:25 AM

Share

ಬಿಗ್ ಬಾಸ್ ಮನೆಯಲ್ಲಿ ರಜತ್ ಹಾಗೂ ಚೈತ್ರಾ ಕುಂದಾಪುರ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಾರ ಯಾವುದೇ ವೋಟಿಂಗ್ ಲೈನ್ ತೆಗೆದಿರಲಿಲ್ಲ. ಆದಾರೂ ಇಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಬಾರಿಯ ಬಿಗ್ ಬಾಸ್ ‘ಎಕ್ಸ್​​ಪೆಕ್ಟ್​ ದಿ ಅನ್​ ಎಕ್ಸ್​​ಪೆಕ್ಟೆಡ್’ ಥೀಮ್​​ನಲ್ಲಿ ಮೂಡಿ ಬಂದಿದೆ. ಊಹಿಸದ ರೀತಿಯಲ್ಲಿ ಕಳೆದ ವಾರ ರಜತ್ ಹಾಗೂ ಚೈತ್ರಾ ಮನೆಯಿಂದ ಹೊರ ಹೋಗಿದ್ದಾರೆ. ಇವರ ಎಲಿಮಿನೇಷನ್​​ಗೆ ಕಾರಣ ಏನು ಎಂಬುದನ್ನು ಸುದೀಪ್ ತಿಳಿಸಿದ್ದಾರೆ.

ರಜತ್ ಹಾಗೂ ಚೈತ್ರಾ ಮೊದಲು ಅತಿಥಿಯಾಗಿ ಬಂದರು. ನಂತರ ಅವರನ್ನು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂದು ಪರಿಗಣಿಸಿ ಬಿಗ್ ಬಾಸ್ ಮನೆಯಲ್ಲೇ ಇಟ್ಟುಕೊಳ್ಳಾಯಿತು. ಅವರು ಸ್ಪರ್ಧಿಗಳಲ್ಲ, ಅತಿಥಿಗಳು ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇತ್ತು. ಆದರೆ, ಯಾರೊಬ್ಬರಿಂದಲೂ ಸ್ಪಷ್ಟನೆ ಸಿಕ್ಕಿರಲಿಲ್ಲ. ಸುದೀಪ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಜತ್ ಹಾಗೂ ಚೈತ್ರಾ ಆಟವನ್ನು ಸುದೀಪ್ ಹೊಗಳಿದ್ದಾರೆ.

‘ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಒಂದು ಸ್ಫೂರ್ತಿ ಬರಲಿ ಎಂಬ ಕಾರಣಕ್ಕೆ ನಾವು ಇಬ್ಬರನ್ನು ವೈಲ್ಡ್ ಕಾರ್ಡ್ ಆಗಿ ತಂದೆವು. ಆದರೆ, ಅವರು ಅತಿಥಿಗಳು ಅಷ್ಟೇ. ಮನೆಯಲ್ಲಿ ಇದ್ದಷ್ಟೂ ದಿನ ಈ ವಿಷಯವನ್ನು ಅವರು ಹೇಳಿಲ್ಲ. ಅತಿಥಿ ಎಂಬುದು ಅವರಿಗೆ ಗೊತ್ತಿದ್ದ ಕಾರಣ ಎಲ್ಲರ ಜೊತೆ ಒಳ್ಳೆಯ ರೀತಿಯಲ್ಲಿ ಇರಲು ಪ್ರಯತ್ನಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಲೇ ಇಲ್ಲ. ಚೆನ್ನಾಗಿ ಆಡಿದರು’ ಎಂದು ಸುದೀಪ್ ಮೆಚ್ಚುಗೆ ಸೂಚಿಸಿದರು. ಅವರ ಬಂದ ಕೆಲಸ ಮುಗಿದಿದ್ದರಿಂದ ಹೊರಕ್ಕೆ ಕರೆಸಲಾಯಿತು.

ಇದನ್ನೂ ಓದಿ: ಬಿಗ್​​ಬಾಸ್ ಕನ್ನಡ 12: ವೋಟಿಂಗ್ ಇಲ್ಲದೆ ಇಬ್ಬರು ಹೊರಕ್ಕೆ: ಯಾರದು? ಈ ರೀತಿಯ ಅವಕಾಶ ಸಿಗೋದು ತುಂಬಾನೇ ಅಪರೂಪ. ಚೈತ್ರಾ ಹಾಗೂ ರಜತ್ ಇಂತಹ ಅವಕಾಶ ಪಡೆದು ಖುಷಿಯಾಗಿದ್ದಾರೆ. ಅವರು ತಮ್ಮ ನೂರರಷ್ಟು ಎಫರ್ಟ್​ನ ಹಾಕಿದ್ದಾರೆ. ರಜತ್ ಅವರು ಸಾಕಷ್ಟು ಜನರ ಬಳಿ ಕಿತ್ತಾಟ ಮಾಡಿಕೊಂಡಿದ್ದಾರೆ. ಚೈತ್ರಾ ಇರುವಷ್ಟೇ ದಿನದಲ್ಲಿ ಕಳಪೆ, ಉತ್ತಮ ಪಡೆದಿದ್ದೂ ಅಲ್ಲದೆ ಕ್ಯಾಪ್ಟನ್ ಕೂಡ ಆಗಿದ್ದಾರೆ. ಇದು ಅವರು ಮಾಡಿದ ಅಪರೂಪದ ಸಾಧನೆ ಎಂದರೂ ತಪ್ಪಾಗಲಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:14 am, Mon, 22 December 25

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ