AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಸರ್, ನೀವು ಹೇಳಿದ್ದೇನು? ಆಗುತ್ತಿರುವುದೇನು: ಸಂಗೀತಾ ಸಹೋದರ ಪ್ರಶ್ನೆ

Bigg Boss: ಬಿಗ್​ಬಾಸ್ ಮನೆಯಲ್ಲಿ ಹಿಂಸಾತ್ಮಕ ಪ್ರವೃತ್ತಿ ಹೆಚ್ಚಾಗಿದೆ. ವಿನಯ್ ಹಾಗೂ ತಂಡದ ಕೃತ್ಯದಿಂದ ಸಂಗೀತಾ ಗಾಯಗೊಂಡಿದ್ದಾರೆ. ಇದೀಗ ಸಂಗೀತಾರ ಸಹೋದರ, ಬಿಗ್​ಬಾಸ್ ಮನೆಯಲ್ಲಿನ ಸುರಕ್ಷತೆ ಬಗ್ಗೆ ಸುದೀಪ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಸುದೀಪ್ ಸರ್, ನೀವು ಹೇಳಿದ್ದೇನು? ಆಗುತ್ತಿರುವುದೇನು: ಸಂಗೀತಾ ಸಹೋದರ ಪ್ರಶ್ನೆ
ಸಂಗೀತಾ ಶೃಂಗೇರಿ
ಮಂಜುನಾಥ ಸಿ.
|

Updated on:Dec 09, 2023 | 2:57 PM

Share

ಬಿಗ್​ಬಾಸ್ ಕನ್ನಡ ಸೀಸನ್ 10ರ (Bigg Boss) ಇತ್ತೀಚೆಗಿನ ಎಪಿಸೋಡ್​ಗಳ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಸ್ಪರ್ಧಿಗಳು ಹಿಂಸಾತ್ಮಕವಾಗಿ ವರ್ತಿಸುತ್ತಿದ್ದಾರೆ, ಪರಸ್ಪರರ ಬಗ್ಗೆ ಕಠೋರ ಮಾತುಗಳನ್ನಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಇದರ ನಡುವೆ ಇತ್ತೀಚೆಗಿನ ಟಾಸ್ಕ್ ಒಂದರಲ್ಲಿ ಎದುರಾಳಿ ಸ್ಪರ್ಧಿಗಳು ಹಿಂಸಾತ್ಮಕವಾಗಿ ಆಡಿದ ಕಾರಣ ಸಂಗೀತಾ ಹಾಗೂ ಡ್ರೋನ್ ಪ್ರತಾಪ್​ ಅವರುಗಳಿಗೆ ಗಾಯವಾಗಿದೆ. ಈ ಬಗ್ಗೆ ಸಂಗೀತಾರ ಸಹೋದರ ಸುದೀಪ್​ ಅವರನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನೆ ಮಾಡಿದ್ದಾರೆ.

‘‘ಕಿಚ್ಚ ಸುದೀಪ್, ಬಿಗ್​ಬಾಸ್ ಮನೆ ಸ್ವರ್ಗದಷ್ಟೆ ಸುರಕ್ಷಿತವಾದದ್ದು, ಯಾವ ಕಾರಣಕ್ಕೂ ಅಪಾಯಕ್ಕೆ ಆಸ್ಪದವೇ ಇಲ್ಲ ಎಂದು ನೀವು ಭರವಸೆ ನೀಡಿದ್ದಿರಿ. ಆದರೆ ನೀವು ಕೊಟ್ಟ ಭರವಸೆಯನ್ನು ಈಗ ಬಿಗ್​ಬಾಸ್ ಮನೆಯೊಳಗೆ ನಡೆದಿರುವ ಘಟನೆಗಳು ಮುರಿದು ಹಾಕಿವೆ. ಒಂದೊಮ್ಮೆ ಕೌಟುಂಬಿಕ ಕಾರ್ಯಕ್ರಮ ಆಗಿದ್ದ ಬಿಗ್​ಬಾಸ್ ಈಗ ಆಕ್ರಮಣಕಾರಿ ಮತ್ತು ತಡೆಯಿಲ್ಲದ ಹಿಂಸೆಗೆ ವೇದಿಕೆ ಆದಂತಾಗಿದೆ. ಕುಟುಂಬಗಳು ಆತಂಕದಲ್ಲಿವೆ. ಹೇಗೆತಾನೆ ನಾವು ಒಟ್ಟಿಗೆ ಕೂತು ಈ ಆಕ್ರಮಣಶೀಲತೆ, ಹಿಂಸೆಯನ್ನು ನೋಡಲು ಸಾಧ್ಯ’’ ಎಂದು ಪ್ರಶ್ನೆ ಮಾಡಿದ್ದಾರೆ ಸಂಗೀತಾರ ಸಹೋದರ ಸಂತೋಷ್ ಕುಮಾರ್.

ಮುಂದುವರೆದು, ಕಲರ್ಸ್ ಕನ್ನಡ ಚಾನೆಲ್​ ಅನ್ನು ಸಹ ಪ್ರಶ್ನೆ ಮಾಡಿರುವ ಸಂತೋಷ್ ಕುಮಾರ್, ‘‘ಮನೆಯಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಹರಿಸಲು, ಬುದ್ಧಿಹೇಳಲು ಸುದೀಪ್ ಅವರೇ ಬರಬೇಕು ಎಂದು ಕಾಯುವುದು ಏಕೆ? ಸ್ಪರ್ಧಿಗಳು ಮಾಡಿದ ತಪ್ಪನ್ನು ಸ್ಥಳದಲ್ಲಿಯೇ ಬಿಗ್​ಬಾಸ್ ಸರಿ ಮಾಡಬಹುದಲ್ಲವೇ? ಏಕೆ ಮಾಡುತ್ತಿಲ್ಲ’’ ಎಂದು ಸಹ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:ಈ ವಾರ ಬಿಗ್​ಬಾಸ್ ಮನೆಯಲ್ಲಿ ಅತಿ ಹೆಚ್ಚು ಮತ ಗಳಿಸಿರುವುದು ಯಾರು? ಡ್ರೋನ್ ಪ್ರತಾಪ್​ಗೆ ಎಷ್ಟನೆ ಸ್ಥಾನ?

ಬಿಗ್​ಬಾಸ್ ಮನೆಯಲ್ಲಿ ಈ ವಾರ ಅತಿಯಾದ ಹಿಂಸೆ ನಡೆದಿದೆ. ಕಾರ್ತಿಕ್ ಹಾಗೂ ವಿನಯ್ ಪರಸ್ಪರ ಕೈ-ಕೈ ಮಿಲಾಯಿಸುವ ಹಂತಕ್ಕೆ ಜಗಳವಾಡಿದರು. ಸಂಗೀತಾ-ನಮ್ರತಾ ಜಗಳವೂ ಸಹ ಕರ್ಣ ಕಠೋರವಾಗಿತ್ತು. ಶುಕ್ರವಾರದ ಎಪಿಸೋಡ್​ನಲ್ಲಂತೂ ವಿನಯ್, ಮೈಖಲ್, ನಮ್ರತಾ, ಪವಿ ಹಾಗೂ ವರ್ತೂರು ಅವರುಗಳು ಮಾನವೀಯತೆಯ ಗಡಿ ಮೀರಿ ವರ್ತಿಸಿದರು. ಕುರ್ಚಿಯಲ್ಲಿ ಕೂತಿದ್ದ ಸಂಗೀತಾ ಹಾಗೂ ಡ್ರೋನ್ ಪ್ರತಾಪ್​ರನ್ನು ಎಬ್ಬಿಸಲು ಸೋಲು, ಡೆಟಾಲ್, ಖಾರದ ಪುಡಿ ಇನ್ನಿತರೆ ಬೆರೆಸಿದ ನೀರನ್ನು ಸತತವಾಗಿ ಮತ್ತು ಬಲವಾಗಿ ಎಸೆದರು. ಇದರಿಂದ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಮುಖ, ಕಣ್ಣಿಗೆ ಹಾನಿಯಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು.

ಶನಿವಾರ ಸುದೀಪ್​ ವಾರದ ಪಂಚಾಯ್ತಿ ನಡೆಸಲಿದ್ದಾರೆ. ಟಾಸ್ಕ್​ಗಳಲ್ಲಿ ತಪ್ಪು ಮಾಡಿದವರಿಗೆ ಇಂದು ಶಿಕ್ಷೆಯಾಗುವ ನಿರೀಕ್ಷೆ ಇದೆ. ಜೊತೆಗೆ ಈ ವಾರ ಯಾರು ಹೊರಗೆ ಹೊಗುತ್ತಾರೆ, ಯಾರು ಉಳಿದುಕೊಳ್ಳುತ್ತಾರೆ ಎಂಬ ಕುತೂಹಲಕ್ಕೂ ಅರ್ಧ ಉತ್ತರ ಸಿಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sat, 9 December 23

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್