ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ

Bigg Boss Kannada: ‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Sep 15, 2023 | 7:23 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಹೊಸ ಹೊಸ ಪ್ರೋಮೋಗಳ ಮೂಲಕ ವೀಕ್ಷಕರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಈ ಬಾರಿ ದಶಕದ ಸಂಭ್ರಮ ಆಗಿರುವುದರಿಂದ ಅದ್ದೂರಿಯಾಗಿ ‘ಬಿಗ್ ಬಾಸ್’ ಶೋನ ನಡೆಸಲು ವಾಹಿನಿ ಪ್ಲ್ಯಾನ್ ಮಾಡಿಕೊಂಡಿದೆ. ಈ ಮಧ್ಯೆ ದೊಡ್ಮನೆಗೆ ಬರೋರು ಯಾರು ಎನ್ನುವ ಪ್ರಶ್ನೆ ವೀಕ್ಷಕರಿಗೆ ಮೂಡಿದೆ. ಇದಕ್ಕೂ ದೊಡ್ಡ ಪ್ರಶ್ನೆಯೊಂದು ಕಾಡುತ್ತಿದೆ. ಅದೇನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ.

‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಸಂಜೆ 6:30ಕ್ಕೆ ‘ಕೆಂಡಸಂಪಿಗೆ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಆ ಬಳಿಕ ‘ಭಾಗ್ಯಲಕ್ಷ್ಮಿ’ (7:00) ಹಾಗೂ ‘ಲಕ್ಷ್ಮಿ ಬಾರಮ್ಮ’ (7:30) ಧಾರಾವಾಹಿ ಇದೆ. 8 ಗಂಟೆಗೆ ‘ಗೀತಾ’, 8:30ಕ್ಕೆ ‘ಅಂತರಪಟ’, 9 ಗಂಟೆಗೆ ‘ರಾಮಾಚಾರಿ’, 9:30ಕ್ಕೆ ‘ತ್ರಿಪುರಾ ಸುಂದರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. 10 ಗಂಟೆಗೆ ‘ಕೆಂಡಸಂಪಿಗೆ’ ಧಾರಾವಾಹಿ ಇದೆ. ಯಾವ ಧಾರಾವಾಹಿ ಸಮಯ ಬದಲಾವಣೆ ಮಾಡಲಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

ಭಾಗ್ಯಲಕ್ಷ್ಮಿ ಹಾಗೂ ಲಕ್ಷ್ಮಿ ಬಾರಮ್ಮ ಧಾರಾವಾಹಿಗಳು ಒಳ್ಳೆಯ ಟಿಆರ್​ಪಿ ಹೊಂದಿವೆ. ಹೀಗಾಗಿ ಈ ಧಾರಾವಾಹಿಗಳ ಸಮಯದಲ್ಲಿ ಯಾವುದೇ ವ್ಯತ್ಯಾಸ ಆಗೋದು ಅನುಮಾನ. ಇನ್ನು, ರಾತ್ರಿ 8 ಗಂಟೆ ಅಥವಾ 9 ಗಂಟೆಯಿಂದ ಬಿಗ್ ಬಾಸ್ ಆರಂಭ ಆಗಬಹುದು ಎನ್ನುವ ಊಹೆ ವೀಕ್ಷಕರದ್ದು.

ಇದನ್ನೂ ಓದಿ: ಚಿತ್ರರಂಗ ತೊರೆದು ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡಿದ್ದ ನಟನಿಗೆ ಬಿಗ್ ಬಾಸ್​ನಲ್ಲಿ ಚಾನ್ಸ್?

‘ಬಿಗ್ ಬಾಸ್’ ವೀಕ್ಷಕರ ವರ್ಗ ದೊಡ್ಡದಿದೆ. ಸಾಕಷ್ಟು ಜನರು ಈ ಶೋ ನೋಡುತ್ತಾರೆ. ಪ್ರೋಮೋಗಳ ಮೂಲಕ ವೀಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾ (ಒಟಿಟಿ) ಬಿಗ್ ಬಾಸ್ ಪ್ರಸಾರ ಕಾಣಲಿದೆ. ಸುದೀಪ್ ಅವರು ಶೋನ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ