BBK 11: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಸ್ಪರ್ಧಿಗಳ ಫೋಟೋ ಲೀಕ್

Bigg Boss Kannada Season 11 Contestant List: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆಗಮನಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ರಂದು ಬಿಗ್ ಬಾಸ್​ಗೆ ಅದ್ದೂರಿ ಓಪನಿಂಗ್ ಸಿಗಲಿದೆ. ಈ ಬಾರಿಯೂ 17 ಸ್ಪರ್ಧಿಗಳು ಮನೆ ಸೇರುವ ನಿರೀಕ್ಷೆ ಇದೆ. ಅದಕ್ಕೂ ಮೊದಲು ಸ್ಪರ್ಧಿಗಳ ಮುಖವನ್ನು ಬ್ಲರ್ ಆಗಿ ತೋರಿಸಲಾಗಿದೆ.

BBK 11: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಸ್ಪರ್ಧಿಗಳ ಫೋಟೋ ಲೀಕ್
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Sep 26, 2024 | 12:50 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಇನ್ನು ಉಳಿದಿರೋದು ಮೂರು ದಿನಗಳು ಮಾತ್ರ. ಈ ಬಾರಿ ಯಾವೆಲ್ಲ ಕ್ಷೇತ್ರದ, ಯಾವೆಲ್ಲಾ ಸ್ಪರ್ಧಿಗಳು ಭಾಗವಹಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ಸ್ಪರ್ಧಿಗಳ ಫೋಟೋಗಳು ಲೀಕ್ ಆಗಿವೆ. ಇದನ್ನು ಮಾಡಿದ್ದು ಬೇರಾರೂ ಅಲ್ಲ, ಸ್ವತಃ ಕಲರ್ಸ್​ ಕನ್ನಡದವರೇ. ಅವರು ಕೆಲವು ಸ್ಪರ್ಧಿಗಳ ಬ್ಲರ್ ಫೋಟೋಗಳನ್ನು ಹಂಚಿಕೊಂಡಿದ್ದು, ವೀಕ್ಷಕರ ತಲೆಗೆ ಹುಳಬಿಟ್ಟಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭ ಸೆಪ್ಟೆಂಬರ್ 29ರಂದು ನಡೆಯಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ನಿರ್ಧರಿಸಿದೆ. ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್​ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ.

ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್​’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಇದರಲ್ಲಿ ಬರೋ ಒಂದು ಕ್ಲಿಪ್​ನಲ್ಲಿ  ಕೆಲವು ಸ್ಪರ್ಧಿಗಳ ಫೋಟೋಗಳನ್ನು ತೋರಿಸಲಾಗಿದೆ. ಎಲ್ಲರನ್ನೂ ಬ್ಲರ್ ಮಾಡಲಾಗಿದೆ. ಇದು ವೀಕ್ಷಕರ ತಲೆಗೆ ಹುಳಬಿಟ್ಟಂತೆ ಆಗಿದೆ. ಹೀಗಾಗಿ ಇವರು ಯಾರು ಎಂದು ಊಹಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ:  ಈ ಬಾರಿ ಬಿಗ್ ಬಾಸ್​ನಲ್ಲಿ ಎರಡು ಮನೆ; ಅಪ್​ಡೇಟ್​ ಕೊಟ್ಟ ಸುದೀಪ್ 

ಈ ಬಾರಿ ಬಿಗ್ ಬಾಸ್​​ ವಿಶೇಷವಾಗಿರಲಿದೆ. 11ನೇ ಸೀಸನ್ ಎಂಬ ಕಾರಣಕ್ಕೆ ಅದ್ದೂರಿತನ ಹೆಚ್ಚಿಸಲು ನಿರ್ಧರಿಸಲಾಗಿದೆ. ‘ನರಕ ಹಾಗೂ ಸ್ವರ್ಗ’ ಕಾನ್ಸೆಪ್ಟ್​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಮೂಡಿ ಬರುತ್ತಿದೆ. ಕಿಚ್ಚ ಸುದೀಪ್ ಅವರ ಸಾರಥ್ಯ ಇರಲಿದೆ.

ಸ್ಪರ್ಧಿಗಳ ಮಧ್ಯೆ ಟಫ್ ಸ್ಪರ್ಧೆ

ಕಳೆದ ವರ್ಷ ‘ಬಿಗ್ ಬಾಸ್’ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸ್ಪರ್ಧಿಗಳ ಮಧ್ಯೆ ಸಾಕಷ್ಟು ಟಫ್ ಕಾಂಪಿಟೇಷನ್ ಇತ್ತು. ಹಾಸ್ಯಕ್ಕೆ ಜಾಗ ಇಲ್ಲದೆ, ಎಲ್ಲರೂ ಕಿತ್ತಾಡಿಕೊಂಡಿದ್ದರು. ಈ ಬಾರಿ ಹಾಗಾಗಿದರಲಿ ಎಂಬುದು ಎಲ್ಲರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:44 pm, Thu, 26 September 24

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು