Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಫಿನಾಲೆಗೆ ಇನ್ನೆಷ್ಟು ದಿನ ಬಾಕಿ ಇದೆ? ಮಾಹಿತಿ ಕೊಟ್ಟ ಸುದೀಪ್

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ಚಾಲ್ತಿಯಲ್ಲಿದೆ. ಮನೆಯಲ್ಲಿ ಈಗ 9 ಮಂದಿ ಸ್ಪರ್ಧಿಗಳಿದ್ದಾರೆ. ಈ ವಾರ ಎಲಿಮಿನೇಷನ್ ಸಹ ಆಗುತ್ತಿಲ್ಲ. ಬಿಗ್​ಬಾಸ್ ಪ್ರಾರಂಭವಾಗಿ ಈಗಾಗಲೇ 97 ದಿನಗಳಾಗಿವೆ. ಬಿಗ್​ಬಾಸ್ ಕನ್ನಡ 11 ಫಿನಾಲೆ ಯಾವಾಗ ನಡೆಯಲಿದೆ? ಇಲ್ಲಿದೆ ಮಾಹಿತಿ.

ಬಿಗ್​ಬಾಸ್ ಫಿನಾಲೆಗೆ ಇನ್ನೆಷ್ಟು ದಿನ ಬಾಕಿ ಇದೆ? ಮಾಹಿತಿ ಕೊಟ್ಟ ಸುದೀಪ್
Bigg Boss Kannada 11
Follow us
ಮಂಜುನಾಥ ಸಿ.
|

Updated on: Jan 05, 2025 | 8:01 AM

ಬಿಗ್​ಬಾಸ್ ಕನ್ನಡ ಸೀಸನ್ 11 ಚಾಲ್ತಿಯಲ್ಲಿದೆ. ಸ್ಪರ್ಧಿಗಳು ಉತ್ತಮವಾಗಿ ಆಡುತ್ತಿದ್ದಾರೆ. ಗೆಲ್ಲುವ ಭರವಸೆ ಮೂಡಿಸಿದ್ದ ಕೆಲವರು ಈಗಾಗಲೇ ಮನೆಗೆ ಹೋಗಿದ್ದಾರೆ. ಗೆಲ್ಲುವುದೇ ಇಲ್ಲ ಎಂದುಕೊಂಡಿದ್ದವರು ಕೆಲವರು ಇಲ್ಲಿವರೆಗೆ ಬಂದಿದ್ದಾರೆ. ಬಿಗ್​ಬಾಸ್ ಕನ್ನಡ ಸೀಸನ್ 11, 2024 ರ ಸೆಪ್ಟೆಂಬರ್ 29 ರಂದು ಆರಂಭವಾಗಿತ್ತು. ಶೋ ಆರಂಭವಾಗಿ ಮೂರು ತಿಂಗಳಾಗಿದೆ. ಸರಿಯಾಗಿ ಹೇಳಬೇಕೆಂದರೆ 97 ದಿನಗಳು ಕಳೆದಿವೆ. ಇನ್ನೂ ಒಂಬತ್ತು ಮಂದಿ ಸ್ಪರ್ಧಿಗಳು ಮನೆಯಲ್ಲಿದ್ದಾರೆ. ಈ ಸೀಸನ್​ನ ಫಿನಾಲೆ ಎಂದು ನಡೆಯಲಿದೆ ಎಂಬ ಪ್ರಶ್ನೆ ಎಲ್ಲರಿಗೂ ಇತ್ತು. ಇದಕ್ಕೆ ಈಗ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ.

ಶನಿವಾರದ ಎಪಿಸೋಡ್​ನಲ್ಲಿ ಈ ಬಗ್ಗೆ ಮಾತನಾಡಿದ ಸುದೀಪ್, ಬಿಗ್​ಬಾಸ್ ಫಿನಾಲೆಗೆ ಇನ್ನೆಷ್ಟು ವಾರ ಬಾಕಿ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸುದೀಪ್ ಹೇಳಿರುವಂತೆ ಇನ್ನು ಫಿನಾಲೆಗೆ ಇನ್ನು ಮೂರು ವಾರ ಇದೆಯಂತೆ. ಅಂದರೆ ಇನ್ನು 21 ದಿನದಲ್ಲಿ ಶೋ ಫಿನಾಲೆ ನಡೆದು ಈ ಬಾರಿ ವಿನ್ನರ್ ಯಾರು ಎಂಬುದು ಖಾತ್ರಿ ಆಗಲಿದೆ. ಶೋ ಅಂತ್ಯವಾಗಲಿದೆ, ಮಾತ್ರವಲ್ಲದೆ ಬಿಗ್​ಬಾಸ್ ಜೊತೆ ಸುದೀಪ್​ ಅವರ ಪಯಣವೂ ಅಂತ್ಯವಾಗಲಿದೆ.

ಬಿಗ್​ಬಾಸ್ ಮನೆಯಲ್ಲಿ ಇನ್ನೂ ಒಂಬತ್ತು ಮಂದಿ ಇದ್ದಾರೆ. ಈ ವಾರ ಯಾವುದೇ ಎಲಿಮಿನೇಷನ್ ಇರುವುದಿಲ್ಲ ಏಕೆಂದರೆ ಈ ವಾರ ನಾಮಿನೇಷನ್ ಸಹ ಆಗಿಲ್ಲ. ಫಿನಾಲೆ ವಾರಕ್ಕೆ ಸಾಮಾನ್ಯವಾಗಿ ಐದು ಜನ ಬರುತ್ತಾರೆ. ಹಾಗಾಗಿ ಮುಂದಿನ ವಾರ ಇಬ್ಬರನ್ನು ಎಲಿಮಿನೇಟ್ ಮಾಡುವ ಸಾಧ್ಯತೆ ಇದೆ. ಅದರ ಮುಂದಿನ ವಾರ ಒಬ್ಬರನ್ನು ಎಲಿಮಿನೇಟ್ ಮಾಡಿ ಕೊನೆಯ ವಾರಕ್ಕೆ ಆರು ಅಥವಾ ಐದು ಮಂದಿಯನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ:ಬಿಗ್​ಬಾಸ್ ಕನ್ನಡ: ಮೊದಲ ವಾರ ಎಲಿಮಿನೇಟ್ ಆಗಿದ್ದು ಇವರೇನಾ?

ಬಿಗ್​ಬಾಸ್ ಸೀಸನ್ 11 ಹಲವು ಏರಿಳಿತಗಳನ್ನು ಕಂಡಿದೆ. ಶೋ ಪ್ರಾರಂಭವಾದ ಒಂದೆರಡು ವಾರ ವೀಕ್ಷಕರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಲಾಯರ್ ಜಗದೀಶ್​ರ ಅವಾಚ್ಯ ಶಬ್ದಗಳು, ಪದೇ ಪದೇ ಜಗಳಗಳು ಬೇಸರ ಮೂಡಿಸಿದ್ದವು. ಇದರ ಜೊತೆಗೆ ಬಿಗ್​ಬಾಸ್ ಮನೆಯಲ್ಲಿ ಮಾಡಲಾಗಿದ್ದ ಸ್ವರ್ಗ-ನರಕ ಕಾನ್ಸೆಪ್ಟ್ ಸಹ ತೀವ್ರ ಟೀಕೆಗೆ ಗುರಿಯಾಗಿತ್ತು. ಸ್ಪರ್ಧಿಗಳನ್ನು ಜೈಲಿನಲ್ಲಿ ಇರಿಸುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಪೊಲೀಸರು ಸಹ ಬಿಗ್​ಬಾಸ್ ಸೆಟ್​ಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದರು. ಮಾನವ ಹಕ್ಕು ಆಯೋಗವೂ ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಹಲವು ಅಡೆ-ತಡೆಗಳ ಬಳಿಕ ಇದೀಗ ಇನ್ನು ಮೂರು ವಾರದಲ್ಲಿ ಬಿಗ್​ಬಾಸ್ 11 ರ ಫಿನಾಲೆ ನಡೆಯಲಿದೆ. ಸುದೀಪ್ ಅವರು ಇನ್ನು ಮುಂದೆ ಬಿಗ್​ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಅವರಿಗೆ ಬಿಗ್​ಬಾಸ್ ಹೇಗೆ ಸೆಂಡಾಫ್ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್