‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ

Bigg Boss Kannada Season 11 Winner: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಹನುಮಂತ ಅವರನ್ನು ವಿನ್ನರ್ ಎಂದು ವಿಕಿಪೀಡಿಯಾದಲ್ಲಿ ತಪ್ಪಾಗಿ ಅಪ್ಡೇಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹಲವಾರು ವದಂತಿಗಳು ಹರಡುತ್ತಿದ್ದರೂ, ನಿಜವಾದ ವಿನ್ನರ್ ಯಾರೆಂದು ಶೀಘ್ರದಲ್ಲಿ ತಿಳಿಯಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ
ಹನುಮಂತ
Follow us
ರಾಜೇಶ್ ದುಗ್ಗುಮನೆ
|

Updated on:Jan 26, 2025 | 8:02 PM

‘ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡುತ್ತಿವೆ. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳಿದರೆ, ತ್ರಿವಿಕ್ರಂ ಅವರು ವಿನ್ನರ್ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲಿ ಮಾಹಿತಿ ಅಪ್​ಡೇಟ್ ಮಾಡಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಪ್ರತ್ಯೇಕ ವಿಕಿಪೀಡಿಯಾ ಪೇಜ್ ಕ್ರಿಯೇಟ್ ಆಗಿದೆ. ಮೊದಲ ದಿನದಿಂದ ಹಿಡಿದು, ಇಲ್ಲಿಯವರೆಗೆ ಅಲ್ಲಿ ಯಾರು ಎಲಿಮಿನೇಟ್ ಆದರು, ಯಾರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು ಎಂಬ ಬಗ್ಗೆ ಮಾಹಿತಿಯನ್ನು ಅಪ್​ಡೇಟ್ ಮಾಡುತ್ತಾ ಬರಲಾಗಿದೆ. ವಿನ್ನರ್ ಯಾರು ಎಂದು ಘೋಷಿಸುವ ಕೆಲವೇ ಗಂಟೆಗಳ ಮೊದಲು ವಿಕಿಪೀಡಿಯಾದಲ್ಲಿ ವಿನ್ನರ್ ಹೆಸರನ್ನು ಅಪ್​​ಡೇಟ್ ಮಾಡಲಾಗಿದೆ.

ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಎಂದು ಮಾಹಿತಿ ಬರೆಯಲಾಗಿದೆ. ಮೋಕ್ಷಿತಾ ಅವರು ರನ್ನರ್ ಅಪ್ ಎಂದು ತಿಳಿಸಲಾಗಿದೆ. ಮಂಜು ಅವರು ನಾಲ್ಕನೇ ರನ್ನರ್ ಅಪ್ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಇದನ್ನೂ ಓದಿ: ಬಿಗ್​ಬಾಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಹನುಮಂತು, ರಜತ್, ಭೇಷ್ ಎಂದ ಕಿಚ್ಚ

ಹಾಗಾದರೆ ನಿಜಕ್ಕೂ ಹನುಮಂತ ಅವರೇ ವಿನ್ನರ್? ಈ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ವಿಕಿಪೀಡಿಯಾ ಮಾಹಿತಿಯನ್ನು ಯಾರು, ಹೇಗೆ ಬೇಕಿದ್ದರೂ ಅಪ್​​ಡೇಟ್ ಮಾಡಬುದು. ಹೀಗಾಗಿ, ಇದರಲ್ಲಿ ಇರೋ ಮಾಹಿತಿ ಸಂಪೂರ್ಣ ಸತ್ಯ ಎಂದು ನಂಬಲು ಸಾಧ್ಯ ಇಲ್ಲ. ಅದೇ ರೀತಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ ಎಂಬ ಮಾಹಿತಿಯನ್ನೂ ಈಗಲೇ ನಂಬಲು ಸಾಧ್ಯವಿಲ್ಲ. ಈಗಾಗಲೇ ಭವ್ಯಾ ಅವರು ಎಲಿಮಿನೇಟ್ ಆಗಿದ್ದಾರೆ. ರಜತ್, ಮಂಜು ಹಾಗೂ ಮೋಕ್ಷಿತಾ ಕೂಡ ಎಲಿಮಿನೇಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:36 pm, Sun, 26 January 25

ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು