Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ

Bigg Boss Kannada Jollywood Studios Close: ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ.

Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ
Bigg Boss Kannada 12

Updated on: Oct 07, 2025 | 6:21 PM

ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ (Jollywood Studios) ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ರಾಮನಗರ ತಹಶೀಲ್ದರ್ ತೇಜಸ್ವಿನಿ ಅವರ ಜೊತೆ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಅಧಿಕಾರಿಗಳು ಜಾಲಿವುಡ್​​ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಜಾಲಿವುಡ್​ ಸ್ಟುಡಿಯೋಸ್​ ಇದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದಾರ್​ ಹಾಗೂ ಪೊಲೀಸರ ಸಮ್ಮುಖದಲ್ಲಿ ಬೀಗ ಜಡಿಯಲಾಗಿದೆ.

ಇದೇ ಸ್ಟುಡಿಯೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ನಡೆಯುತ್ತಿದೆ. 17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಜಾಲಿವುಡ್ ಸ್ಟುಡಿಯೋದಿಂದ ಸರಿಯಾದ ರೀತಿಯಲ್ಲಿ ತಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಆಗಿಲ್ಲ ಎಂಬ ಆರೋಪ ಇದೆ. ಆದ್ದರಿಂದ ಬೀಗ ಜಡಿಯಲಾಗಿದ್ದು, ಬಿಗ್ ಬಾಸ್ ಶೋ ಬಂದ್ ಆಗುವ ಸೂಚನೆ ಕಾಣಿಸಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆ ಬಂದ್ ಆಗುತ್ತಾ? ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ

ಬಿಗ್ ಬಾಸ್ ಮನೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ ಅನ್ನು ಜಾಲಿವುಡ್ ಮಾನೇಜ್ಮೆಂಟ್ ಸ್ವೀಕರಿಸಿದೆ. ಸ್ಟುಡಿಯೋದಿಂದ ಜನರನ್ನ ಕಳುಹಿಸುವಂತೆ ತಹಶೀಲ್ದಾರ್​ ಸೂಚಿಸಿದ್ದಾರೆ. ಅದಕ್ಕಾಗಿ ಸಂಜೆ 7.30ರವರೆಗೆ ಸಮಯ ನೀಡಲಾಗಿದೆ. ಬಿಗ್ ಬಾಸ್ ಸ್ಪರ್ಧಿಗಳು ಕೂಡ ಹೊರಬಂದರೆ ರಿಯಾಲಿಟಿ ಶೋ ಸ್ಥಗಿತಗೊಳ್ಳಲಿದೆ.

ಈ ಮೊದಲು 2021ರಲ್ಲಿ ಕೊರನಾ ವೈರಲ್ ಹೆಚ್ಚಾದಾಗ ಕೂಡ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಅದೇ ರೀತಿ ಈಗ ಕಾನೂನಿನ ಉಲ್ಲಂಘನೆ ಕಾರಣದಿಂದ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಬಂದಿದೆ. ಈ ಬಗ್ಗೆ ‘ಕಲರ್ಸ್ ವಾಹಿನಿ’ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:04 pm, Tue, 7 October 25