AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಗೆ ಹೋಗುತ್ತಿರುವವರು ಯಾರು? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ ಭಾನುವಾರ ಪ್ರಾರಂಭ ಆಗಲಿದೆ. ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ಅದ್ಧೂರಿ, ಐಶಾರಾಮಿ ಬಿಗ್​​ಬಾಸ್ ಮನೆ ಸಿದ್ಧವಾಗಿದೆ. 18 ಮಂದಿ ಸ್ಪರ್ಧಿಗಳು ನಾಳೆ ಬಿಗ್​​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಯಾರು ಈ 18 ಮಂದಿ ಸ್ಪರ್ಧಿಗಳು, ಯಾರ್ಯಾರು ಮನೆ ಸೇರಲಿದ್ದಾರೆ. ಇಲ್ಲಿದೆ ನೋಡಿ ಪಟ್ಟಿ...

ಬಿಗ್​​ಬಾಸ್ ಮನೆಗೆ ಹೋಗುತ್ತಿರುವವರು ಯಾರು? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ
Bigg Boss Kannada 12
ಮಂಜುನಾಥ ಸಿ.
|

Updated on: Sep 27, 2025 | 5:35 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ (ಸೆಪ್ಟೆಂಬರ್ 28) ಪ್ರಾರಂಭ ಆಗಲಿದೆ. ಕಿಚ್ಚ ಸುದೀಪ್ ಅವರು ಈ ಬಾರಿಯೂ ಬಿಗ್​​ಬಾಸ್ ನಿರೂಪಣೆ ಮಾಡಲಿದ್ದಾರೆ. ಇನ್ನೊವೇಟಿವ್ ಫಿಲಂ ಸಿಟಿಯಲ್ಲಿ ಅದ್ಧೂರಿಯಾಗಿ ಬಿಗ್​​ಬಾಸ್ ಮನೆ ನಿರ್ಮಾಣ ಮಾಡಲಾಗಿದ್ದು, ಬಿಗ್​​ಬಾಸ್ ಮನೆಯ ಸಣ್ಣ ಝಲಕ್ ಅನ್ನು ಸುದೀಪ್ ಅವರು ಇಂದು ತೋರಿಸಿದ್ದಾರೆ. ಇನ್ನು ಈ ಬಾರಿ 18 ಮಂದಿ ಬಿಗ್​​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಈ ಬಾರಿ ಮನೆ ಪ್ರವೇಶಿಸುವ 18 ಮಂದಿ ಯಾರು? ಇಲ್ಲಿದೆ ಸಂಭಾವ್ಯ ಪಟ್ಟಿ…

ನಟ ಕಾಕ್ರೂಚ್ ಸುಧಿ ಈ ಬಾರಿ ಬಿಗ್​​ಬಾಸ್ ಮನೆ ಪ್ರವೇಶಿಸುವುದು ಬಹುತೇಕ ಖಾತ್ರಿ ಎನ್ನಲಾಗುತ್ತಿದೆ. ಸುಧಿ ಅವರು ಮಾಸ್ಕ್ ಹಾಕಿಕೊಂಡು ತಾವು ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗುತ್ತಿರುವುದಾಗಿ ಜನರಿಗೆ ಹೇಳುತ್ತಿರುವ ವಿಡಿಯೋ ಒಂದು ಈಗಾಗಲೇ ವೈರಲ್ ಆಗಿದೆ. ಚಾನೆಲ್​​ನವರೇ ಹೀಗೊಂದು ವಿಡಿಯೋ ಮಾಡಿಸಿ ಹರಿಬಿಟ್ಟಿದ್ದಾರೆ. ಅಲ್ಲಿಗೆ ಕಾಕ್ರೂಚ್ ಸುಧಿ ಬಿಗ್​​ಬಾಸ್​​ಗೆ ಹೋಗುವುದು ಪಕ್ಕಾ ಎಂದಾಗಿದೆ.

ನಿರ್ಮಾಪಕ ಕೆ ಮಂಜು ಪುತ್ರ, ಹಲವು ಸಿನಿಮಾಗಳಲ್ಲಿ ನಟಿಸಿರುವ ಕೆ ಮಂಜು ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗುವುದು ಪಕ್ಕಾ ಎನ್ನಲಾಗುತ್ತಿದೆ. ‘ಪಡ್ಡೆ ಹುಲಿ’, ‘ರಾಣಾ’ ಮತ್ತು ‘ವಿಷ್ಣು ಪ್ರಿಯ’ ಸಿನಿಮಾಗಳಲ್ಲಿ ಶ್ರೆಯಸ್ ಮಂಜು ನಟಿಸಿದ್ದಾರೆ. ಶಾಂತ ಸ್ವಭಾವದ ಶ್ರೇಯಸ್ ಮಂಜು ಬಿಗ್​​ಬಾಸ್ ಮನೆಯಲ್ಲಿ ಉಳಿದುಕೊಳ್ಳುತ್ತಾರೆಯೇ ಕಾದು ನೋಡಬೇಕು.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ ಸೀಸನ್ 12: ಈ ಬಾರಿಯ ಮನೆ ಹೀಗಿದೆ ನೋಡಿ

ಪ್ರತಿ ಸೀಸನ್​​ನಲ್ಲೂ ಕೆಲ ಹಿರಿಯ ನಟ, ನಟಿಯರನ್ನು ಬಿಗ್​​ಬಾಸ್ ಮನೆಗೆ ಕರೆತರಲಾಗುತ್ತದೆ. ಅಂತೆಯೇ ಈ ಬಾರಿ ಮಂಜು ಭಾಷಿಣಿ ಅವರನ್ನು ಬಿಗ್​​ಬಾಸ್ ಮನೆಗೆ ಕರೆತರಲಾಗಿದೆ. ಹಲವು ಸಿನಿಮಾಗಳು, ಧಾರಾವಾಹಿಗಳಲ್ಲಿ ತಮ್ಮ ಅದ್ಭುತ ನಟನೆಯಿಂದ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಮಂಜು ಭಾಷಿಣಿ ಸಂಪಾದಿಸಿದ್ದಾರೆ.

ನಿರೂಪಕಿ ಆಗಿ ಜನಪ್ರಿಯರಾಗಿರುವ ಜಾಹ್ನವಿ, ‘ಗೀತ’ ಧಾರಾವಾಹಿ ನಾಯಕ ಧನುಷ್ ಗೌಡ , ಹಾಸ್ಯ ನಟ ಗಿಲ್ಲಿ, ನಟಿ ರಾಶಿಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷೆ ಅಶ್ವಿನಿ ಗೌಡ, ಕೊತ್ತಲವಾಡಿ ಸಿನಿಮಾದ ನಟಿ ಕಾವ್ಯ ಶೈವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ಆರ್. ಜೆ ಆಗಿರುವ ಅಮಿತ್, ಡಾಗ್ ಸತೀಶ್ , ನಟಿ ಸ್ಪಂದನ ಸೋಮಣ್ಣ, ನಟಿ ಮೌನ ಗುಡ್ಡೆಮನೆ, ‘ಕೋಟಿ’ ಸಿನಿಮಾದ ವಿಲನ್ ‘ಅಭಿ’ ಇನ್ನೂ ಕೆಲವರು ಈ ಬಾರಿ ಬಿಗ್​​ಬಾಸ್ ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ