AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹಲವು ಸ್ಪರ್ಧಿಗಳು ನಾಮಿನೇಟ್

ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ಮೊದಲ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಇದರಿಂದಾಗಿ ಸ್ಪರ್ಧಿಗಳಿಗೆ ಆತಂಕ ಶುರುವಾಗಿದೆ. ವಿಮಾನದೊಳಗೆ ಉಳಿದುಕೊಂಡಿರುವ ಎಲ್ಲ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ ತಮ್ಮನ್ನು ತಾವು ಬಚಾವ್ ಮಾಡಿಕೊಳ್ಳುವ ಅವಕಾಶ ಕೂಡ ಅವರಿಗೆ ಇದೆ.

ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಹಲವು ಸ್ಪರ್ಧಿಗಳು ನಾಮಿನೇಟ್
BBK 13
ಮದನ್​ ಕುಮಾರ್​
|

Updated on: Sep 08, 2026 | 10:32 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಆರಂಭದಲ್ಲೇ ಕೆಲವು ಸ್ಪರ್ಧಿಗಳಿಗೆ ಢವಢವ ಶುರುವಾಗಿದೆ. ಮೊದಲ ದಿನವೇ ಹಲವರನ್ನು ನಾಮಿನೇಟ್ ಮಾಡಲಾಗಿದೆ. ಮಂಜ, ಅವಿನಾಶ್, ಲಿಖಿತ್, ಧನುಷ್, ಕಿರಣ್ ಶಾಸ್ತ್ರಿ, ವೈಷ್ಣವಿ, ಸೌಂದರ್ಯಾ ಶೆಟ್ಟಿ, ಪ್ರಥಮಾ ಪ್ರಸಾದ್ ಅವರು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಒಬ್ಬರು ಬಿಗ್ ಬಾಸ್ ಮನೆಯೊಳಗೆ ಕಾಲಿಡದೆಯೇ ಎಲಿಮಿನೇಟ್ ಆಗಲಿದ್ದಾರೆ ಎಂದು ಸೂಚನೆ ನೀಡಲಾಗಿದೆ. ಆದ್ದರಿಂದ ವೀಕ್ಷಕರಿಗೂ ಈ ಬಗ್ಗೆ ಭಾರಿ ಕುತೂಹಲ ನಿರ್ಮಾಣ ಆಗಿದೆ.

ಮೊದಲು ಎಲ್ಲರನ್ನೂ ವಿಮಾನದಲ್ಲಿ ಇರಿಸಲಾಗಿತ್ತು. ಬಳಿಕ ಒಂದು ಚಟುವಟಿಕೆ ನೀಡಿ ಕೆಲವರನ್ನು ಬಿಗ್ ಬಾಸ್ ಮನೆಯ ಒಳಗೆ ಕಳಿಸಲಾಯಿತು. ಕಾವ್ಯಾ, ಸಂಗೀತಾ ಭಟ್, ಓಂ ಪ್ರಕಾಶ್ ರಾವ್, ಜಗ್ಗ ಮಮ್ಮಿ, ಗಗನ ಚಿನ್ನಪ್ಪ, ಆಸಿಯಾ, ತಾಂಡವ್ ರಾಮ್, ಯಶಸ್ ಕೃಷ್ಣ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದಾರೆ. ಆದರೆ ಅದರಲ್ಲೂ ಒಂದು ಟ್ವಿಸ್ಟ್ ಇದೆ.

ಒಂದು ವೇಳೆ, ಬಿಗ್ ಬಾಸ್ ಮನೆಗೆ ಈಗಾಗಲೇ ಎಂಟ್ರಿ ಪಡೆದಿರುವ ಸ್ಪರ್ಧಿಗಳು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ವಿಫಲವಾದರೆ ಅಂಥವರನ್ನು ಮತ್ತೆ ವಿಮಾನದ ಒಳಗೆ ಕಳಿಸಲಾಗುತ್ತದೆ. ಆಗ ಅವರು ಕೂಡ ನಾಮಿನೇಟ್ ಆಗುತ್ತಾರೆ. ಅದೇ ರೀತಿ, ವಿಮಾನದಲ್ಲಿ ಇರುವವರು ಚೆನ್ನಾಗಿ ಆಟ ಆಡಿದರೆ ಬಿಗ್ ಬಾಸ್ ಮನೆಯ ಒಳಗೆ ಬರುವ ಅವಕಾಶ ಪಡೆಯುತ್ತಾರೆ.

ಅಗ್ನಿಪರೀಕ್ಷೆ ಮೂಲಕ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿರುವ ಮಂಜ, ಕಿರಣ್ ಶಾಸ್ತ್ರಿ, ಲಿಖಿತ್, ಧನುಷ್ ಅವರು ಇನ್ನೂ ಸರಿಯಾಗಿ ದೊಡ್ಮನೆ ಒಳಗೆ ಕಾಲಿಟ್ಟಿಲ್ಲ. ತಮ್ಮ ಸಾಮರ್ಥ್ಯ ಏನು ಎಂಬುದನ್ನು ನಿರ್ಧರಿಸುವ ಮೊದಲೇ ನಾಮಿನೇಟ್ ಮಾಡಿರುವುದಕ್ಕೆ ಅವರ ಪೈಕಿ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಪ್ರಥಮಾ ಪ್ರಸಾದ್​ಗೆ ಬಾಡಿ ಶೇಮಿಂಗ್ ಮಾಡಿ ವಿವಾದಕ್ಕೆ ಸಿಲುಕಿದ ಕಿರಣ್ ಶಾಸ್ತ್ರಿ

ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಎಲ್ಲ ಸ್ಪರ್ಧಿಗಳು ಕಷ್ಟಪಡಬೇಕಿದೆ. ಅದರಲ್ಲೂ ವಿಮಾನದಲ್ಲೇ ಉಳಿದಿರುವ ಸ್ಪರ್ಧಿಗಳು ಹೆಚ್ಚು ಶ್ರಮ ಹಾಕಬೇಕಿದೆ. ಕೆಲವು ಸ್ಪರ್ಧಿಗಳು ಇನ್ನೂ ಮಾತನಾಡಲು ಆರಂಭಿಸಿಲ್ಲ. ಆದರೆ ಬಿಗ್ ಬಾಸ್ ಮನೆಯಲ್ಲಿ ವಿಳಂಬಕ್ಕೆ ಅವಕಾಶ ಇಲ್ಲ. ನೋಡನೋಡುತ್ತಿದ್ದಂತೆಯೇ ಮೊದಲ ವೀಕೆಂಡ್ ಬಂದೇ ಬರುತ್ತದೆ. ಎಲಿಮಿನೇಷನ್ ಖಂಡಿತವಾಗಿ ನಡೆಯುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ