ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ 13’ ಶುರು; ಅಧಿಕೃತವಾಗಿ ತಿಳಿಸಿದ ಕಿಚ್ಚ ಸುದೀಪ್

ವೀಕ್ಷಕರು ಭಾರಿ ಕಾತರದಿಂದ ಕಾಯುತ್ತಿರುವ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನ ಹೊಸ ಆವೃತ್ತಿ ಸೆಪ್ಟೆಂಬರ್ 6ರಂದು ಶುರು ಆಗಲಿದೆ. ಕಿಚ್ಚ ಸುದೀಪ್ ಅವರು ನಿರೂಪಕನಾಗಿ ಶೋ ನಡೆಸಿಕೊಡಲಿದ್ದಾರೆ. ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ 13’ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಈಗ ಪ್ರೋಮೋ ಬಿಡುಗಡೆ ಆಗಿದೆ.

ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ 13’ ಶುರು; ಅಧಿಕೃತವಾಗಿ ತಿಳಿಸಿದ ಕಿಚ್ಚ ಸುದೀಪ್
Kichcha Sudeep

Updated on: Aug 21, 2026 | 9:31 PM

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಈಗಾಗಲೇ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಾರಿ ಸೆಲೆಬ್ರಿಟಿಗಳ ಜೊತೆಗೆ ಸಾಮಾನ್ಯ ಜನರು ಕೂಡ ಭಾಗವಹಿಸಲಿದ್ದಾರೆ. ಈ ಎಲ್ಲ ಕಾರಣಗಳಿಂದ ಹೊಸ ಸೀಸನ್ ಮೇಲೆ ನಿರೀಕ್ಷೆ ಹೆಚ್ಚಿದೆ. ಕಿಚ್ಚ ಸುದೀಪ್ (Kichcha Sudeep) ಅವರು ನಿರೂಪಣೆ ಮಾಡಲು ಸಜ್ಜಾಗುತ್ತಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಯಾವಾಗ ಶುರು ಆಗಲಿದೆ ಎಂಬುದಕ್ಕೆ ಉತ್ತರ ಸಿಕ್ಕಿದೆ. ಹೊಸ ಪ್ರೋಮೋ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ.

ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಈ ಬಾರಿ ವಿಶೇಷ ಥೀಮ್​ನಲ್ಲಿ ಶೋ ನಡೆಯಲಿದೆ. ಈಗ ಬಿಡುಗಡೆ ಆಗಿರುವ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ವಿಮಾನದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪ್ರೋಮೋ ವೈರಲ್ ಆಗಿದೆ. ‘ಸುದೀಪ್ ಅವರಿಗೋಸ್ಕರ ಈ ಶೋ ನೋಡ್ತೀವಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

‘ಪ್ರತಿಯೊಬ್ಬರಿಗೂ ಹಾರುವ ಕನಸು ಇರುತ್ತದೆ. ಆದರೆ ರೆಕ್ಕೆ ಕಟ್ಟುವ ಅವಕಾಶ ಸಿಗುವುದು ಕೆಲವರಿಗೆ ಮಾತ್ರ. ಇಲ್ಲಿ ಫ್ಲೈಟ್ ಮೋಡ್ ಆನ್ ಆದ್ಮೇಲೆ ಹೊರಗಡೆ ನೆಟ್​ವರ್ಕ್ ಕಟ್ ಆಗುತ್ತದೆ. ನಿಮ್ಮ ನಿಜವಾದ ಕ್ಯಾರೆಕ್ಟರ್ ಹೊರಗೆ ಬರುತ್ತದೆ. ಜರ್ನಿ ನಿಮ್ಮದೇ ಆದರೂ ಟೇಕಾಫ್​ನಿಂದ ಲ್ಯಾಂಡಿಂಗ್​ವರೆಗೂ ನಿಮ್ಮ ನಿಯಂತ್ರಣದಲ್ಲಿ ಯಾವುದೂ ಇರಲ್ಲ’ ಎಂದು ಕಿಚ್ಚ ಸುದೀಪ್ ಅವರು ಈ ಪ್ರೋಮೋದಲ್ಲಿ ಹೇಳಿದ್ದಾರೆ.

ವರ್ಷದಿಂದ ವರ್ಷಕ್ಕೆ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ವ್ಯಾಪ್ತಿ ಹಿರಿದಾಗುತ್ತಲೇ ಇದೆ. ಪ್ರತಿ ಬಾರಿಯೂ ಜನಪ್ರಿಯತೆ ಮತ್ತು ಟಿಆರ್​ಪಿ ಜಾಸ್ತಿ ಆಗುತ್ತಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಕಾಲಿಡುತ್ತಾರೆ ಎಂಬುದನ್ನು ನೋಡುವ ಕುತೂಹಲ ತೀವ್ರಗೊಂಡಿದೆ. ಸೆಪ್ಟೆಂಬರ್ 6ರಂದು ಗ್ರ್ಯಾಂಡ್ ಪ್ರೀಮಿಯರ್ ವೇದಿಕೆಯಲ್ಲಿ ಅದಕ್ಕೆ ಉತ್ತರ ಸಿಗಲಿದೆ.

ಇದನ್ನೂ ಓದಿ: ‘ಬಿಗ್ ಬಾಸ್ 20’ ಟ್ರೇಲರ್: ಈ ಬಾರಿ ಸಲ್ಮಾನ್ ಖಾನ್ ಕೊಡ್ತಾರೆ ‘ಎಕ್ಸ್‌ಟ್ರಾ ಜೀವನ್ ದಾನ್’

ಬಿಗ್ ಬಾಸ್ ಆರಂಭಕ್ಕೂ ಮುನ್ನ ‘ಅಗ್ನಿ ಪರೀಕ್ಷೆ’ ಮೂಲಕ ಜನಸಾಮಾನ್ಯರನ್ನು ಆಯ್ಕೆ ಮಾಡಲಾಗುತ್ತಿದೆ. ಈ ಸಂಚಿಕೆಗಳಲ್ಲಿ ಸಂಗೀತಾ ಶೃಂಗೇರಿ, ಚಂದನ್ ಶೆಟ್ಟಿ, ವಿನಯ್ ಗೌಡ, ಶ್ರುತಿ ಅವರು ತೀರ್ಪುಗಾರರಾಗಿದ್ದಾರೆ. ಅಗ್ನಿ ಪರೀಕ್ಷೆ ನಡೆಸುತ್ತಿರುವ ರೀತಿಯ ಬಗ್ಗೆ ವೀಕ್ಷಕರ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us