AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮತ್ತೆ ಶುರು ಮಾಡೋಣ್ವ’ ಬಿಗ್​​ಬಾಸ್ ಬಾಗಿಲು ತೆರೆದ ಸುದೀಪ್

Bigg Boss Kannada season 13 promo: ಇಂದು (ಜುಲೈ 02) ಸುದೀಪ್ ಅವರ ಮೊದಲ ಪ್ರೋಮೊ ಬಿಡುಗಡೆ ಆಗಿದೆ. ಆ ಮೂಲಕ ಈ ವರ್ಷದ ಬಿಗ್​​ಬಾಸ್​​ಗೆ ಚಾಲನೆ ದೊರೆತಂತಾಗಿದೆ. ಪ್ರತಿ ಬಾರಿಯೂ ಅದ್ಧೂರಿಯಾಗಿ ಬಿಗ್​​ಬಾಸ್ ಪ್ರೋಮೊ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿಯೂ ಅದನ್ನೇ ಪುನರಾವರ್ತಿಸಲಾಗಿದೆ.

‘ಮತ್ತೆ ಶುರು ಮಾಡೋಣ್ವ’ ಬಿಗ್​​ಬಾಸ್ ಬಾಗಿಲು ತೆರೆದ ಸುದೀಪ್
Kichcha Sudeep
ಮಂಜುನಾಥ ಸಿ.
|

Updated on:Aug 02, 2026 | 7:31 PM

Share

ಮುಖ್ಯಾಂಶಗಳು

  • ಬಿಗ್​​ಬಾಸ್ ಕನ್ನಡ ಸೀಸನ್ 13ರ ಪ್ರೋಮೊ ಬಿಡುಗಡೆ ಆಗಿದೆ.
  • ಕಿಚ್ಚ ಸುದೀಪ್, ಈ ಸೀಸನ್​​ನ ಮೊದಲ ಪ್ರೋಮೊನಲ್ಲಿ ಕಾಣಿಸಿಕೊಂಡಿದ್ದಾರೆ.
  • ಬಿಗ್​ಬಾಸ್ ಪ್ರೋಮೊನಲ್ಲಿ ಸುದೀಪ್ ಹೇಳಿರುವುದೇನು? ಮಾಹಿತಿ ಇಲ್ಲಿದೆ.

ಕನ್ನಡದ ಬಲು ಜನಪ್ರಿಯ ರಿಯಾಲಿಟಿ ಶೋ ಬಿಗ್​​ಬಾಸ್ (Bigg Boss) ಈ ವರ್ಷ ತುಸು ಬೇಗನೆ ಶುರುವಾಗುತ್ತಿದೆ. ಪ್ರತಿ ಬಾರಿ ವರ್ಷಾಂತ್ಯಕ್ಕೆ ಶುರು ಆಗುತ್ತಿದ್ದ ಬಿಗ್​​ಬಾಸ್ ರಿಯಾಲಿಟಿ ಶೋ ಈ ಬಾರಿ ತುಸು ಬೇಗನೆ ಶುರು ಆಗಲಿದ್ದು, ಇಂದು (ಜುಲೈ 02) ಸುದೀಪ್ ಅವರ ಮೊದಲ ಪ್ರೋಮೊ ಬಿಡುಗಡೆ ಆಗಿದೆ. ಆ ಮೂಲಕ ಈ ವರ್ಷದ ಬಿಗ್​​ಬಾಸ್​​ಗೆ ಚಾಲನೆ ದೊರೆತಂತಾಗಿದೆ. ಪ್ರತಿ ಬಾರಿಯೂ ಅದ್ಧೂರಿಯಾಗಿ ಬಿಗ್​​ಬಾಸ್ ಪ್ರೋಮೊ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿಯೂ ಅದನ್ನೇ ಪುನರಾವರ್ತಿಸಲಾಗಿದೆ.

ಸುದೀಪ್ ಅವರು ದೊಡ್ಡ ಬಾಗಿಲನ್ನು ತೆರೆದು ಸ್ಟೈಲ್ ಆಗಿ ಎಂಟ್ರಿ ಕೊಡುತ್ತಿರುವ ದೃಶ್ಯ ಪ್ರೋಮೊನಲ್ಲಿದೆ. ಪ್ರೋಮೊನಲ್ಲಿ ಗಮನ ಸೆಳೆಯುತ್ತಿರುವುದು ಹಿನ್ನೆಲೆಯಲ್ಲಿ ಸುದೀಪ್ ಆಡಿರುವ ಮಾತುಗಳು, ‘ಕರ್ನಾಟಕದ ಜನ ಯಾರಿಗಾದರೂ ಕಾದಿದ್ದು ಇತಿಹಾಸದಲ್ಲೇ ಇಲ್ಲ. ಆದರೆ ಪ್ರತಿ ವರ್ಷ ಒಂದು ವಿಷಯಕ್ಕಾಗಿ ಕಾಯುತ್ತಾರೆ’ ಎಂದು ಬಿಗ್​​ಬಾಸ್​​ಗಾಗಿ ವೀಕ್ಷಕರು ಕಾಯುತ್ತಿದ್ದಾರೆ ಎಂದಿದ್ದಾರೆ ಕಿಚ್ಚ.

‘ಒಂದೇ ಮನೆ, ಒಂದು ಅವಕಾಶ, ಕೋಟಿ ಕನಸುಗಳು’ ಎನ್ನುವ ಸುದೀಪ್, ಸ್ಟೈಲ್ ಆಗಿ ‘ಮತ್ತೆ ಶುರುಮಾಡೋಣ್ವ’ ಎಂದು ಬಿಗ್​​ಬಾಸ್​​ನ ಹೊಸ ಸೀಸನ್​​ಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಪ್ರೋಮೊ ಅದ್ಧೂರಿಯಾಗಿಯೂ ಭಿನ್ನವಾಗಿಯೂ ಇದೆ. ಪ್ರೋಮೊನಲ್ಲಿ ಸುದೀಪ್ ಸಖತ್ ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:‘ಬಿಗ್​​ಬಾಸ್’ ಅಪ್​​ಡೇಟ್ ಹೊತ್ತು ಬರುತ್ತಿದ್ದಾರೆ ಕಿಚ್ಚ ಸುದೀಪ್

ಈ ವರ್ಷದ್ದು, 13ನೇ ಸೀಸನ್ ಆಗಿದ್ದು, ಸಾಕಷ್ಟು ಭಿನ್ನತೆಯನ್ನು ಈ ಸೀಸನ್​​ನಲ್ಲಿ ತರುವ ಪ್ರಯತ್ನ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವರ್ಷ ಸಾಮಾನ್ಯರನ್ನು ಸಹ ಬಿಗ್​​ಬಾಸ್ ಮನೆಯ ಒಳಗೆ ಕಳಿಸಲಾಗುತ್ತಿದೆ. ಜೊತೆಗೆ ಪ್ರತಿ ವರ್ಷದಂತೆ ಸಿನಿಮಾ, ಟಿವಿ ಮತ್ತು ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳು ಇದ್ದೇ ಇರಲಿದ್ದಾರೆ. ಸುದೀಪ್ ಸಹ ಪ್ರತಿ ಬಾರಿಯಂತೆ ಈ ಬಾರಿಯೂ ಶೋನ ನಿರೂಪಣೆ ಮಾಡಲಿದ್ದಾರೆ. ಮತ್ತೊಂದು ವಿಶೇಷವೆಂದರೆ ಈ ವರ್ಷ ಒಂದು ತಿಂಗಳು ಮುಂಚಿತವಾಗಿಯೇ ಶೋ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Sun, 2 August 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪಿಎಸ್ಐ ವಿದ್ಯಾಶ್ರೀ, ಕಾನ್ಸ್‌ಟೇಬಲ್ ಪ್ರವೀಣ್ ಅಮಾನತು
ಪಿಎಸ್ಐ ವಿದ್ಯಾಶ್ರೀ, ಕಾನ್ಸ್‌ಟೇಬಲ್ ಪ್ರವೀಣ್ ಅಮಾನತು
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು