AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ನಡೆಸಲು ಇನ್ನೂ ಸಿಕ್ಕಿಲ್ಲ ಸರ್ಕಾರದ ಅನುಮತಿ; ಸಚಿವರು ಹೇಳಿದ್ದೇನು?

ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭ ಆಗಲಿದೆ. ಆದರೆ ಕೆಲವೇ ದಿನಗಳು ಬಾಕಿ ಇದ್ದರೂ ಕೂಡ ಆಯೋಜಕರು ಇನ್ನೂ ಸರ್ಕಾರದಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿ ಗೊತ್ತಾಗಿದೆ. ಈ ಬಗ್ಗೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್’ ನಡೆಸಲು ಇನ್ನೂ ಸಿಕ್ಕಿಲ್ಲ ಸರ್ಕಾರದ ಅನುಮತಿ; ಸಚಿವರು ಹೇಳಿದ್ದೇನು?
Kichcha Sudeep, Ramalinga Reddy
ಮದನ್​ ಕುಮಾರ್​
|

Updated on: Aug 31, 2026 | 6:02 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಕೂಡ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ನಡೆಯಬೇಕಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಶೋ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಆದರೆ ಕಳೆದ ಸೀಸನ್ ವೇಳೆ ಉಂಟಾದ ವಿವಾದದಿಂದ ಈ ಬಾರಿ ಸರ್ಕಾರದ ಅನುಮತಿ ಇನ್ನೂ ಸಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಬಿಗ್ ಬಾಸ್ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದರು. ‘ಬಿಗ್ ಬಾಸ್ ಶೋ ನಡೆಸಲು ಇನ್ನೂ ಅನುಮತಿ ಕೊಟ್ಟಿಲ್ಲ. ಅನುಮತಿ ಕೇಳಿದ್ದಾರಾ ಅಂತ ತಿಳಿದುಕೊಂಡು ಹೇಳುತ್ತೇನೆ’ ಎಂದಿದ್ದಾರೆ ರಾಮಲಿಂಗಾ ರೆಡ್ಡಿ. ‘ಬಿಗ್ ಬಾಸ್ ಆಯೋಜಕರು ಒಂದು ವೇಳೆ ನಿಯಮ ಮೀರಿದರೆ ದಂಡ ಹಾಕಿ’ ಎಂದು ಕೂಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬ ಕಾರಣಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ತೊಂದರೆ ಉಂಟಾಗಿತ್ತು. ನಂತರ ಅದನ್ನು ಸರಿಪಡಿಸಿಕೊಂಡು ಶೋ ಮುಂದುವರಿಸಲಾಗಿತ್ತು. ಈ ಬಾರಿ ಇನ್ನಷ್ಟು ಎಚ್ಚರಿಕೆ ವಹಿಸುವ ಅವಶ್ಯಕತೆ ಇದೆ. ಆದರೆ ಶೋ ಆರಂಭಕ್ಕೆ ಕೆಲವೇ ದಿನಗಳು ಉಳಿದಿರುವಾಗ ಇನ್ನೂ ಸರ್ಕಾರದ ಅನುಮತಿ ಪಡೆದಿಲ್ಲ ಎಂಬ ವಿಷಯ ತಿಳಿದು ಬಂದಿದೆ.

ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಈಗಾಗಲೇ ಸುದೀಪ್ ಅವರ ಪ್ರೋಮೋಗಳು ಬಿಡುಗಡೆ ಆಗಿ ಗಮನ ಸೆಳೆದಿವೆ. ಯಾವೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಇಂಥ ಸಂದರ್ಭದಲ್ಲಿ ಸರ್ಕಾರದ ಅನುಮತಿ ಪಡೆದಿಲ್ಲ ವಿಷಯ ತಿಳಿದು ಅಚ್ಚರಿ ಆಗಿದೆ.

ಇನ್ನೂ ಓದಿ: ಬಿಗ್ ಬಾಸ್ ಧಮಾಕಾ; ಒಂದೇ ವೇದಿಕೆಯಲ್ಲಿ ನಾಲ್ಕು ಭಾರತೀಯ ಚಿತ್ರರಂಗದ ದಿಗ್ಗಜರು

ಈ ಬಾರಿ ಬಿಗ್ ಬಾಸ್ ಮನೆಗೆ ಸೆಲೆಬ್ರಿಟಿಗಳು ಮಾತ್ರವಲ್ಲದೇ ಜನಸಾಮಾನ್ಯರು ಕೂಡ ಎಂಟ್ರಿ ನೀಡಲಿದ್ದಾರೆ. ಅದಕ್ಕಾಗಿ ಈಗಾಗಲೇ ಆಡಿಷನ್ ಮಾಡಲಾಗಿದೆ. ಅಂತಿಮ ಹಂತದ ಆಡಿಷನ್ ಪ್ರಕ್ರಿಯೆಯನ್ನು ‘ಅಗ್ನಿ ಪರೀಕ್ಷೆ’ ಸಂಚಿಕೆಗಳ ಮೂಲಕ ತೋರಿಸಲಾಗಿದೆ. ಅದು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ