AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​

Bigg Boss Kannada Season 8 Elimination: ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದರು. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಲಿದೆ ಎನ್ನಲಾಗಿತ್ತು.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​
ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
TV9 Web
| Edited By: |

Updated on:Jul 25, 2021 | 9:55 PM

Share

ಪ್ರತೀ ವಾರ ಬಿಗ್​ ಬಾಸ್​ ಮನೆಯಲ್ಲಿ ಹೊಸಹೊಸ ಟ್ವಿಸ್ಟ್​ ನೀಡಲಾಗುತ್ತದೆ. ಎಲಿಮಿನೇಷನ್​ ವಿಚಾರದಲ್ಲಿ ಸಾಕಷ್ಟು ಬಾರಿ ವೀಕ್ಷಕರ ಲೆಕ್ಕಾಚಾರ ಉಲ್ಟಾ ಆಗಿದ್ದಿದೆ. ಈ ವಾರದ ಎಲಿಮಿನೇಷನ್​ಗೂ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಬಹುದು ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಯಾರೊಬ್ಬರೂ ಮನೆಯಿಂದ ಈ ವಾರ ಹೊರಹೋಗಿಲ್ಲ. ಆದರೆ, ಮುಂದಿನ ಶನಿವಾರದೊಳಗೆ ಒಬ್ಬರು ಮನೆಯಿಂದ ಹೊರ ಹೋಗುತ್ತಾರೆ ಎಂದರು ಸುದೀಪ್​. 

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದರು. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಲಿದೆ ಎನ್ನಲಾಗಿತ್ತು.

ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಅತ್ಯದ್ಭುತ ಪರ್ಫಾರ್ಮೆನ್ಸ್​ ನೀಡಿ ಕ್ಯಾಪ್ಟನ್​ ಆಗಿದ್ದಾರೆ. ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಆಟವಾಡುತ್ತಿದ್ದಾರೆ. ಹೀಗಾಗಿ, ಅವರು ಸೇವ್​ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಕಳೆದ ವಾರ ಪ್ರಿಯಾಂಕಾ ಎಲಿಮಿನೇಟ್​ ಆದಾಗ ಚಕ್ರವರ್ತಿ ಚಂದ್ರಚೂಡ್​ ನಡೆದುಕೊಂಡಿದ್ದ ರೀತಿ ಅನೇಕರಿಗೆ ಇಷ್ಟವಾಗಿರಲಿಲ್ಲ. ಅವರು ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿದ್ದರು. ಇದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕಾರಣಕ್ಕೆ ಇವರು ಕಡಿಮೆ ವೋಟ್​ ಪಡೆದು ಈ ವಾರ ಬಿಗ್​ ಬಾಸ್​ ಮನೆಯಿಂದ ಮೊದಲು ಎಲಿಮಿನೇಟ್​ ಆಗಲಿದ್ದಾರೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿತ್ತು. ಇವರ ಜತೆ ಪ್ರಶಾಂತ್​ ಹಾಗೂ ಶುಭಾ ಇಬ್ಬರಲ್ಲಿ ಒಬ್ಬರು ಔಟ್​ ಆಗಬಹುದು ಎನ್ನಲಾಗಿತ್ತು. ಆದರೆ, ಈ ಲೆಕ್ಕಾಚಾರ ಉಲ್ಟಾ ಆಗಿದೆ.

ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ನಲ್ಲಿ ಮುಂದುವರಿಯುತ್ತಿದ್ದಾರೆ.

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಈ ವಾರ ಫಿನಾಲೆ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಆಗಸ್ಟ್​ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಅದಕ್ಕೂ ಮೊದಲು ಒಂದು ಡಬಲ್​ ಎಲಿಮಿನೇಷನ್​ ಬಿಗ್​ ಬಾಸ್​ ಮನೆಯಲ್ಲಿ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ, ಬಿಗ್​ ಬಾಸ್​ ಫ್ಯಾನ್ಸ್​ಗೆ ಅಚ್ಚರಿ ಸಿಕ್ಕಿದೆ.

ಇದನ್ನೂ ಓದಿ: ‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

Published On - 9:51 pm, Sun, 25 July 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!